ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ನೇಣಿಗೆ ಶರಣು; 7ನೇ ತರಗತಿ ವಿದ್ಯಾರ್ಥಿ ತ್ರಿಶಾಲ್ ನಿರ್ಧಾರಕ್ಕೆ ಕಾರಣವೇನು ?
ನ್ಯೂಸ್ ಆ್ಯರೋ: ಕ್ಷುಲ್ಲಕ ಕಾರಣಕ್ಕೆ 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ.
ತ್ರಿಶಾಲ್ (13), ಮೃತ ದುರ್ದೈವಿ. ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರನಾಗಿರುವ ವಿಶಾಲ್ ಸರ್ವೋದಯ ಸ್ಕೂಲ್‌ನಲ್ಲಿ 7ನೇ ತರಗತಿ ಓದುತ್ತಿದ್ದ.
ತಾಯಿ ಶಕುಂತಲಾ ಜೊತೆ ವಿಜಯನಗರದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಶಕುಂತಲಾ ನಟರಾಜ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟ್‌ಗಳನ್ನು ಹಾಕುವ ಮೂಲಕ ಆಗಾಗ್ಗೆ ಸುದ್ದಿಯಾಗುತ್ತಾರೆ.
ಇಂದು ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿದ್ಯಾರ್ಥಿ ಶಾಲಾ ಸಮವಸ್ತ್ರದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು 7ನೇ ತರಗತಿ ವಿದ್ಯಾರ್ಥಿ ತ್ರಿಶಾಲ್ ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ಜೊತೆ ಗಲಾಟೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಡೆತ್ ನೋಟ್ ಇದೆ ಎನ್ನಲಾಗಿದ್ದು ಬಹಿರಂಗಗೊಂಡಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
Leave a Comment