ಫೋನ್ ನಲ್ಲಿ ಮಾತನಾಡುತ್ತಿದ್ದ ಮಹಿಳೆಗೆ ಬಲವಂತದ ಡೀಪ್ ಕಿಸ್ – ಕಾಮುಕನ ನೀಚ ಕೃತ್ಯ ಸಿಸಿಟಿವಿಯಲ್ಲಿ ಸೆರೆ, ವಿಡಿಯೋ ವೈರಲ್..!!

ಫೋನ್ ನಲ್ಲಿ ಮಾತನಾಡುತ್ತಿದ್ದ ಮಹಿಳೆಗೆ ಬಲವಂತದ ಡೀಪ್ ಕಿಸ್ – ಕಾಮುಕನ ನೀಚ ಕೃತ್ಯ ಸಿಸಿಟಿವಿಯಲ್ಲಿ ಸೆರೆ, ವಿಡಿಯೋ ವೈರಲ್..!!

ನ್ಯೂಸ್ ಆ್ಯರೋ : ಸೀರಿಯಲ್ ಕಿಲ್ಲರ್ ಬಗ್ಗೆ ಆಗಾಗ ಸುದ್ದಿಗಳನ್ನು ಓದಿರುತ್ತೀರಿ.‌ ಆದರೆ ಸೀರಿಯಲ್‌ ಕಿಸ್ಸರ್ ಬಗ್ಗೆ ನಿಮಗ್ಗೊತ್ತಾ? ಇಂತಹ‌ ಕಾಮುಕ ಸೀರಿಯಲ್‌ ಕಿಸ್ಸರ್ ನ ಕಿಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನ ವಿರುದ್ಧ ಭಾರೀ‌ ಆಕ್ರೋಶ ಕೇಳಿಬಂದಿದೆ.

ಬಿಹಾರದ ಜಮುಯಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ದುಷ್ಕರ್ಮಿಯೊಬ್ಬ ಮಹಿಳೆಗೆ ಬಲವಂತವಾಗಿ ಚುಂಬಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ.

ಸಂತ್ರಸ್ತೆ ಜಮುಯಿಯಲ್ಲಿರುವ ಸದರ್ ಆಸ್ಪತ್ರೆಯಲ್ಲಿ ಆರೋಗ್ಯ ಕಾರ್ಯಕರ್ತೆಯಾಗಿದ್ದು, ಮಾರ್ಚ್ 10 ರಂದು ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ದುಷ್ಕರ್ಮಿಯು ಆಸ್ಪತ್ರೆಯ ಗೋಡೆ ಹಾರಿ ಸಂತ್ರಸ್ತೆ ಫೋನ್‌ನಲ್ಲಿ ಮಾತನಾಡುವುದನ್ನು ಕಂಡು ನಂತರ ಅವಳನ್ನು ಹಿಡಿದು ಮುತ್ತಿಟ್ಟಿದ್ದಾನೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆಯು ಜಮುಯಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ವರದಿಗಳ ಪ್ರಕಾರ ಘಟನೆ ನಂತರ ದುಷ್ಕರ್ಮಿ ಸ್ಥಳದಿಂದ ಪರಾರಿಯಾಗಿದ್ದಾನೆ. ಸಂತ್ರಸ್ತೆ ಆಸ್ಪತ್ರೆಯಲ್ಲಿ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೋರಿದ್ದಾರೆ ಮತ್ತು ಆಗಾಗ್ಗೆ ಆಸ್ಪತ್ರೆಗೆ ಭೇಟಿ ನೀಡುವ ಮಹಿಳೆಯರನ್ನು ರಕ್ಷಿಸಲು ಮುಳ್ಳು ಬೇಲಿಯನ್ನು ಅಳವಡಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ಅನೇಕರು ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯದಿಂದ ಮಹಿಳೆಯರನ್ನು ರಕ್ಷಿಸಲು ಕಠಿಣ ಕಾನೂನುಗಳಿಗೆ ಕರೆ ನೀಡಿದ್ದಾರೆ. ಅಲ್ಲದೇ ‌ಇಂತಹ ಘಟನೆ ದೇಶದಲ್ಲೇ ಮೊದಲು ಎನ್ನಲಾಗಿದ್ದು, ಪೋಲಿಸರು ಕಾಮುಕನಿಗೆ ಬಲೆ ಬೀಸಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *