ಎರಡು ತಿಂಗಳಿನಿಂದ ಗೃಹ ಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಏನ್ ಹೇಳಿದ್ರು?
 
			ನ್ಯೂಸ್ ಆ್ಯರೋ : ಕರ್ನಾಟಕದ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳು ನೀಡಲಾಗುವ ಎರಡು ಸಾವಿರ ರೂಪಾಯಿಗಳ ಗೃಹ ಲಕ್ಷ್ಮಿ ಯೋಜನೆಯ 2 ತಿಂಗಳ ಬಾಕಿ ಹಣ 10 ದಿನಗಳ ಒಳಗಾಗಿ ಫಲಾನುಭವಿಗಳ ಖಾತೆಗೆ ಹಾಕಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.
ಮಹಿಳೆಯರಿಗಾಗಿಯೇ ಮಾಡಲಾಗಿರುವ ಈ ಯೋಜನೆಯನ್ನು ಮಹಿಳೆಯ ಆರ್ಥಿಕ ಸಬಲೀಕರಣಕ್ಕಾಗಿ ಕೊಡಲಾಗುತ್ತಿದೆ. ಚುನಾವಣೆ ಪೂರ್ವದಲ್ಲೇ ರಾಜ್ಯದ ಮಹಿಳೆಯರಿಗೆ ಈ ಭರವಸೆ ನೀಡಲಾಗಿತ್ತು. ಹಾಗಾಗಿ ಯಾವುದೇ ಕಾರಣಕ್ಕೂ ಗೃಹ ಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವುದಿಲ್ಲ. ಸದ್ಯ ತಾಂತ್ರಿಕ ದೋಷದಿಂದ ಇದೀಗ ತಡವಾಗಿದೆ. ಈಗಾಗಲೇ ಹಣವನ್ನು ಡಿಪಿಟಿಗೆ ಫುಶ್ ಮಾಡಿದ್ದೇವೆ. ಕೆಲವೇ ದಿನಗಳಲ್ಲಿ ಮಹಿಳೆಯರ ಖಾತೆಗೆ ಜಮೆ ಆಗಲಿದೆ ಎಂದು ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೇಲೆ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳಿಗೆ ಮೇ ತಿಂಗಳವರೆಗೆ ಸರಿಯಾಗಿ ಜಮಾ ಆಗುತ್ತಿತ್ತು.
ಆದರೆ ಮೇ ತಿಂಗಳ ಬಳಿಕ ಗೃಹಲಕ್ಷ್ಮಿ ಹಣ ಫಲಾನುಭವಿಗಳಿಗೆ ಬಂದಿಲ್ಲ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೇಲೆ ಆಸಕ್ತಿ ವಹಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಈ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರತಿಕ್ರಿಯಿಸಿ 2 ತಿಂಗಳ ಬಾಕಿ ಹಣವನ್ನು 10 ದಿನಗಳೊಳಗೆ ಫಲಾನುಭವಿಗಳ ಖಾತೆಗೆ ಹಾಕಲಾಗುವುದು ಎಂದು ಭರವಸೆ ನೀಡಿದ್ದಾರೆ.

 
      
                                 
                                 
                                
Leave a Comment