ಮುಡಾ ಕೇಸ್: ಸಿಎಂ ಪತ್ನಿ ವಾಪಾಸ್ ಮಾಡಿದ್ದ 14 ಮುಡಾ ನಿವೇಶನಗಳ ಖಾತೆ ಏನಾಯ್ತು ?

muda sites Case
Spread the love

ಮೈಸೂರು: ರಾಜ್ಯ ರಾಜಕೀಯದಲ್ಲಿ ಮುಡಾ ಹಗರಣ ಸಂಬಂದ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯ ಬೆನ್ನಲ್ಲೇ ಅವರ ಪತ್ನಿ ಸೈಟ್ ವಾಪಾಸ್ ನೀಡಿ ಅಚ್ಚರಿ ಮೂಡಿಸಿದ್ದಾರೆ. ತಮಗೆ ನೀಡಿದ್ದ ಒಟ್ಟು 14ನಿವೇಶನಗಳನ್ನು ವಾಪಾಸ್ ನೀಡಿದ್ದ ಬೆನ್ನಲ್ಲೇ ಇದೀಗ ಆ 14 ನಿವೇಶನಗಳ ಖಾತೆ ರದ್ದಾಗಿದೆ.

ಖುದ್ದು ಸಿಎಂ ಪತ್ನಿ ಪಾರ್ವತಿ ಅವರೇ ಇಂದು(ಅ.01) ಮೈಸೂರಿನ ಉಪನೋಂದಣಿ ಕಚೇರಿಗೆ ತೆರಳಿ ತಮಗೆ ಮಂಜೂರಾಗಿದ್ದ ಒಟ್ಟು 14 ಮುಡಾ ನಿವೇಶನಗಳ ಖಾತೆ ರದ್ದು ಮಾಡಿಸಿದ್ದಾರೆ. ಈ ಬಗ್ಗೆ ಮುಡಾ ಆಯುಕ್ತರಾದ ರಘುನಂದನ್ ಪ್ರತಿಕ್ರಿಯಿಸಿ, 14 ಸೈಟ್​ಗಳು ಮುಡಾಗೆ ವಾಪಸ್​ ಆಗಿದ್ದು, ಈಗ 14 ಸೈಟ್​ಗಳ ಕ್ರಯಪತ್ರ ರದ್ದಾಗಿದೆ. ಪಾರ್ವತಿ ಅವರು ಸ್ವಇಚ್ಛೆಯಿಂದ ಬಂದು ಕೊಟ್ಟಿದ್ದಕ್ಕೆ ನಾವು ಸ್ವೀಕರಿಸಿದ್ದೇವೆ. ಇದನ್ನ ಸರ್ಕಾರದ ಗಮನಕ್ಕೆ ತಂದಿದ್ದೇವೆ ಎಂದು ವಿವರಿಸಿದರು.

ಪಾರ್ವತಮ್ಮ ಸಿದ್ದರಾಮಯ್ಯ ಅವರ ಈಗ ಸ್ವ ಇಚ್ಛೆಯಿಂದ ಸೈಟ್ ವಾಪಸ್ಸು ಕೊಟ್ಟಿದ್ದಾರೆ. ಕಾನೂನು ಪರಿಗಣಿಸಿ ನಾವು ಪಾರ್ವತಮ್ಮ ಅವರ ಹೆಸರಿನಲ್ಲಿ ಇದ್ದ 14 ಸೈಟ್ ಗಳ ಸೆಲ್ ಡೀಡ್ ರದ್ದು ಮಾಡಿದ್ದೇವೆ‌. ಈಗ 14 ನಿವೇಶನ ಮೂಡಾ ವ್ಯಾಪ್ತಿಗೆ ಬಂದಿವೆ, ಈ ಸೈಟ್ ಗಳನ್ನು ಬೇರೆಯವರಿಗೆ ಹಂಚಬಹುದಾ ಅಥವಾ ತನಿಖೆ ಮುಗಿಯುವವರೆಗೂ ಅದನ್ನು ಹಂಚಬಾರದು ಎಂಬ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆಯುತ್ತೇವೆ ಎಂದು ಹೇಳಿದರು.

Leave a Comment

Leave a Reply

Your email address will not be published. Required fields are marked *