ಚುನಾವಣೆಗೂ‌ ಮುನ್ನ 19 ಹೊಸ ಜಿಲ್ಲೆ ಘೋಷಿಸಿದ ರಾಜಸ್ಥಾನ ಸರ್ಕಾರ – ಅಶೋಕ್‌ ಗೆಹ್ಲೋಟ್‌ ನಿರ್ಧಾರಕ್ಕೆ ಬಿಜೆಪಿ ಟೀಕೆ, ಚುನಾವಣೆ ಗಿಮಿಕ್‌ ಎಂದ ವಸುಂಧರಾ ರಾಜೆ

ಚುನಾವಣೆಗೂ‌ ಮುನ್ನ 19 ಹೊಸ ಜಿಲ್ಲೆ ಘೋಷಿಸಿದ ರಾಜಸ್ಥಾನ ಸರ್ಕಾರ – ಅಶೋಕ್‌ ಗೆಹ್ಲೋಟ್‌ ನಿರ್ಧಾರಕ್ಕೆ ಬಿಜೆಪಿ ಟೀಕೆ, ಚುನಾವಣೆ ಗಿಮಿಕ್‌ ಎಂದ ವಸುಂಧರಾ ರಾಜೆ

ನ್ಯೂಸ್‌ ಆ್ಯರೋ : ರಾಜಸ್ಥಾನ ಸರ್ಕಾರವು 19 ಹೊಸ ಜಿಲ್ಲೆಗಳು ಮತ್ತು ಮೂರು ವಿಭಾಗೀಯ ಕೇಂದ್ರಗಳನ್ನು ರಚಿಸುವುದಾಗಿ
ಘೋಷಣೆ ಮಾಡಿದೆ. ಜನರ ಬೇಡಿಕೆಗಳಿಗೆ ಸ್ಪಂದಿಸುವ ದೃಷ್ಟಿಯಿಂದ ಈ ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದಲ್ಲಿ ಒಂದು ಜಿಲ್ಲೆ ಅಥವಾ ತಾಲೂಕು ರಚನೆ ಮಾಡಲು ಅದೆಷ್ಟೋ ವರ್ಷಗಳು ಬೇಕಾಗುತ್ತದೆ. ಆದರೆ, ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾತ್ರ ಒಂದೇ ದಿನದಲ್ಲಿ ಬರೋಬ್ಬರಿ 19 ಹೊಸ ಜಿಲ್ಲೆಗಳ ರಚನೆಯನ್ನು ಘೋಷಿಸುವ ಮೂಲಕ ಸದ್ದು ಮಾಡಿದೆ.

ವಿಭಾಗೀಯ ಕೇಂದ್ರ ಕಚೇರಿಯಿಂದ ದೂರದಲ್ಲಿ ವಾಸಿಸುವ ಜನರ ಅಗತ್ಯತೆಗಳನ್ನು ಪೂರೈಸಲು ಹೊಸ ಜಿಲ್ಲೆಗಳ ರಚನೆಗೆ ನಿರ್ಧಾರ ಮಾಡಲಾಗಿದೆ.

ರಾಜಸ್ಥಾನವು ಭೌಗೋಳಿಕ ವಿಸ್ತೀರ್ಣದಲ್ಲಿ ದೇಶದ ಅತಿದೊಡ್ಡ ರಾಜ್ಯವಾಗಿದೆ. ಕೆಲವು ಪ್ರದೇಶಗಳು ಜಿಲ್ಲಾ ಕೇಂದ್ರದಿಂದ 100 ಕಿ.ಮೀ. ಗಿಂತ ಹೆಚ್ಚು ದೂರದಲ್ಲಿವೆ. ಜನರು ಸುಲಭವಾಗಿ ಜಿಲ್ಲಾ ಕೇಂದ್ರವನ್ನು ತಲುಪಲು ಸಾಧ್ಯವಾಗುತ್ತಿಲ್ಲ ಮತ್ತು ಆಡಳಿತವು ಸಹ ಜನರ ಬಳಿ ತಲುಪಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಜನರ ಶ್ರೇಯೋಭಿವೃದ್ಧಿ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಗೆಹ್ಲೋಟ್ ವಿಧಾನಸಭೆಯಲ್ಲಿ ತಿಳಿಸಿದರು.

ಜಿಲ್ಲೆಗಳು ಚಿಕ್ಕದಾಗಿದ್ದರೆ ಅದು ಪರಿಣಾಮಕಾರಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಉತ್ತಮ ಆಡಳಿತವನ್ನು ಒದಗಿಸಬಹುದು ಎಂದಿರುವ ಅವರು, ಹೊಸ ಜಿಲ್ಲೆಗಳನ್ನು ರಚಿಸುವ ಮೊದಲ ಹಂತದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮತ್ತು ಮಾನವ ಸಂಪನ್ಮೂಲಕ್ಕಾಗಿ ₹ 2,000 ಕೋಟಿ ಅನುದಾನವನ್ನು ನೀಡುವುದಾಗಿಯೂ ಘೋಷಿಸಿದ್ದಾರೆ.

ರಾಜಸ್ಥಾನ ರಾಜ್ಯದಲ್ಲಿ ಪ್ರಸ್ತುತ 33 ಜಿಲ್ಲೆಗಳನ್ನು ಹೊಂದಿದೆ. ಹದಿನೈದು ವರ್ಷಗಳ ಹಿಂದೆ ಆಗಿನ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು, ಪ್ರತಾಪಗಢ ಜಿಲ್ಲೆಯನ್ನು ರಚಿಸಿದ್ದರು.

ಹೊಸ ಜಿಲ್ಲೆ ಮತ್ತು ಮೂರು ವಿಭಾಗೀಯ ಕೇಂದ್ರಗಳನ್ನು ರಚನೆಯ ನಿರ್ಧಾರವನ್ನು ಟೀಕಿಸಿರುವ ಪ್ರತಿಪಕ್ಷ ಬಿಜೆಪಿ, ಇದು ಚುನಾವಣೆ ಸಮಯದಲ್ಲಿ ರಾಜ್ಯದ ಜನರನ್ನು ಮರಳು ಮಾಡುವ ತಂತ್ರ. ಅಶೋಕ್ ಗೆಹ್ಲೋಟ್ ಸರ್ಕಾರದ ನಿರ್ಧಾರದ ಹಿಂದಿನ ನಿಜವಾದ ಉದ್ದೇಶವು ವೈಯಕ್ತಿಕ ರಾಜಕೀಯ ಉದ್ದೇಶಗಳನ್ನು ಪೂರೈಸುವುದಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಆದರೆ, ಹೊಸ ಜಿಲ್ಲೆಗಳ ರಚನೆಯನ್ನು ಆಡಳಿತಾರೂಢ ಕಾಂಗ್ರೆಸ್‌ ಸ್ವಾಗತಿಸಿದೆ.



ತಮ್ಮ ರಾಜಕೀಯ ಉದ್ದೇಶಗಳನ್ನು ಈಡೇರಿಸಿಕೊಳ್ಳಲು ಗೆಹ್ಲೋಟ್‌ ಹೊಸ ಜಿಲ್ಲೆಗಳ ರಚನೆಗೆ ಮುಂದಾಗಿದ್ದಾರೆ. ಹೊಸ ಜಿಲ್ಲೆಗಳನ್ನು ಘೋಷಿಸಿದ ವಿಧಾನವು ರಾಜ್ಯ ಬಜೆಟ್ ಮತ್ತು ಆರ್ಥಿಕ ರಚನೆಯನ್ನು ಅಪಾಯಕ್ಕೆ ಸಿಲುಕಿಸಿದೆ. ಹೊಸ ಜಿಲ್ಲೆಗಳನ್ನು ಘೋಷಿಸುವಲ್ಲಿ ಅನೇಕ ಪ್ರಮುಖ ಸಮಸ್ಯೆಗಳನ್ನು ಕಡೆಗಣಿಸಲಾಗಿದೆ ಎಂದು ಮಾಜಿ ಸಿಎಂ ವಸುಂಧರಾ ರಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಸ್ಥಾನ ವಿಧಾನಸಭೆಗೆ ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ಈಗಾಗಲೇ ಪ್ರಚಾರವನ್ನು ಆರಂಭಿಸಿವೆ. ಆದರೆ, ಚುನಾವಣೆಗೂ ಮುನ್ನ ಕಾಂಗ್ರೆಸ್ ಆಂತರಿಕ ಬಂಡಾಯ ಎದುರಿಸುತ್ತಿದೆ. ಸಿಎಂ ಗೆಹ್ಲೋಟ್ ಮತ್ತು ಡಿಸಿಎಂ ಸಚಿನ್ ಪೈಲಟ್ ನಡುವಿನ ಮುಸುಕಿನ ಗುದ್ದಾಟ ನಡೆಯುತ್ತಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *