ಮುಂದುವರಿದ ಮಳೆಯ ಅಬ್ಬರ, ರೆಡ್ ಅಲರ್ಟ್ ಹಿನ್ನೆಲೆ – ದಕ್ಷಿಣ ಕನ್ನಡ ಜಿಲ್ಲೆಯ ಪಿಯುಸಿವರೆಗಿನ ಮಕ್ಕಳಿಗೆ ಜುಲೈ 16ರಂದು ರಜೆ ಘೋಷಣೆ

IMG 20240715 WA0119
Spread the love

ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ಸೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಿನಾಂಕ 16-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 16-07-2024 ರಂದು ರಜೆಯನ್ನು ಘೋಷಿಸಿದೆ.

20240715 1929445622542807694209036

ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು. ಹಾಜರಾತಿ ಕಡ್ಡಾಯ ಮಾಡುವಂತಿಲ್ಲ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು,

ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ಸದಿಗಳು ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು.

ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು.

ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.

ತುರ್ತು ಸೇವೆಗೆ ಟೋಲ್ ಫ್ರೀ ಸಂ.
-1077/ 0824-2442590

ಇನ್ನು ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪಿಯುಸಿವರೆಗಿನ ಮಕ್ಕಳಿಗೆ ರಜೆ ಘೋಷಿಸಲಾಗಿದ್ದರೆ ಹಾಸನ ಜಿಲ್ಲೆಯ ಪ್ರೌಢಶಾಲೆವರೆಗಿನ ಮಕ್ಕಳಿಗೆ ಜುಲೈ 16ರಂದು ರಜೆ ಘೋಷಣೆ ಮಾಡಲಾಗಿದೆ.

20240715 191429455171194435894241
ಉಡುಪಿ ಜಿಲ್ಲೆಯ ಪಿಯುಸಿವರೆಗಿನ ಮಕ್ಕಳಿಗೆ ರಜೆ
20240715 1918434418754080954908561
ಉತ್ತರ ಕನ್ನಡ ಜಿಲ್ಲೆಯ ಪಿಯುಸಿವರೆಗಿನ ಮಕ್ಕಳಿಗೆ ರಜೆ
20240715 1919275063299574527303219
ಹಾಸನ ಜಿಲ್ಲೆಯಲ್ಲಿ ಪ್ರೌಢಶಾಲೆ ವರೆಗಿನ ಮಕ್ಕಳಿಗೆ ರಜೆ

Leave a Comment

Leave a Reply

Your email address will not be published. Required fields are marked *

error: Content is protected !!