ಮಂಗಳೂರು ಜೈಲ್ ಗೆ ನಸುಕಿನ ವೇಳೆ ಪೋಲಿಸರ ದಾಳಿ – ಕಾರ್ಯಾಚರಣೆ ವೇಳೆ ಗಾಂಜಾ, ಮೊಬೈಲ್ ಸೇರಿ ಹಲವು ವಸ್ತುಗಳು ವಶಕ್ಕೆ..!!

Spread the love

ನ್ಯೂಸ್ ಆ್ಯರೋ ‌: ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕೋಡಿಯಾಲ್‌ಬೈಲ್‌ನಲ್ಲಿರುವ ಕಾರಾಗೃಹದ ಮೇಲೆ ನಸುಕಿನ 4 ಗಂಟೆಗೆ ಮಂಗಳೂರಿನ ಕಮೀಷನರ್ ಸೂಚನೆ ಮೇರೆಗೆ ಪೊಲೀಸ್ ಅಧಿಕಾರಿಗಳ ಸಹಿತ 150 ಪೋಲಿಸರು ದಾಳಿ ನಡೆಸಿದ್ದು, ಗಾಂಜಾ, ಮೊಬೈಲ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ದಾಳಿಯ ವೇಳೆ 25 ಮೊಬೈಲ್ ಫೋನ್‌ಗಳು, ಒಂದು ಬ್ಲೂಟೂತ್ ಡಿವೈಸ್, ಐದು ಇಯರ್ ಫೋನ್‌ಗಳು, ಒಂದು ಪೆನ್ ಡ್ರೈವ್, ಐದು ಚಾರ್ಜರ್‌ಗಳು, ಒಂದು ಜೊತೆ ಕತ್ತರಿ, ಮೂರು ಕೇಬಲ್‌ಗಳು, ಜೊತೆಗೆ ಗಾಂಜಾ ಮತ್ತು ಇತರ ಡ್ರಗ್ಸ್ ಪ್ಯಾಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ‌.

ಪೊಲೀಸ್ ಕಮಿಷನರ್ ಮಾರ್ಗದರ್ಶನದಲ್ಲಿ ಇಬ್ಬರು ಡಿಸಿಪಿ, ಮೂವರು ಎಸಿಪಿ, 15 ಇನ್ ಸ್ಪೆಕ್ಟರ್, 150ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಪ್ರತ್ಯೇಕ ತಂಡಗಳನ್ನು ರಚಿಸಿ ಜೈಲಿನ ವಿವಿಧ ಬ್ಯಾರಕ್‌ಗಳಲ್ಲಿ ತಪಾಸಣೆ ನಡೆಸಲಾಯಿತು.‌ ದಾಳಿ ನಡೆಸುವ ಕೊನೆಯ ಕ್ಷಣದ‌ವರೆಗೂ ಗೋಪ್ಯತೆ ಕಾಪಾಡಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

ಸಾಕಷ್ಟು ಭದ್ರತೆ‌ಯ ನಡುವೆಯೂ ಮೊಬೈಲ್ ಫೋನ್ ಮತ್ತಿತರ ಸಾಮಗ್ರಿಗಳು, ಗಾಂಜಾ‌ ಮತ್ತು ಡ್ರಗ್ಸ್‌ಗಳನ್ನು ಜೈಲಿನೊಳಗೆ ಹೇಗೆ ಕೊಂಡೊಯ್ಯಲಾಯಿತು ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ‌.

ಪೊಲೀಸ್ ಕಮಿಷನರ್ ಮಾರ್ಗದರ್ಶನದಲ್ಲಿ ಇಬ್ಬರು ಡಿಸಿಪಿ, ಮೂವರು ಎಸಿಪಿ, 15 ಇನ್ ಸ್ಪೆಕ್ಟರ್, 150ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಪ್ರತ್ಯೇಕ ತಂಡಗಳನ್ನು ರಚಿಸಿ ಜೈಲಿನ ವಿವಿಧ ಬ್ಯಾರಕ್‌ಗಳಲ್ಲಿ ತಪಾಸಣೆ ನಡೆಸಲಾಯಿತು.‌ ದಾಳಿ ನಡೆಸುವ ಕೊನೆಯ ಕ್ಷಣದ‌ವರೆಗೂ ಗೋಪ್ಯತೆ ಕಾಪಾಡಲಾಗಿತ್ತು ಎಂದು ಕಮೀಷನರ್ ಮಾಹಿತಿ ನೀಡಿದ್ದಾರೆ.

Leave a Comment

Leave a Reply

Your email address will not be published. Required fields are marked *