Women’s T20 WC : ಸೆಮಿಫೈನಲ್ ಪ್ರವೇಶಿಸಿದ ಭಾರತ‌ – ಐರ್ಲೆಂಡ್ ವಿರುದ್ಧ ಭಾರತದ ವನಿತೆಯರಿಗೆ ಐದು ರನ್ ಗಳ ರೋಚಕ ಗೆಲುವು

Women’s T20 WC : ಸೆಮಿಫೈನಲ್ ಪ್ರವೇಶಿಸಿದ ಭಾರತ‌ – ಐರ್ಲೆಂಡ್ ವಿರುದ್ಧ ಭಾರತದ ವನಿತೆಯರಿಗೆ ಐದು ರನ್ ಗಳ ರೋಚಕ ಗೆಲುವು

ನ್ಯೂಸ್ ಆ್ಯರೋ : ಹಾಲಿ ನಡೆಯುತ್ತಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯ ಬಿ ಗುಂಪಿನ ಲೀಗ್ ಪಂದ್ಯದಲ್ಲಿ ಭಾರತ ಮಹಿಳಾ ತಂಡವು ಡಕ್ ವರ್ತ್ ನಿಯಮದನ್ವಯ 5 ರನ್ ಗಳ ಗೆಲುವು ದಾಖಲಿಸಿ ಸೆಮಿಫೈನಲ್ಸ್ ಪ್ರವೇಶಿಸಿದೆ.

ಗ್ಕೆಬರ್ಹಾದ ಸೇಂಟ್ ಜಾರ್ಜ್ ಪಾರ್ಕ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ದುಕೊಂಡು ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 155 ರನ್ ಗಳಿಸಿತ್ತು. ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ 56 ಎಸೆತಗಳಲ್ಲಿ 87 ರನ್ ದಾಖಲಿಸಿ ಉತ್ತಮ ರನ್ ಕಲೆಹಾಕಲು ನೆರವಾದರು.

156 ರನ್ ಬೆನ್ನು ಹತ್ತಿದ್ದ ಐರ್ಲೆಂಡ್ ಎರಡು ವಿಕೆಟ್ ಗಳನ್ನು ಆರಂಭದಲ್ಲೇ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ 8.2 ಓವರ್ ಗಳ ಪಂದ್ಯ ಸಾಗುತ್ತಿದ್ದಾಗ ಐರ್ಲೆಂಡ್ 54 ರನ್ ಗಳಿಸಿತ್ತು. ಈ ವೇಳೆ ಮಳೆ ಬಂದು ಪಂದ್ಯವನ್ನು ನಿಲ್ಲಿಸಲಾಯಿತು.

ಇದರಿಂದಾಗಿ ಈ ಪಂದ್ಯದ ಫಲಿತಾಂಶಕ್ಕಾಗಿ ಡಕ್ವರ್ತ್ ನಿಯಮ ಅಳವಡಿಸಲಾಗಿ ಭಾರತ ಐದು ರನ್ ಗಳಿಂದ ಪಂದ್ಯ ಗೆದ್ದಿತು. ಫೆ. 23 ರಂದು ನಡೆಯಲಿರುವ ಪ್ರಥಮ ಸೆಮಿಫೈನಲ್ಸ್ ಪಂದ್ಯದಲ್ಲಿ ಭಾರತ ಮಹಿಳೆಯರ ತಂಡ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *