ಕರ್ತೋಜಿ ಬಳಿ ಗುಡ್ಡ ಕುಸಿಯುವ ಭೀತಿ, ಸಂಪಾಜೆ- ಮಡಿಕೇರಿ ರಸ್ತೆ ನಾಲ್ಕು ದಿನಗಳ ರಾತ್ರಿ ಸಂಚಾರ ನಿರ್ಬಂಧ – ಕೊಡಗು ಜಿಲ್ಲಾಧಿಕಾರಿಯಿಂದ ಅಧಿಕೃತ ಪ್ರಕಟಣೆ
ನ್ಯೂಸ್ ಆ್ಯರೋ : ರಾಷ್ಟ್ರೀಯ ಹೆದ್ದಾರಿ – 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕಿ.ಮೀ. 90.05 ರಿಂದ 90.10ರ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಈ ಭಾಗದಲ್ಲಿ ದಿನಾಂಕ 18.07.2024 ರಿಂದ 22.07.2024ರ ವರೆಗೆ ಪ್ರತಿ ದಿನ ರಾತ್ರಿ 8.00 ಗಂಟೆಯಿಂದ ಮರುದಿನ ಬೆಳಗ್ಗೆ 6.00 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ನೀಡಿರುವ ವರದಿಯಂತೆ ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಅತಿ ಹೆಚ್ಚಿನ ಮಳೆಯಾಗುವ ಎಚ್ಚರಿಕೆ ಇರುತ್ತದೆ.
ಹವಾಮಾನ ಇಲಾಖೆಯ ವರದಿಯಂತೆ ಸಾರ್ವಜನಿಕ ಹಿತದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಎಂಬ ಭಾಗದಲ್ಲಿ ಮುಂಜಾಗ್ರತಾ ಕ್ರಮವಾಗಿ ತುರ್ತು ಸೇವೆಗಳ ಮತ್ತು ಪ್ರಕೃತಿ ವಿಕೋಪ ಸಂಬಂಧಿತ ಕಾರ್ಯದ ನಿಮಿತ್ತ ಕಾರ್ಯನಿರ್ವಹಿಸುವ ಅಧಿಕಾರಿ / ಸಿಬ್ಬಂದಿಗಳು ಸಂಚರಿಸುವ ವಾಹನಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ದಿನಾಂಕ 18.07.2024 ರಿಂದ 22.07.2024ರ ವರೆಗೆ ಪ್ರತಿ ದಿನ ರಾತ್ರಿ 8.00 ಗಂಟೆಯಿಂದ ಮರುದಿನ ಬೆಳಗ್ಗೆ 6.00 ಗಂಟೆಯವರೆಗೆ ನಿರ್ಬಂಧಿಸುವುದು ಸೂಕ್ತವೆಂದು ಕಂಡುಬಂದ ಕಾರಣ ಈ ಆದೇಶ ಹೊರಡಿಸಲಾಗಿದೆ.
ಸಂಪಾಜೆ ಹಾಗೂ ಮಡಿಕೇರಿ ನಡುವಿನ ಕಿ.ಮೀ. 90.05 ರಿಂದ 90.10ರ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಭಾರತೀಯ ನಾಗರೀಕ ಸುರಕ್ತಾ ಸಂಹಿತೆ 2023ರ ಕಲಂ 163 ಮತ್ತು ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989ರ (ತಿದ್ದುಪಡಿ ನಿಯಮಗಳು 1990) ನಿಯಮ 221ಎ(5)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ವೆಂಕಟ್ ರಾಜಾ, ಭಾ.ಆ.ಸೇ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಅವರು ರಾಷ್ಟ್ರೀಯ ಹೆದ್ದಾರಿ – 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿಯ ಕಿ..ಮೀ. 90.10ರ ಭಾಗದಲ್ಲಿ ಮುಂಜಾಗ್ರತಾ ಕ್ರಮವಾಗಿ ತುರ್ತು ಸೇವೆಗಳ ಮತ್ತು ಪಕೃತಿ ವಿಕೋಪ ಸಂಬಂಧಿತ ಕಾರ್ಯದ ನಿಮಿತ್ತ ಕಾರ್ಯನಿರ್ವಹಿಸುವ ಅಧಿಕಾರಿ / ಸಿಬ್ಬಂದಿಗಳು ಸಂಚರಿಸುವ ವಾಹನಗಳನ್ನು ಹೊರತುಪಡಿಸಿ, ಉಳಿದಂತೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ದಿನಾಂಕ 18.07.2024 ರಿಂದ 22.07.2024ರ ವರೆಗೆ ಪ್ರತಿ ದಿನ ರಾತ್ರಿ 8.00 ಗಂಟೆಯಿಂದ ಮರುದಿನ ಬೆಳಗ್ಗೆ 6.00 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಆದೇಶಿಸಿದ್ದಾರೆ.
ಅಲ್ಲದೇ ಈ ರಸ್ತೆಯ ಮುಖಾಂತರ ಮೈಸೂರು, ಬೆಂಗಳೂರು ಮುಂತಾದ ಸ್ಥಳಗಳಿಗೆ ಸಂಚರಿಸುವ ವಾಹನಗಳು ಬದಲಿ ರಸ್ತೆಯಾದ ಚಾರ್ಮಾಡಿ ಘಾಟ್ – ಕೊಟ್ಟಿಗೆಹಾರ ಮಾರ್ಗವನ್ನು ಬಳಸಬಹುದಾಗಿದೆ.
ಈ ಬಗ್ಗೆ ಮೋಟಾರ್ ವಾಹನ ಕಾಯ್ದೆ 1988ರ ಸೆಕ್ಷನ್ 116 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮಗಳು 1989ರ (ತಿದ್ದುಪಡಿ ನಿಯಮಗಳು 1990) ನಿಯಮ 221ಎ (2)ರಂತೆ ಅವಶ್ಯವಿರುವ ಸಂಜ್ಞೆ / ಸೂಚನಾ ಫಲಕವನ್ನು ಆಳವಡಿಸಲು ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗ, ಮಡಿಕೇರಿ ಇವರಿಗೆ ಸೂಚನೆ ನೀಡಲಾಗಿದೆ.
Leave a Comment