ಇನ್ಮುಂದೆ ಹಾಫ್ ಹೆಲ್ಮೆಟ್ ಧರಿಸಿದ್ರೆ ದಂಡ ಕಟ್ಟಲೇಬೇಕು – ದ್ವಿಚಕ್ರ ಸವಾರರಿಗೆ ಎಚ್ಚರಿಕೆಯ ಕರೆಗಂಟೆ..!!

ಇನ್ಮುಂದೆ ಹಾಫ್ ಹೆಲ್ಮೆಟ್ ಧರಿಸಿದ್ರೆ ದಂಡ ಕಟ್ಟಲೇಬೇಕು – ದ್ವಿಚಕ್ರ ಸವಾರರಿಗೆ ಎಚ್ಚರಿಕೆಯ ಕರೆಗಂಟೆ..!!

ನ್ಯೂಸ್ ಆ್ಯರೋ : ಹಾಫ್ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಲಾಯಿಸುವ ಸವಾರರಿಗೆ ಸಂಚಾರಿ ಪೊಲೀಸರು ಎಚ್ಚರಿಕೆಯನ್ನು ನೀಡಿದ್ದಾರೆ. ಟೋಪಿ ಮಾದರಿಯ ಹೆಲ್ಮೆಟ್ ಹಾಗೂ ಐಎಸ್ಐ ಮುದ್ರೆ ಇಲ್ಲದ ಹೆಲ್ಮೆಟ್ ಗಳನ್ನು ಧರಿಸಿದರೆ ಇನ್ನು‌ ಮುಂದೆ ದಂಡ ವಿಧಿಸಲಾಗುತ್ತದೆ ಎಂದು‌ ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಹಾಫ್ ಹೆಲ್ಮೆಟ್ ಅಥವಾ ಕಳಪೆ ಗುಣಮಟ್ಟದ ಹೆಲ್ಮೆಟ್ ಧರಿಸುವ ದ್ವಿಚಕ್ರ ವಾಹನ ಸವಾರ ಹಾಗೂ ಹಿಂಬದಿ ಸವಾರರ ಮೇಲೂ ಸಂಚಾರ ವಿಭಾಗದ ಪೊಲೀಸರು ದಂಡ ಪ್ರಯೋಗ ಶುರು ಮಾಡಿದ್ದು, ಈ ಹಿನ್ನಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ಹಾಫ್ ಹೆಲ್ಮೆಟ್ ಧರಿಸಿದವರೂ ಸೇರಿದಂತೆ ಹೆಲ್ಮೆಟ್ ಧರಿಸದ ಸವಾರರ ವಿರುದ್ಧ 13 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ.

ದ್ವಿಚಕ್ರ ವಾಹನ ಸವಾರರು ಅರ್ಧ ಹೆಲ್ಮೆಟ್ ಗಳನ್ನು ಧರಿಸಿಕೊಂಡು ಸವಾರಿ ಮಾಡುತ್ತಿದ್ದರೆ, ಟೋಪಿ ಮಾದರಿಯ ಹೆಲ್ಮೆಟ್ ಗಳನ್ನು ಹೆಲ್ಮೆಟ್ ರಹಿತ ಚಾಲನೆ ಎಂದು ಪರಿಗಣಿಸಿ 500 ರೂ. ದಂಡ ವಿಧಿಸಲಾಗುವುದಾಗಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೋಟಾರು ವಾಹನ ನಿಯಮಗಳ 1989 ನಿಯಮ 230(1) ಕ್ಕೆ ತಿದ್ದುಪಡಿಯಲ್ಲಿ ರಾಜ್ಯವ್ಯಾಪಿ ಬೈಕ್ ಸವಾರ ಮತ್ತು ಹಿಂಬದಿ ಸವಾರರು ಐಎಸ್ ಐ ಮುದ್ರೆಯ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *