ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು, ಅಷ್ಟಕ್ಕೂ ಆಗಿದ್ದೇನು ?
ನ್ಯೂಸ್ ಆ್ಯರೋ: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಸದ್ಯ ಅವರನ್ನು ಮುಂಬೈ ನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧ್ಯರಾತ್ರಿ ಸುಮಾರು 2.30 ಕ್ಕೆ ಬಾಂದ್ರಾದಲ್ಲಿರುವ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ದರೋಡೆ ನಡೆಸಲು ಬಂದವರಿಂದ ಈ ಕೃತ್ಯ ನಡೆದು ಬಂದಿದೆ ಎಂದು ತಿಳಿದು ಬಂದಿದೆ.
ಇಂದು ಬೆಳಗಿನ ಜಾವ 2:30 ರ ಸುಮಾರಿಗೆ ನಟ ತನ್ನ ಇತರ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮುಂಜಾನೆ 2.30ರ ವೇಳೆಗೆ ಕಳ್ಳರು ಮನೆ ಒಳಗೆ ನುಗ್ಗಿದ್ದಾರೆ. ಈ ವೇಳೆ ಎಲ್ಲರಿಗೂ ಎಚ್ಚರ ಆಗಿದೆ. ಆಗ ಸೈಫ್ ಅವರು ಕಳ್ಳರನ್ನು ತಡೆಯಲು ಹೋಗಿದ್ದು, ಈ ವೇಳೆ ಕಳ್ಳರು ಹಲ್ಲೆ ಮಾಡಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ.
ಒಟ್ಟು ಆರು ಕಡೆ ಗಾಯಗಳಾಗಿದ್ದು, ಬೆನ್ನಿನ ಭಾಗದಲ್ಲಿ ಕಳ್ಳರು ಇರಿದ ಚಾಕು ತುಂಬಾನೇ ದೊಡ್ಡ ಗಾಯವನ್ನೇ ಮಾಡಿದೆ ಎನ್ನಲಾಗಿದೆ. ಸದ್ಯ ಕಳ್ಳರನ್ನು ಹಿಡಿಯುವ ಪ್ರಯತ್ನ ನಡೆಯುತ್ತಿದೆ. ಇನ್ನು ಸೈಫ್ ಅಲಿಖಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Leave a Comment