ಅಯೋಧ್ಯೆಯ ರಾಮ ಮಂದಿರ ಉದ್ಘಾಟನಾ ದಿನಾಂಕ ಘೋಷಿಸಿದ ಅಮಿತ್ ಷಾ – ಯಾವಾಗ ಲೋಕಾರ್ಪಣೆಯಾಗಲಿದೆ ಗೊತ್ತಾ ಬಹುನಿರೀಕ್ಷಿತ ರಾಮಮಂದಿರ…!?

ಅಯೋಧ್ಯೆಯ ರಾಮ ಮಂದಿರ ಉದ್ಘಾಟನಾ ದಿನಾಂಕ ಘೋಷಿಸಿದ ಅಮಿತ್ ಷಾ – ಯಾವಾಗ ಲೋಕಾರ್ಪಣೆಯಾಗಲಿದೆ ಗೊತ್ತಾ ಬಹುನಿರೀಕ್ಷಿತ ರಾಮಮಂದಿರ…!?

ನ್ಯೂಸ್ ಆ್ಯರೋ : ಬಹುನಿರೀಕ್ಷಿತ ಅಯೋಧ್ಯೆ ರಾಮಮಂದಿರ ನಿರ್ಮಾಣವು 2024ರ ಜನವರಿ 1ಕ್ಕೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಘೋಷಿಸಿದ್ದು, ಅಂದೇ ಮಂದಿರದ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ತ್ರಿಪುರಾದಲ್ಲಿ ಇಂದು ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಗೃಹ ಸಚಿವರು ಈ ಘೋಷಣೆ ಮಾಡಿದ್ದಾರೆ. ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್ ರಾಮಮಂದಿರ ನಿರ್ಮಾಣ ಪ್ರಕರಣಕ್ಕೆ ನ್ಯಾಯಾಲಯಗಳಲ್ಲಿ ಅಡ್ಡಿಪಡಿಸುತ್ತಿದೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ಬಂದಿದೆ ಎಂದು ಅವರು ಹೇಳಿದರು.

ಸ್ವಾತಂತ್ರ್ಯ ಬಂದಾಗಿನಿಂದಲೂ ರಾಮ ಮಂದಿರ ವಿಚಾರವನ್ನು ಕಾಂಗ್ರೆಸ್‌ ತಡೆ ಹಿಡಿದಿತ್ತು. ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ನಂತರವೇ ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿತ್ತು ಮತ್ತು ‘ಭೂಮಿಪೂಜೆ’ಯ ನಂತರ ಮಂದಿರದ ನಿರ್ಮಾಣ ಪ್ರಾರಂಭವಾಗಿದೆ ”ಎಂದು ಅಮಿತ್ ಶಾ ಹೇಳಿದರು.

ಗಮನ ನೀಡಬೇಕಾದ ವಿಷಯವೆಂದರೆ 2024 ರಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ ಮತ್ತು ಎಂಟು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ದೇವಾಲಯವನ್ನು ತೆರೆಯುವುದು ಒಂದು ಮೈಲಿಗಲ್ಲು ಆಗಲಿದೆ. ಪ್ರಧಾನಿ ಮೋದಿ ಅವರು ಆಗಸ್ಟ್ 5, 2020 ರಂದು ದೇವಾಲಯದ ನಿರ್ಮಾಣಕ್ಕಾಗಿ ‘ಭೂಮಿ ಪೂಜೆ’ ನೆರವೇರಿಸಿದ್ದರು.

ಯೋಜನೆಯ ಪ್ರಕಾರ, ರಾಮಮಂದಿರದ ಸುತ್ತಮುತ್ತಲಿನ 70 ಎಕರೆ ಪ್ರದೇಶದಲ್ಲಿ ವಾಲ್ಮೀಕಿ, ಕೇವತ್, ಶಬರಿ, ಜಟಾಯು, ಸೀತಾ, ವಿಘ್ನೇಶ್ವರ (ಗಣೇಶ) ಮತ್ತು ಶೇಷಾವತಾರ (ಲಕ್ಷ್ಮಣ) ದೇವಾಲಯಗಳನ್ನು ಸಹ ನಿರ್ಮಿಸಲಾಗುವುದು. ದೇವಾಲಯದ ವಿಸ್ತೀರ್ಣ ಮತ್ತು ಅದರ ಪ್ರಾಂಗಣ ಸೇರಿದಂತೆ ಒಟ್ಟು ಎಂಟು ಎಕರೆ ಜಾಗವನ್ನು ಸುತ್ತುವರಿದು ಆಯತಾಕಾರದ ಎರಡು ಅಂತಸ್ತಿನ ‘ಪರಿಕ್ರಮ’ ರಸ್ತೆಯನ್ನೂ ನಿರ್ಮಿಸಲಾಗುತ್ತಿದೆ.

Related post

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ.…
ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ…

ನ್ಯೂಸ್ ಆ್ಯರೋ : ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…
ಇಂದು ಕೆಕೆಆರ್ , ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ; ಯಾರಿಗೆ ಒಲಿಯಲಿದ್ದಾಳೆ ವಿಜಯಲಕ್ಷ್ಮೀ..?

ಇಂದು ಕೆಕೆಆರ್ , ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ; ಯಾರಿಗೆ ಒಲಿಯಲಿದ್ದಾಳೆ…

ನ್ಯೂಸ್ ಆರೋ: ಕೋಲ್ಕತ್ತಾದ ಐತಿಹಾಸಿಕ ಮೈದಾನವಾಗಿರುವ ಈಡನ್ ಗಾರ್ಡನ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಪಂದ್ಯ ನಡೆಯಲಿದೆ. ಎಲ್ಲಾ ಕ್ರಿಕೆಟ್ ಅಭಿಮಾನಿಗಳ ಪಂದ್ಯವನ್ನು ನೋಡಲು ಕಾತುರರಾಗಿದ್ದಾರೆ. ಕೆಕೆಆರ್…

Leave a Reply

Your email address will not be published. Required fields are marked *