ನಿಮ್ಮ ಪಾನ್‌ಕಾರ್ಡ್‌ಗೆ ಆಧಾರ್‌ ಲಿಂಕ್‌ ಮಾಡಲು ಮಾರ್ಚ್‌ 31 ಕೊನೆಯ ದಿನ – ಲಿಂಕ್‌ ಸ್ಟೇಟಸ್‌ ನೋಡುವ ಸುಲಭ ವಿಧಾನ ಇಲ್ಲಿದೆ..

ನಿಮ್ಮ ಪಾನ್‌ಕಾರ್ಡ್‌ಗೆ ಆಧಾರ್‌ ಲಿಂಕ್‌ ಮಾಡಲು ಮಾರ್ಚ್‌ 31 ಕೊನೆಯ ದಿನ – ಲಿಂಕ್‌ ಸ್ಟೇಟಸ್‌ ನೋಡುವ ಸುಲಭ ವಿಧಾನ ಇಲ್ಲಿದೆ..

ನ್ಯೂಸ್‌ ಆ್ಯರೋ : ಗ್ರಾಹಕರ ಪ್ಯಾನ್​ ಕಾರ್ಡ್​ಗೆ ಆಧಾರ್ ಲಿಂಕ್ ಮಾಡಲು ಇದೇ ಮಾರ್ಚ್‌ 31 ಸರ್ಕಾರ ಗಡುವು ನೀಡಿದ್ದು, ಅಷ್ಟರೊಳಗೆ ಲಿಂಕ್ ಮಾಡದಿದ್ದವರ ಪ್ಯಾನ್​ ಕಾರ್ಡ್​ ಏ.1ರಿಂದ ನಿಷ್ಕ್ರಿಯವಾಗುವ ಸಾಧ್ಯತೆ ಇದೆ.

ಇಂದು ಬಹುತೇಕ ಮಂದಿಯಲ್ಲಿ ಪಾನ್‌ ಕಾರ್ಡ್‌ ಇದೆ. ಹಲವರಿಗೆ ಈಗ ತಮ್ಮ ಪ್ಯಾನ್​- ಆಧಾರ್ ಕಾರ್ಡ್ ಲಿಂಕ್ ಮಾಡಿಸಿದ್ದೇವೋ, ಇಲ್ಲವೋ ಎಂಬ ಅನುಮಾನ ಕಾಡಬಹುದು. ಲಿಂಕ್ ಮಾಡಿಸಿದ್ದರೂ ಏನಾದರೂ ತಾಂತ್ರಿಕ ಕಾರಣದಿಂದಾಗಿ ಡಿ-ಲಿಂಕ್ ಆಗಿದ್ದರೆ ಎಂಬ ಚಿಂತೆಯೂ ಕಾಡಬಹುದು. ಅಂಥವರು ಪ್ಯಾನ್​-ಆಧಾರ್ ಲಿಂಕ್ ಸ್ಟೇಟಸ್​ ಆನ್‌ಲೈನ್​ನಲ್ಲೇ ಸುಲಭವಾಗಿ ಚೆಕ್ ಮಾಡಿಕೊಳ್ಳಲು ಅವಕಾಶವಿದೆ.

ಪ್ಯಾನ್​-ಆಧಾರ್​ ಲಿಂಕ್ ಸ್ಟೇಟಸ್ ಚೆಕ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಕ್ಲಿಕ್​ ಮಾಡಿ– https://eportal.incometax.gov.in/iec/foservices/#/pre-login/link-aadhaar-status

ಈ ಮೇಲಿನ ಲಿಂಕ್ ಕ್ಲಿಕ್ ಮಾಡಿದ ಬಳಿಕ ಒಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಪ್ಯಾನ್ ನಂಬರ್​ ಮತ್ತು ಆಧಾರ್​ ನಂಬರ್​ ಹಾಕಿ ಬಲಭಾಗದಲ್ಲಿ ಕೆಳಗೆ ಇರುವ ‘ವ್ಯೂ ಲಿಂಕ್ ಆಧಾರ್ ಸ್ಟೇಟಸ್’ ಎಂಬುದನ್ನು ಕ್ಲಿಕ್ ಮಾಡಿದರೆ ನಿಮ್ಮ ಪ್ಯಾನ್​-ಆಧಾರ್ ಲಿಂಕ್ ಆಗಿದೆಯೇ ಇಲ್ಲವೇ ಎಂಬುದು ಖಚಿತಪಡುತ್ತದೆ.

ಪ್ಯಾನ್-ಆಧಾರ್ ಲಿಂಕ್ ಮಾಡಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ–
https://eportal.incometax.gov.in/iec/foservices/#/pre-login/bl-link-aadhaar

ಈ ಮೇಲಿನ ಲಿಂಕ್ ಕ್ಲಿಕ್ ಮಾಡುತ್ತಿದ್ದಂತೆ ತೆರೆದುಕೊಳ್ಳುವ ಪುಟದಲ್ಲಿ ನಿಮ್ಮ ಪ್ಯಾನ್​ ಮತ್ತು ಆಧಾರ್ ನಂಬರ್​ಗಳನ್ನು ನಮೂದಿಸಿ. ಮುಂದೆ ಅದು ಸೂಚನೆ ನೀಡಿದ ಪ್ರಕಾರ ಮುಂದುವರಿಯಿರಿ. ಆದರೆ, ಹೀಗೆ ಲಿಂಕ್ ಮಾಡುವಾಗ ₹ 1 ಸಾವಿರ ಶುಲ್ಕ ತೆರಬೇಕಾಗುತ್ತದೆ.

Related post

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ ಪತ್ರ

ಹಾಸನ ಪೆನ್‌ಡ್ರೈವ್ ಪ್ರಕರಣ; 16 ಬೇಡಿಕೆಗಳನ್ನು ಮುಂದಿಟ್ಟು ಸಿಎಂಗೆ ಬಂತು ಬಹಿರಂಗ…

ನ್ಯೂಸ್ ಆರೋ: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು ಸಿಕ್ಕಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಜ್ಞಾವಂತ ನಾಗರೀಕರು ಎಂಬ ಹೆಸರಿನಲ್ಲಿ…
ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ಯಶ್ ಮೂವಿಯಲ್ಲಿ ಶೂರ್ಪನಖಿಯಾಗಿ ಮಿಂಚಲಿದ್ದಾರೆ ರಾಕುಲ್!

ನ್ಯೂಸ್ ಆರೋ: ಕೆಜಿಎಫ್ ನಂತರ ಹಿಟ್ ಸಿನಿಮಾಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿರುವ ಯಶ್ ಇದೀಗ ಮತ್ತೊಂದು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಆ ಚಿತ್ರಕ್ಕೆ ಶೂರ್ಪನಖಿಯಾಗಿ ರಕುಲ್ ಕಾಣಿಸಿಕೊಳ್ಳಲಿದ್ದಾರೆ. ಹೌದು,ಶೂರ್ಪನಕಿಯಾಗಿ…
ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌ ದರ ಇಳಿಕೆ ಮಾಡಿದ ಪಾಕ್‌ ಸರ್ಕಾರ

ಪಾಕ್ ಆಕ್ರಮಿತ ಕಾಶ್ಮೀರ ಜನರಿಗೆ ಬಂಪರ್ ಪ್ಯಾಕೇಜ್; ಆಹಾರ ಉತ್ಪನ್ನಗಳ- ವಿದ್ಯುತ್‌…

ನ್ಯೂಸ್ ಆರೋ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜನರು ಭಾರತಕ್ಕೆ ಸೇರುತ್ತೇವೆ ಎಂದು ನಡೆಸುತ್ತಿದ್ದ ಪ್ರತಿಭಟನೆಗೆ ಪಾಕಿಸ್ತಾನದ ಸರ್ಕಾರ ಮಣಿದಿದೆ. ಹೌದು, ಜನರ ಪ್ರತಿಭಟನೆ ಬೆನ್ನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರದ…

Leave a Reply

Your email address will not be published. Required fields are marked *