ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ; ಯಾವ ದಿನ, ಯಾವ ಪರೀಕ್ಷೆ?

eXAM
Spread the love

ನ್ಯೂಸ್ ಆ್ಯರೋ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇಂದು ಶಾಲಾ ಶಿಕ್ಷಣ ಇಲಾಖೆಯಿಂದ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.

ಅದರಲ್ಲಿ 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ -1ರ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಿರುವುದಾಗಿ ತಿಳಿಸಿದ್ದಾರೆ.

ಇನ್ನೂ ದಿನಾಂಕ 10-01-2025 ರಂದು ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ -1ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಕಾಗಿದ್ದು , ರಾಜ್ಯದ ಎಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಶಾಲಾ , ಕಾಲೇಜುಗಳ ಪ್ರಕಟಣಾ ಫಲಕದಲ್ಲಿ ಪ್ರಕಟಿಸಲಾಗಿದ್ದೆ. ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ಬಿಡುಗಡೆ ಮಾಡಲಾದ ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು ಮಾಹಿತಿ ನೀಡಲಾಗಿದ್ದೆ. ಕರ್ನಾಟಕ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಗಳು ಇದೀಗ ಬಿಡುಗಡೆ ಆಗಿವೆ.

ಎಸ್ ಎಸ್ ಎಲ್ ಸಿ ಪರೀಕ್ಷೆ -1 ವೇಳಾಪಟ್ಟಿ:

  • ಮಾರ್ಚ್ 21- ಪ್ರಥಮ ಭಾಷೆ
  • ಮಾರ್ಚ್ 24- ಗಣಿತ
  • ಮಾರ್ಚ್ 26- ದ್ವಿತೀಯ ಭಾಷೆ
  • ಮಾರ್ಚ್ 29- ಸಮಾಜ ವಿಜ್ಞಾನ
  • ಏಪ್ರಿಲ್ 2- ವಿಜ್ಞಾನ
  • ಏಪ್ರಿಲ್ 4- ತೃತೀಯ ಭಾಷೆ

ದ್ವೀತಿಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ:

  • ಮಾರ್ಚ್ 1- ಕನ್ನಡ, ಅರೇಬಿಕ್
  • ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
  • ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
  • ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
  • ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ
  • ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ
  • ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
  • ಮಾರ್ಚ್ 13- ಅರ್ಥಶಾಸ್ತ್ರ
  • ಮಾರ್ಚ್ 15- ಇಂಗ್ಲಿಷ್
  • ಮಾರ್ಚ್ 17- ಭೂಗೋಳಶಾಸ್ತ್ರ
  • ಮಾರ್ಚ್ 18- ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
  • ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್
  • ಮಾರ್ಚ್ 20- ಹಿಂದಿ

Leave a Comment

Leave a Reply

Your email address will not be published. Required fields are marked *

error: Content is protected !!