ತರಗತಿಯಲ್ಲಿ ಪಾಠ ಕೇಳುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ಬಾಲಕಿ; ದುರಂತ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Heart Attack
Spread the love

ನ್ಯೂಸ್ ಆ್ಯರೋ: ತರಗತಿಯಲ್ಲಿ ಪಾಠ ಕೇಳುತ್ತಿದ್ದಾಗಲೇ ಬಾಲಕಿಯೊಬ್ಬಳು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ರಾಣಿಪೇಟ್‌ನಲ್ಲಿ ಡಿಸೆಂಬರ್ 10 ರಂದು ನಡೆದಿದೆ.

ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ತರಗತಿಯಲ್ಲಿ ಕುಸಿದು ಬಿದ್ದಿರುವುದು ತರಗತಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮೃತ ಬಾಲಕಿಯನ್ನು ಅದ್ವಿತಾ(14) ಎಂದು ಗುರುತಿಸಲಾಗಿದೆ. ಏಕಾಏಕಿ ಕುಸಿದು ಬಿದ್ದ ಬಾಲಕಿಯನ್ನು ತಕ್ಷಣ ಮೆಲ್ವಿಶಾರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಬಾಲಕಿ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಬಾಲಕಿ ಈ ಹಿಂದೆ ಹೃದಯ ಸಂಬಂಧಿ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಳು ಎಂದು ತನಿಖೆಯಿಂದ ತಿಳಿದುಬಂದಿದೆ.

ಕಾವೇರಿಪಾಕ್ಕಂ ಪೊಲೀಸರು ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಮೃತದೇಹವನ್ನು ವಶಪಡಿಸಿಕೊಂಡಿದ್ದು, ವೆಲ್ಲೂರು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

Leave a Comment

Leave a Reply

Your email address will not be published. Required fields are marked *

error: Content is protected !!