ಡಬ್ಲೂಪಿಎಲ್ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ – ಆರ್. ಸಿ.ಬಿ ತಂಡದ ವೇಳಾಪಟ್ಟಿ ಹೀಗಿದೆ ನೋಡಿ..

ಡಬ್ಲೂಪಿಎಲ್ ವೇಳಾಪಟ್ಟಿ ಬಿಡುಗಡೆ ಮಾಡಿದ ಬಿಸಿಸಿಐ – ಆರ್. ಸಿ.ಬಿ ತಂಡದ ವೇಳಾಪಟ್ಟಿ ಹೀಗಿದೆ ನೋಡಿ..

ನ್ಯೂಸ್ ಆ್ಯರೋ : ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಮಾರ್ಚ್ 4ರಂದು ಗುಜರಾತ್ ಜಯಂಟ್ಸ್ ಮತ್ತು ಮುಂಬಯಿ ಇಂಡಿಯನ್ಸ್ ನಡುವಣ ಮಹಾಕಾಳಗದೊಂದಿಗೆ ಚೊಚ್ಚಲ ಆವೃತ್ತಿಯ ಮಹಿಳೆಯರ ಪ್ರೀಮಿಯರ್ ಲೀಗ್ ಆರಂಭವಾಗಲಿದೆ ಎಂದು ಬಿಸಿಸಿಐ ತಿಳಿಸಿದೆ. ಸೋಮವಾರವಷ್ಟೇ ಡಬ್ಲ್ಯುಪಿಎಲ್ ಆಟಗಾರ್ತಿಯರ ಹರಾಜು ನಡೆದ ನಂತರ‌ ಇದೀಗ ಪಂದ್ಯಾಟದ ವೇಳಾಪಟ್ಟಿ ಬಿಡುಗಡೆಯಾಗಿದೆ‌.

ಚೊಚ್ಚಲ ಡಬ್ಲ್ಯುಪಿಎಲ್ ನಲ್ಲಿ, ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಜಯಂಟ್ಸ್, ಮುಂಬಯಿ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಯುಪಿ ವಾರಿಯರ್ಸ್ ನಡುವೆ 23 ದಿನಗಳ ಕಾಲ 20 ಲೀಗ್ ಹಾಗೂ 2 ಪ್ಲೇಆಫ್ ಪಂದ್ಯಗಳು ನಡೆಯಲಿದೆ.

ಮಾರ್ಚ್ 5ರಂದು ಟೂರ್ನಿಯ ಮೊದಲ ಡಬಲ್ ಹೆಡರ್ (2ಪಂದ್ಯ) ನಿಗದಿಯಾಗಿದೆ‌. ಅಂದು ಬೆಳಗ್ಗೆ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಆರ್.ಸಿ.ಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಹಾಗೂ ಸಂಜೆ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಯುಪಿ ವಾರಿಯರ್ಸ್ ಮತ್ರು ಗುಜರಾತ್ ಜಯಂಟ್ಸ್ ನಡುವೆ 2ನೇ ಪಂದ್ಯಾಟ ನಡೆಯಲಿದೆ. ಅಂದು ಮೊದಲ ಪಂದ್ಯ ಮಧ್ಯಾಹ್ನ 3.30ಕ್ಕೆ ಹಾಗೂ ಮತ್ತೊಂದು ಪಂದ್ಯ ಸಂಜೆ 7.30ಕ್ಕೆ ಆರಂಭವಾಗಲಿದೆ.

ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಯುಪಿ ವಾರಿಯರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಲೀಗ್ ಹಂತದ ಕೊನೆಯ ಪಂದ್ಯ ಮಾ.21ರಂದು ನಡೆಯಲಿದೆ. ಮಾ.24ರಂದು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಎಲಿಮಿನೆಟರ್ ಮತ್ತು ಮಾ.26 ರಂದು ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯಾಟ ನಡೆಯಲಿದೆ.

RCB ಎದುರಾಳಿ ತಂಡ ಮತ್ತು ದಿನಾಂಕ

ಮಾ.5- ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ- ಸಂ.3.30ಕ್ಕೆ ಪಂದ್ಯಾಟ.
ಮಾ.6- ಮುಂಬಯಿ ಇಂಡಿಯನ್ಸ್ ವಿರುದ್ಧ- ಸಂ.7.30ಕ್ಕೆ ಪಂದ್ಯಾಟ.
ಮಾ.8- ಗುಜರಾತ್ ಜಯಂಟ್ಸ್ ವಿರುದ್ಧ- ಸಂ.7.30ಕ್ಕೆ ಪಂದ್ಯಾಟ.
ಮಾ.10- ಯುಪಿ ವಾರಿಯರ್ಸ್ ವಿರುದ್ಧ- ಸಂ.7.30ಕ್ಕೆ ಪಂದ್ಯಾಟ.
ಮಾ.13- ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ- ಸಂ.7.30ಕ್ಕೆ‌ ಪಂದ್ಯಾಟ.
ಮಾ.15- ಯುಪಿ ವಾರಿಯರ್ಸ್ ವಿರುದ್ಧ- ಸಂ.7.30ಕ್ಕೆ ಪಂದ್ಯಾಟ.
ಮಾ.18- ಗುಜರಾತ್ ಜಯಂಟ್ಸ್- ಸಂ.7.30ಕ್ಕೆ ಪಂದ್ಯಾಟ.
ಮಾ.21- ಮುಂಬಯಿ ಇಂಡಿಯನ್ಸ್-ಮ.3.30ಕ್ಕೆ ಪಂದ್ಯಾಟ ನಡೆಯಲಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *