ಪ್ರಾಣಿ ಬಲಿ ಕೊಟ್ಟು ಅದರ ರಕ್ತ ಸ್ನೇಹಮಯಿ ಕೃಷ್ಣ ಫೋಟೋಗೆ ಅರ್ಪಣೆ; ಪ್ರಸಾದ್ ಅತ್ತಾವರ ಮೇಲೆ ಎಫ್ಐಆರ್ ದಾಖಲು
![Prasad](https://news-arrow.com/wp-content/uploads/cwv-webp-images/2025/01/prasad.png.webp)
ನ್ಯೂಸ್ ಆ್ಯರೋ: ಮಸಾಜ್ ಪಾರ್ಲರ್ ಮೇಲೆ ದಾಳಿಯಲ್ಲಿ ಅರೆೇಸ್ಟ್ ಆಗಿರುವ ರಾಮ್ ಸೇನೆ ಸ್ಥಾಪಕ ಪ್ರಸಾದ್ ಅತ್ತಾವರ ಮೇಲೆ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದ್ದು, ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ಶಕ್ತಿ ತುಂಬಲು ಪ್ರಾಣಿ ಬಲಿಕೊಟ್ಟಿರುವ ಆರೋಪ ಕೇಳಿ ಬಂದಿದ್ದು, ಇದೀಗ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಮಸಾಜ್ ಪಾರ್ಲರ್ ಮೇಲೆ ದಾಳಿ ಸಂಬಂಧ ರಾಮ್ ಸೇನೆ ಮುಖಂಡ ಪ್ರಸಾದ್ ಅತ್ತಾವರನನ್ನು ಪೊಲೀಸರು ಅರೆೆಸ್ಟ್ ಮಾಡಿದ್ದರು, ಈ ವೇಳೆ ಅವರ ಮೊಬೈಲ್ ಪರಿಶೀಲನೆ ನಡೆಸಿದಾಗ ಅದರಲ್ಲಿ ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು ಅದರ ರಕ್ತವನ್ನು ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್ಟಿಐ ಕಾರ್ಯಕರ್ತ ಗಂಗರಾಜು ಫೋಟೋಗೆ ಹಚ್ಚಿರುವ ವಿಡಿಯೋ ಪೊಲೀಸರಿಗೆ ಲಭ್ಯವಾಗಿದೆ. ಸರಣಿ ಪ್ರಾಣಿ ಬಲಿ ಮಾಡಿರುವ ವಿಡಿಯೋಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ನೇಹಮಯಿ ಕೃಷ್ಣ ಮತ್ತು ಗಂಗರಾಜುಗೆ ಶಕ್ತಿ ತುಂಬಲು ಈ ರೀತಿ ಮಾಡುತ್ತಿದ್ದರು ಎನ್ನಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರಿನಲ್ಲಿ ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ,ಸೆಲೂನ್ ದಾಳಿ ಪ್ರಕರಣ ಹಿನ್ನಲೆ ಪ್ರಸಾದ್ ಅತ್ತಾವರ ಬಂಧನ ಮಾಡಲಾಗಿತ್ತು, ಈ ಸಂಧರ್ಭದಲ್ಲಿ ಮೊಬೈಲ್ ಪರಿಶೀಲನೆ ಮಾಡಿದ ಸಂದರ್ಭ ಮೊಬೈಲ್ ವಿಡಿಯೋದಲ್ಲಿ ದೇವಸ್ಥಾನದಲ್ಲಿ ಬಲಿಕೊಡವ ದೃಶ್ಯ ಇತ್ತು, ಅದರಲ್ಲಿ ಐದು ಕುರಿಗಳನ್ನು ಬಲಿಕೊಟ್ಟು ಅದರ ರಕ್ತವನ್ನು ಸ್ನೇಹಮಹಿ ಕೃಷ್ಣ , ಗಂಗರಾಜು ಅವರ ಪೋಟೋಗಳಿಗೆ ಹಚ್ಚಲಾಗಿದೆ.
ಅನಂತ್ ಭಟ್ ಯಾರು ಅಂತ ತನಿಖೆ ಮಾಡುತ್ತಿದ್ದೇವೆ. ಬಲಿ ಎಲ್ಲಿ ಕೊಟ್ಟಿದ್ದಾರೆ ಎಂಬುವುದಕ್ಕೆ ಸ್ಪಷ್ಟತೆ ಇಲ್ಲ. ಪ್ರಾರಂಭಿಕ ಮಾಹಿತಿ ಪ್ರಕಾರ ಸ್ನೇಹಮಹಿ ಕೃಷ್ಣ ಮತ್ತು ಗಂಗರಾಜು ಅವರಿಗಾಗಿ ಬಲಿ ಕೊಡಲಾಗಿದೆ ಎಂದು ತಿಳಿದುಬಂದಿದೆ. ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಪ್ರಾಣಿ ಬಲಿ ನಿಷೇಧ ಇದೆ. ಹಣದ ಬ್ಯಾಗ್‌ನ ಫೋಟೋ ಕೂಡ ಇತ್ತು ಎಂದು ತಿಳಿಸಿದರು.
ಈ ವಿಚಾರವನ್ನು ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಣತಿಯಂತೆ ಕದ್ರಿ ಪೊಲೀಸ್ ಇನ್ಸ್ಪೆಕ್ಟರ್ ಸೋಮಶೇಖರ್ ದೂರು ನೀಡಿದ್ದು, ಮಂಗಳೂರಿನ ಬರ್ಕೆ ಪೊಲೀಸ್ ಠಾಣೆಯಲ್ಲಿ ಮದ್ಯರಾತ್ರಿ 1.30ಕ್ಕೆ ಪ್ರಸಾದ್ ಅತ್ತಾವರ್, ಅನಂತ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
Leave a Comment