ಮಹಾನಟಿ ಕೀರ್ತಿ ಸುರೇಶ್ ಜೊತೆ ದಳಪತಿ ವಿಜಯ್ ವಿವಾಹ..!? – ಮೊದಲ ಪತ್ನಿಗೆ ಡೈವೋರ್ಸ್ ಕೊಡಲಿದ್ದಾರಂತೆ ‘ವಾರಿಸು’ ನಟ..!!

ಮಹಾನಟಿ ಕೀರ್ತಿ ಸುರೇಶ್ ಜೊತೆ ದಳಪತಿ ವಿಜಯ್ ವಿವಾಹ..!? – ಮೊದಲ ಪತ್ನಿಗೆ ಡೈವೋರ್ಸ್ ಕೊಡಲಿದ್ದಾರಂತೆ ‘ವಾರಿಸು’ ನಟ..!!

ನ್ಯೂಸ್ ಆ್ಯರೋ : ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ಸದ್ಯ, ತಮ್ಮ ವೈಯಕ್ತಿಕ ಜೀವದ ವಿವಾದಗಳಿಂದ ಸುದ್ದಿಯಲ್ಲಿದ್ದಾರೆ. ತಮಿಳು ಮಾಧ್ಯಮಗಳಲ್ಲಿ ಈ ಬಗ್ಗೆ ಸಾಕಷ್ಟು ಅಂತೆ-ಕಂತೆಗಳು ಓಡಾಡುತ್ತಿವೆ. ಇದೀಗ ಈ ಸುದ್ದಿ ಮತ್ತೆ ಮುನ್ನೆಲೆಗೆ ಬಂದಿದ್ದು, ವಿಜಯ್ ಅವರು ಖ್ಯಾತ ನಟಿ ಕೀರ್ತಿ ಸುರೇಶ್ ಅವರನ್ನು ವಿವಾಹವಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

‘ವಾರಿಸು’ ಸಿನಿಮಾದ ಗೆಲುವಿನ ಖುಷಿಯಲ್ಲಿರುವ ದಳಪತಿ, ತಮ್ಮ ಮೊದಲ ಪತ್ನಿ ಸಂಗೀತಾ ಅವರಿಗೆ ವಿಚ್ಚೇದನ ನೀಡಿ, ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಅವರನ್ನು ಮದುವೆ ಆಗಲಿದ್ದಾರಂತೆ. ಇದಕ್ಕೆ ಪುಷ್ಟಿ ನೀಡುವಂತೆ ಇತ್ತೀಚೆಗೆ, ಇವರಿಬ್ಬರೂ ಒಬ್ಬರ ಮೇಲೆ ಒಬ್ಬರು‌ ಕಾಲು ಹಾಕಿ‌ ಕುಳಿತಿರುವ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು.

ದಳಪತಿ ವಿಜಯ್ ಹಾಗೂ ಸಂಗೀತಾ ದಾಂಪತ್ಯ 22 ವರ್ಷ ಪೂರೈಸಿದೆ. ಆದರೆ ಇದೀಗ ಇವರ ಜೀವನದಲ್ಲಿ ಬಿರುಕು ಉಂಟಾಗಿದ್ದು, ವಿಚ್ಚೇದನ ನೀಡುವ ಹಂತಕ್ಕೆ ಬಂದಿದೆ ಎನ್ನಲಾಗಿದೆ. 22 ವರ್ಷಗಳ ಹಿಂದೆ ವಿಜಯ್ ತಮ್ಮ ಅಭಿಮಾನಿಯಾಗಿದ್ದ ಸಂಗೀತಾ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು.

ಹಲವು ಸಿನಿ ಕಾರ್ಯಕ್ರಮಗಳಿಗೆ ವಿಜಯ್ ಹಾಗೂ ಸಂಗೀತ ಒಟ್ಟಿಗೆ ತೆರಳುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ವಿಜಯ್ ಅವರ ಯಾವ ಕಾರ್ಯಕ್ರಮದಲ್ಲೂ ಸಂಗೀತ ಕಾಣಿಸುತ್ತಿಲ್ಲ. ಸಂಗೀತ ಮಗನೊಂದಿಗೆ ವಿದೇಶಕ್ಕೆ ಹೋಗಿ ನೆಲೆಸಿದ್ದಾರೆ ಎಂಬ ಸುದ್ದಿಯೂ ಕೇಳಿ ಬರುತ್ತಿದೆ.

ಇನ್ನು ವಿಜಯ್ ಹಾಗೂ ನಟಿ ಕೀರ್ತಿ ಸುರೇಶ್, ಸರ್ಕಾರ್, ಭೈರವ ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದರು. ಆಗಿನಿಂದಲೂ ಇವರಿಬ್ಬರು ಪ್ರೀತಿಯಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಇದೀಗ ಆ ಸುದ್ದಿ ಸಾಕಷ್ಟು ವೈರಲ್ ಆಗುತ್ತಿದ್ದು, ಸದ್ಯದಲ್ಲೇ ವಿಜಯ್ ಅವರು ಸಂಗೀತ ಅವರಿಗೆ ವಿಚ್ಚೇದನ ನೀಡಿ, ಕೀರ್ತಿ ಸುರೇಶ್ ಅವರನ್ನು ವಿವಾಹವಾಗಲಿದ್ದಾರೆ ಎನ್ನಲಾಗಿದೆ. ಆದರೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ವಿಜಯ್ ಅಥವಾ ಕೀರ್ತಿ ಸುರೇಶ್ ಯಾವುದೇ ಉತ್ತರ ನೀಡಿಲ್ಲ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *