ಕೊನೆಗೂ ಅಧಿಕೃತ ರಜೆ ಘೋಷಿಸಿದ ದ.ಕ. ಜಿಲ್ಲಾಧಿಕಾರಿ – ಜಿಲ್ಲೆಯ ಈ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ (ಜುಲೈ 18) ರಜೆ ಘೋಷಣೆ
ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಿನಾಂಕ 18-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ) ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾನಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 18-07- 2024 ರಂದು ರಜೆಯನ್ನು ಘೋಷಿಸಲಾಗಿದೆ. ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮೂಲ್ಕಿ. ತಾಲೂಕು ರಜೆ ಘೋಷಣೆ ಇಲ್ಲ.
ಸೂಚನೆಗಳು
ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ.
ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು.
ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು.
ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು.
ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.
ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ
1077 / 0824-2442590
Leave a Comment