ಮಳೆಯ ಅಬ್ಬರ, ಮಕ್ಕಳಿಗೆ ರಜಾವೋ ರಜಾ – ದಕ್ಷಿಣ ಕನ್ನಡ, ಉಡುಪಿ, ಹಾಸನ ಜಿಲ್ಲಾ ಶಾಲಾ ಮಕ್ಕಳಿಗೆ ನಾಳೆ (ಜುಲೈ 20) ರಜೆ ಘೋಷಣೆ

IMG 20240715 WA0119
Spread the love

ನ್ಯೂಸ್ ಆ್ಯರೋ‌ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಪುತ್ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ‌ ಮುಲ್ಲೈ ಮುಗಿಲನ್ ಅವರು ನಾಳೆ (ಜು.20) ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

20240719 2004338316165124682361781

ಸೂಚನೆಗಳು

ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ. ಅವಕಾಶ ಇದ್ದರೆ ಆನ್ಲೈನ್ ತರಗತಿ ನಡೆಸುವುದು.

ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು.

ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು.

ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು.

ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.

ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ

1077 / 0824-2442590

ಮಂಗಳೂರು ತಾಲೂಕು- 0824-2220587

ಉಳ್ಳಾಲ 0824 – 0824-2204424

ಬಂಟ್ವಾಳ ತಾಲೂಕು – 08255-232500

ಪುತ್ತೂರು ತಾಲೂಕು – 02851-230349

ಬೆಳ್ತಂಗಡಿ ತಾಲೂಕು – 08256-232047

ಸುಳ್ಯ ತಾಲೂಕು – 08257-231231

ಮೂಡಬಿದ್ರೆ ತಾಲೂಕು – 08258-238100

ಮುಲ್ಕಿ ತಾಲೂಕು – 0824-2294496

ಇನ್ನುಳಿದಂತೆ ಉಡುಪಿ ಹಾಗೂ ಹಾಸನ‌ ಜಿಲ್ಲೆಯಲ್ಲೂ ಶಾಲೆಗೆ ರಜೆ ಘೋಷಿಸಲಾಗಿದೆ.

20240719 2003041572089876812227589
ಉಡುಪಿ
20240719 1818057612026949718046823
ಹಾಸನ

Leave a Comment

Leave a Reply

Your email address will not be published. Required fields are marked *

error: Content is protected !!