ಮಹಿಳಾ ದಿನ ಆಚರಣೆ ಹಿಂದಿದೆ ಅಮೆರಿಕಾದ ಕಾರ್ಮಿಕ ಮಹಿಳೆಯರ ನೋವಿನ ಕಥೆ – ನಿಮಗೆ ಗೊತ್ತಿಲ್ಲದ ಮಹಿಳಾ ದಿನಾಚರಣೆಯ ಹಿನ್ನೆಲೆ ಏನ್ ಗೊತ್ತಾ…!?

ಮಹಿಳಾ ದಿನ ಆಚರಣೆ ಹಿಂದಿದೆ ಅಮೆರಿಕಾದ ಕಾರ್ಮಿಕ ಮಹಿಳೆಯರ ನೋವಿನ ಕಥೆ – ನಿಮಗೆ ಗೊತ್ತಿಲ್ಲದ ಮಹಿಳಾ ದಿನಾಚರಣೆಯ ಹಿನ್ನೆಲೆ ಏನ್ ಗೊತ್ತಾ…!?

ನ್ಯೂಸ್‌ ಆ್ಯರೋ : ಮಹಿಳೆಯರು ಪ್ರಸ್ತುತ ಪುರುಷರಷ್ಟೇ ಸಮಾನರು. ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ಸಾಧನೆ, ಕೊಡುಗೆ ಸ್ಮರಿಸಲು ಒಂದು ವಿಶೇಷ ದಿನವನ್ನು ಆಚರಿಸಲಾಗುತ್ತದೆ.

ಮಾರ್ಚ್ 8ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆ. ಮಹಿಳೆಯರ ತ್ಯಾಗ, ಪರಿಶ್ರಮ, ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಕ್ಷೇತ್ರಗಳಲ್ಲಿನ ಅವರ ಸಾಧನೆ, ಸಮಾಜಕ್ಕೆ ಅವರ ಅಗತ್ಯತೆ, ಕೊಡುಗೆ, ಅವರಿಗೆ ಗೌರವ ಸಲ್ಲಿಸಲು ಹೀಗೆ ಹತ್ತಾರು ಕಾರಣಕ್ಕೆ ಈ ದಿನವನ್ನು ಮಹಿಳೆಯರಿಗಾಗಿ ಮೀಸಲಿಡಲಾಗಿದೆ.

ಇಂದು ಮಹಿಳೆಯರು ಕ್ರೀಡೆಯಲ್ಲಿ, ಸೈನ್ಯದಲ್ಲಿ, ಬಾಹ್ಯಾಕಾಶದಲ್ಲಿ ಸೇರಿದಂತೆ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡುತ್ತಿದ್ದಾರೆ. ಹಾಗಾದರೆ ಇಂತದ್ದೊಂದು ಮಹತ್ವದ ದಿನ ಹುಟ್ಟಿಕೊಂಡಿದ್ದು ಹೇಗೆ? ಎಲ್ಲಿ ಈ ದಿನಾಚರಣೆ ಹುಟ್ಟಿಕೊಂಡಿತ್ತು ಎಂಬುದನ್ನು ತಿಳಿಯೋಣ.

ಅಮೆರಿಕದಲ್ಲಿ 1908ರಲ್ಲಿ ಕಾರ್ಮಿಕ ಚಳವಳಿ ನಡೆದಿತ್ತು. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದುಡಿಯುವ ಮಹಿಳೆಯರು ಪಾಲ್ಗೊಂಡಿದ್ದರು. ಸುಮಾರು 15,000 ಮಹಿಳೆಯರು ನ್ಯೂಯಾರ್ಕ್ ಬೀದಿಗಳಲ್ಲಿ ಮೆರವಣಿಗೆ ನಡೆಸಿದ್ದರು ಮತ್ತು ತಮ್ಮ ಹಕ್ಕುಗಳಿಗಾಗಿ ಪ್ರತಿಭಟನೆ ನಡೆಸಿದರು. ತಮ್ಮ ಕೆಲಸದ ಅವಧಿಯನ್ನು ಕಡಿಮೆ ಮಾಡಬೇಕು ಮತ್ತು ವೇತನ ಶ್ರೇಣಿಯನ್ನು ಹೆಚ್ಚಿಸಬೇಕು ಎಂದು ಕಾರ್ಮಿಕ ಮಹಿಳೆಯರು ಧ್ವನಿ ಎತ್ತಿದ್ದರು. ಮಹಿಳೆಯರಿಗೂ ಮತದಾನದ ಹಕ್ಕನ್ನು ನೀಡಬೇಕೆಂದು ಬೇಡಿಕೆಯಿಟ್ಟಿದ್ದರು.

1910ರ ಆಗಸ್ಟ್‌ನಲ್ಲಿ ಡೆನ್ಮಾರ್ಕ್‌ನ ಕೋಪನ್‌ಹೇಗನ್‌ನಲ್ಲಿ ಎರಡನೇ ಅಂತರರಾಷ್ಟ್ರೀಯ ಸೋಷಿಯಲಿಸ್ಟ್ ಮಹಿಳಾ ಸಮ್ಮೇಳನ ನಡೆಯಿತು. ಅಲ್ಲಿನ ಕಾರ್ಮಿಕರ ಪ್ರತಿನಿಧಿ ಸಭೆಯ ಸಭಾಂಗಣದಲ್ಲಿ 17 ದೇಶಗಳ ಪ್ರತಿನಿಧಿಗಳು ಸೇರಿದ್ದರು. ಅಮೆರಿಕದ ಹಲವಾರು ಕಾರ್ಮಿಕ ಸಂಘಟನೆಗಳ ನಾಯಕಿಯರು ಬಂದಿದ್ದರು. ಈ ಸಮ್ಮೇಳನಕ್ಕೆ ಅಂತರರಾಷ್ಟ್ರೀಯ ಮಹಿಳಾ ಸೆಕ್ರೆಟೇರಿಯೆಟ್‌ನ ಮುಖ್ಯಸ್ಥೆಯಾಗಿದ್ದ ಕ್ಲಾರಾ ಜೆಟ್‌ಕಿನ್ ಅಧ್ಯಕ್ಷೆಯಾಗಿದ್ದಳು.

1909ರಲ್ಲಿ ಚಳವಳಿಯ ಒಂದು ವರ್ಷದ ನಂತರ ಅಮೆರಿಕಾದ ಸಮಾಜವಾದಿ ಪಕ್ಷ ಮಹಿಳಾ ದಿನವನ್ನು ಘೋಷಿಸಿತು. ಅಂದಿನಿಂದ ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು ವಿಶೇಷವಾಗಿ ನೇರಳೆ ಬಣ್ಣದ ಬಟ್ಟೆ ಧರಿಸುತ್ತಾರೆ. ಹಸಿರು ಬಣ್ಣವು ಭರವಸೆಯನ್ನು ಪ್ರೇರೇಪಿಸುತ್ತದೆ ಮತ್ತು ಬಿಳಿ ಬಣ್ಣವನ್ನು ಶುದ್ಧತೆಯ ಸಂಕೇತವನ್ನು ಸೂಚಿಸುತ್ತದೆ. ಮಹಿಳೆಯರಿಗೆ ನ್ಯಾಯದ ಭರವಸೆಯನ್ನು ಈ ಬಣ್ಣಗಳ ಮೂಲಕ ಹೇಳಲಾಗುತ್ತದೆ. ಯುಕೆಯಲ್ಲಿನ ಮಹಿಳಾ ಸಾಮಾಜಿಕ ಮತ್ತು ರಾಜಕೀಯ ಒಕ್ಕೂಟ 1908ರಲ್ಲಿ ಈ ದಿನಕ್ಕಾಗಿ ಬಣ್ಣಗಳನ್ನು ರಚಿಸಿತು.

ಮಹಿಳೆಯರಿಗೆ ಶುಭಾಶಯ ತಿಳಿಸುವ ಮೂಲಕ ಈ ದಿನವನ್ನು ಆಚರಿಸಲಾಗುತ್ತದೆ. ಜೊತೆಗೆ ಕಾರ್ಯಕ್ರಮಗಳ ಆಯೋಜನೆ, ಮಹಿಳೆಯರ ಸಾಧನೆಗಳ ಕುರಿತು ವರದಿ, ಸಾಧನೆ ಮಾಡಿದ ಮಹಿಳೆಯರಿಗೆ ಸನ್ಮಾನ, ಮಹಿಳಾ ಸಬಲೀಕರಣದ ಬಗ್ಗೆ ಕಾರ್ಯಕ್ರಮ ಹೀಗೆ ಹಲವು ಮಾರ್ಗಗಳ ಮೂಲಕ ಮಹಿಳೆಯರಿಗೆ ಈ ದಿನವನ್ನು ಸಮರ್ಪಿಸಬಹುದು.

ಈ ದಿನ ಆಚರಣೆಯ ಮುಖ್ಯ ಉದ್ದೇಶ ಲಿಂಗ ಸಮಾನತೆಯನ್ನು ಎತ್ತಿಹಿಡಿಯುವುದು, ಜೊತೆಗೆ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುವುದಾಗಿದೆ. ಹೀಗಾಗಿ ಕೇವಲ ಮಾರ್ಚ್‌ ಎಂಟಕ್ಕೆ ಈ ದಿನ ಸೀಮಿತವಾಗದೇ ಎಲ್ಲಾ ಸಮಯದಲ್ಲೂ ಈ ದಿನ ಸಿಗುವ ಗೌರವ, ಮನ್ನಣೆ ಮಹಿಳೆಗೆ ಸಿಗಬೇಕು ಎಂಬುದು ಪ್ರತಿ ಮಹಿಳೆಯ ಆಶಯವಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *