ಆಸ್ಕರ್‌ ಪ್ರಶಸ್ತಿಯನ್ನೂ ಮಾರಾಟ ಮಾಡಿದ್ರೆ ಸಿಗುದು ಕೇವಲ ₹82: ಅಚ್ಚರಿಯಾದ್ರೂ ಇದು ನಿಜ…

ಆಸ್ಕರ್‌ ಪ್ರಶಸ್ತಿಯನ್ನೂ ಮಾರಾಟ ಮಾಡಿದ್ರೆ ಸಿಗುದು ಕೇವಲ ₹82: ಅಚ್ಚರಿಯಾದ್ರೂ ಇದು ನಿಜ…

ನ್ಯೂಸ್‌ ಆ್ಯರೋ : ಸದ್ಯ ಸುದ್ದಿಯಲ್ಲಿರುವ ಟಾಪ್ ವಿಷಯಗಳಲ್ಲಿ ಆಸ್ಕರ್‌ ಪ್ರಶಸ್ತಿ ಸಮಾರಂಭವೂ ಒಂದಾಗಿದೆ. ಭಾರತೀಯ ಕಾಲಮಾನದ ಪ್ರಕಾರ ಮಾರ್ಚ್ 13ರಂದು ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ಈ ಸಮಾರಂಭಕ್ಕಾಗಿ ಒಂದು ತಿಂಗಳಿಂದ ನಿರಂತರವಾಗಿ ಅಕಾಡೆಮಿಯು ಹಗಲಿರುಳು ಕೆಲಸ ಮಾಡುತ್ತಿದ್ದು, ಈ ಬಾರಿ ಬಹಳ ನಿರೀಕ್ಷೆಯನ್ನು ಹುಟ್ಟಿಸಿದ್ದವು.

ಇದೀಗ ಆಸ್ಕರ್ ಪ್ರಶಸ್ತಿ ಮೌಲ್ಯದ ಕುರಿತು ಹಲವು ದಿನಗಳಿಂದ ಚರ್ಚೆಯಾಗುತ್ತಿರುವ ವಿಷಯ. ಯಾಕೆಂದರೆ ಈ ಪ್ರಶಸ್ತಿಯನ್ನು ಮಾರಾಟ ಮಾಡಿದರೆ ಅದರ ಬೆಲೆ ಕೇವಲ ₹82 ಆಗಿರುತ್ತದೆ. ಅಚ್ಚರಿಯಾದರೂ ಇದು ನಿಜ. ಈ ಮೌಲ್ಯವನ್ನು ಅಕಾಡೆಮಿ ನಿರ್ಧರಿಸಿ ತಿಳಿಸಿದ್ದು, ಒಂದು ವೇಳೆ ಪ್ರಶಸ್ತಿ ವಿಜೇತರೂ ಈ ಪ್ರಶಸ್ತಿಯನ್ನು ಮಾರಾಟ ಮಾಡಲು ಬಯಸಿದರೆ ಅದನ್ನು ಅಕಾಡೆಮಿಗೆ ಬಿಟ್ಟು ಬೇರೆಲ್ಲೂ ಮಾರುವಂತಿಲ್ಲ ಎಂದು ಕಂಡೀಷನ್ ಹಾಕಿದೆ. ಮಾರುವುದಾದರೆ ಅದನ್ನು ಅಕಾಡೆಮಿಗೆ ವಾಪಸ್ಸು ಮಾರಬೇಕು. ಈ ಕಾರಣದಿಂದಾಗಿಯೇ ಅತೀ ಕಡಿಮೆ ಬೆಲೆಯನ್ನು ನಿಗದಿ ಮಾಡಿದೆ. ಈ ಪ್ರಶಸ್ತಿಯನ್ನೂ ಯಾರು ಮಾರಟ ಮಾಡಬಾರದು ಎನ್ನುವ ಉದ್ದೇಶವೂ ಇದರ ಹಿಂದಿದೆ. ಪ್ರಶಸ್ತಿ ನೀಡುವಾಗಲೇ ವಿಜೇತರು ಒಪ್ಪಂದಕ್ಕೆ ಸಹಿ ಕೂಡ ಮಾಡಬೇಕಾಗುತ್ತದೆ.

ಮಾರಾಟದ ಬೆಲೆ ₹82 ಆದರೆ, ಅದನ್ನು ತಯಾರಿಸುವ ವೆಚ್ಚ ಬರೋಬ್ಬರಿ ₹32,813. ಬಂಗಾರದ ಬಣ್ಣದ 13.5 ಇಂಚು ಎತ್ತರದ ಮೂರ್ತಿ ಇದಾಗಿದ್ದು, ತಲೆ ಮೇಲೆ ಕೂದಲು ಇಲ್ಲದ ವ್ಯಕ್ತಿಯೊಬ್ಬ ಕತ್ತಿಯೊಂದನ್ನು ಹಿಡಿದುಕೊಂಡು ನಿಂತಿರುವ ಮೂರ್ತಿ ಇದಾಗಿದೆ. ಪ್ರಶಸ್ತಿ ವಿಜೇತರಿಗೆ ಯಾವುದೇ ಗೌರವ ಮೊತ್ತವನ್ನು ನೀಡದೇ ಕೇವಲ ಈ ಮೂರ್ತಿಯನ್ನು ಮಾತ್ರ ನೀಡಲಾಗುತ್ತದೆ.

ಆಸ್ಕರ್ 2023 ಆಸ್ಕರ್‌ ಪ್ರಶಸ್ತಿ ಪ್ರದಾನ ಸಮಾರಂಭವು ಅಮೆರಿಕಾದ ಲಾಸ್ ಏಂಜಲೀಸ್ ನ ಡಾಲ್ಬಿ ಥಿಯೇಟರ್ ನಲ್ಲಿ ನಡೆದಿದ್ದು, ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದ್ದವು. ರಾಜಮೌಳಿ ನಿರ್ದೇಶನದ ಆರ್‌ ಆರ್‌ ಆರ್‌ ಸಿನಿಮಾದ ‘ನಾಟು ನಾಟು’ ಹಾಡಿಗೆ ಹಾಗೂ ದಿ ಎಲಿಫೆಂಟ್ ವಿಸ್ಪರರ್ಸ್ ಎಂಬ ಸಾಕ್ಷ್ಯ ಚಿತ್ರಕ್ಕೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಲಭಿಸಿದೆ. ಕನ್ನಡತಿ ನಟಿ ದೀಪಿಕಾ ಪಡುಕೋಣೆ ಈ ಕಾರ್ಯಕ್ರಮದ ನಿರೂಪಣೆ ಮಾಡಿದ್ದು ಭಾರತೀಯರಿಗೆ ಇನ್ನು ವಿಶೇಷವಾಗಿತ್ತು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *