ಕನ್ನಡ ಕಿರುತೆರೆಯ ಯಶಸ್ವಿ ನಿರ್ದೇಶಕ ಸಾವಿಗೆ ಶರಣು – ಶಾಂತಂ ಪಾಪಂ, ಕರಿಮಣಿ ನಿರ್ದೇಶಕ ವಿನೋದ್ ಜೀವಾಂತ್ಯ ಮಾಡಿಕೊಂಡಿದ್ದೇಕೆ?
ನ್ಯೂಸ್ ಆ್ಯರೋ : ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಅವರು ಬೆಂಗಳೂರಿನ ನಾಗರಬಾವಿಯಲ್ಲಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಸಾವಿಗೆ ಶರಣಾಗಿದ್ದಾರೆ.
ಸದ್ಯ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಅತಿಥಿ, ಬೇರು, ತುತ್ತೂರಿ, ವಿಮುಕ್ತಿ ಸೇರಿದಂತೆ ಹಲವು ಚಿತ್ರಗಳಲ್ಲಿ ವಿನೋದ್ ಅವರು ಕೆಲಸ ಮಾಡಿದ್ದರು. ಕರಿಮಣಿ, ಶಾಂತಂ ಪಾಪಂ ಸೇರಿದಂತೆ ಅನೇಕ ಧಾರವಾಹಿಗಳಿಗೆ ವಿನೋದ್ ನಿರ್ದೇಶನ ಮಾಡಿದ್ದಾರೆ. ನಿನಾಸಂ ಸತೀಶ್ ನಟನೆಯ ‘ಅಶೋಕ ಬ್ಲೇಡ್’ ಚಿತ್ರ ನಿರ್ದೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಇನ್ನೇನು ಮುಂದಿನ ವಾರದಿಂದ ಸಿನಿಮಾದ ಚಿತ್ರೀಕರಣ ಶುರು ಮಾಡಬೇಕಿತ್ತು. ಆದರೆ ಅದಕ್ಕೂ ಮೊದಲೇ ಅವರು ಸಾವಿಗೆ ಶರಣಾಗಿದ್ದಾರೆ.
ಕಳೆದ ಎರಡು ವರ್ಷಗಳಿಂದಲೂ ಚಿತ್ರದ ಶೂಟಿಂಗ್ ಕುಂಟುತ್ತಲೇ ಸಾಗಿತ್ತು. ನಿರ್ಮಾಪಕರಾಗಿದ್ದರಿಂದ ಸಾಲದ ಸುಳಿಗೆ ಸಿಲುಕಿದ್ದ ವಿನೋದ್ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನಿನ್ನೆ ನಿನಾಸಂ ಸತೀಶ್ ಮತ್ತು ಚಿತ್ರತಂಡದ ಜೊತೆ ಮಾತನಾಡಿ ವಿನೋದ್ ಮನೆಗೆ ಹಿಂತಿರುಗಿದ್ದರು ಎನ್ನಲಾಗಿದೆ.
Leave a Comment