ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ, ಸಿಟಿ ರವಿ ಟ್ವೀಟ್; ಸಚಿವೆ ಬಗ್ಗೆ ಬಿಜೆಪಿ ಎಂಎಲ್‌ಸಿ ಹೇಳಿದ್ದೇನು ಗೊತ್ತೇ?

lakshmi hebbalkar ct ravi
Spread the love

ನ್ಯೂಸ್ ಆ್ಯರೋ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಪಘಾತಕ್ಕೆ ಒಳಲಾಗಿದ್ದಾರೆ. ಸಚಿವೆ ಪ್ರಯಾಣಿಸುತ್ತಿದ್ದ ಕಾರು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೀವ್ರವಾಗಿ ಗಾಯಗೊಂಡಿದ್ದು, ಅವರ ಸಹೋದರ, ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆನ್ನಿಗೆ ಬಲವಾದ ಪೆಟ್ಟಾಗಿದೆ. ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸಚಿವೆ ಸುಧಾರಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಲಕ್ಷ್ಮಿ ಹೆಬ್ಬಾಳ್ಕರ್ ಅಪಘಾತದ ಕುರಿತಂತೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಕೂಡ ಟ್ವೀಟ್ ಮಾಡಿದ್ದಾರೆ.

ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸಹೋದರ ಶೀಘ್ರ ಗುಣಮುಖರಾಗಲಿ ಎಂದು ಶ್ರೀ ದೇವರಲ್ಲಿ ಪ್ರಾರ್ಥಿಸುವೆ ಅಂತ ಸಿಟಿ ರವಿ ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್‌ನಲ್ಲೇ ಸಿಟಿ ರವಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ಕೋಲಾಹಲ ಉಂಟಾಗಿತ್ತು. ಆದರೀಗ ಸಚಿವೆ ಕಾರು ಅಪಘಾತದ ಕುರಿತಂತೆ ಸಿಟಿ ರವಿ ಟ್ವೀಟ್ ಮಾಡಿದ್ದಾರೆ.

ಇತ್ತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತವಾಗಿರುವ ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ವಿಧಾನ ಪರಿಷತ್ ಸದಸ್ಯ ಹಾಗೂ ಸಹೋದರ ಚನ್ನರಾಜ್ ಹಟ್ಟಿಹೊಳಿ, ಸಂಕ್ರಮಣ ಹಿಂದೆ, ಮುಂದೆ ಎಚ್ಚರಿಕೆಯಿಂದ ಇರುವಂತೆ ಜೋತಿಷಿಗಳು ಸಲಹೆ ನೀಡಿದ್ದರು. ಮನೆಯಲ್ಲಿ ‌ದುರ್ಘಟನೆ ನಡೆಯುವ ಸಾಧ್ಯತೆ ಇದೆ ಸ್ವಾಮೀಜಿ ಭವಿಷ್ಯ ಹೇಳಿದ್ರು. ನಮ್ಮಿಂದಲೇ ಅಚಾತುರ್ಯ ಜರುಗಿದೆ, ಇದು ಆಗಬಾರದು ಇತ್ತು

ನಾವು ಎಚ್ಚರಿಕೆ ವಹಿಸದೇ ನಿರ್ಲಕ್ಷ್ಯ ಮಾಡಿದ್ವಿ, ಕಾರು ಚಾಲಕನ ತಪ್ಪು ಏನು ಇಲ್ಲ. ನಾಯಿ ಅಡ್ಡ ಬಂದಿದ್ದರಿಂದ ತಪ್ಪಿಸಲು ಹೋಗಿ ಅಪಘಾತ ನಡೆದಿದೆ ಎಂದಿದ್ದಾರೆ.

https://twitter.com/CTRavi_BJP/status/1879057192948809749?ref_src=twsrc%5Etfw%7Ctwcamp%5Etweetembed%7Ctwterm%5E1879057192948809749%7Ctwgr%5E76c6f3dce4214ecb9dad9d6eecaf397bdcb9819c%7Ctwcon%5Es1_c10&ref_url=https%3A%2F%2Fkannada.news18.com%2Fnews%2Fstate%2Flakshmi-hebbalkar-car-accident-case-ct-ravi-tweet-ach-1968644.html

Leave a Comment

Leave a Reply

Your email address will not be published. Required fields are marked *