ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಹುದ್ದೆಗೆ SSLC ಪಾಸಾದವರು ಅರ್ಜಿ ಸಲ್ಲಿಸಿ – ಸುಮಾರು 63 ಸಾವಿರ ವೇತನ, ಮಾಹಿತಿ ಇಲ್ಲಿದೆ…

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಹುದ್ದೆಗೆ SSLC ಪಾಸಾದವರು ಅರ್ಜಿ ಸಲ್ಲಿಸಿ – ಸುಮಾರು 63 ಸಾವಿರ ವೇತನ, ಮಾಹಿತಿ ಇಲ್ಲಿದೆ…

ನ್ಯೂಸ್ ಆ್ಯರೋ : ಭಾರತೀಯ ಅಂಚೆ ಇಲಾಖೆಯಲ್ಲಿ ಇರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಬಿಡುಗಡೆ ಮಾಡಲಾದ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 19 ಸಾವಿರದಿಂದ 63 ಸಾವಿರದವರೆಗೆ ವೇತನ ದೊರಕಲಿದೆ‌.

ಈ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿಯನ್ನು ಇಲ್ಲಿ ನೀಡಲಾಗಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ವರದಿ ಓದಿ..

ವಿದ್ಯಾರ್ಹತೆ ವಿವರ :

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ :

ಮೇ 14, 2023 ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಆಗಿರಬೇಕು ಹಾಗೂ 27 ವರ್ಷ ವಯಸ್ಸು ಮೀರಿರಬಾರದು.

ಖಾಲಿ ಹುದ್ದೆಗಳು:

ಒಟ್ಟು ನಾಲ್ಕು ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳು ಖಾಲಿಯಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 14 ರೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಆಯ್ಕೆ ಪ್ರಕ್ರಿಯೆ :

ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಡ್ರೈವಿಂಗ್ ಟೆಸ್ಟ್, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ :

ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳೊಂದಿಗೆ ಅಂಚೆ ಇಲಾಖೆ, ಆಡಳಿತ ವಿಭಾಗ, ನವದೆಹಲಿ – 110001 ಗೆ ಕಳುಹಿಸಬೇಕು.

ಅರ್ಜಿ ಶುಲ್ಕ :

  • ಇತರೆ ಹಿಂದುಳಿದ ವರ್ಗ : ರೂ 100/-
  • ಪರಿಶಿಷ್ಟ ಜಾತಿ : ರೂ 100/-
  • ಪರಿಶಿಷ್ಟ ಪಂಗಡ : ರೂ 100/-
  • PwD : ರೂ 100/-

ಈ ಕೆಳಗಿನ ಮಾರ್ಗಸೂಚಿಗಳನ್ನು ಬಳಸಿಕೊಂಡು, ನೀವು ಆನ್‌ಲೈನ್ ಇಂಡಿಯಾ ಪೋಸ್ಟ್ ಆಫೀಸ್ ನೇಮಕಾತಿಗೆ ಅರ್ಜಿ ಸಲ್ಲಿಸಿ…

  • ಮೊದಲು ಇಂಟರ್ನೆಟ್ ಬ್ರೌಸರ್‌ಗೆ ಹೋಗಿ ಮತ್ತು ನಂತರ indiapost.gov.in ಗೆ ಭೇಟಿ ನೀಡಬೇಕು.
  • ಅದರ ನಂತರ, ಅಭ್ಯರ್ಥಿಗಳು ನೇಮಕಾತಿ ಬಟನ್ ಅನ್ನು ಟ್ಯಾಪ್ ಮಾಡಬೇಕು ಮತ್ತು ನೋಂದಣಿಗಾಗಿ ಮುಂದೆ ಹೋಗಬೇಕು.
  • ನೀವು ಅರ್ಜಿ ಸಲ್ಲಿಸಲು ಬಯಸುವ ಖಾಲಿ ಹುದ್ದೆಯನ್ನು ಆಯ್ಕೆ ಮಾಡಿ ಮತ್ತು ನಂತರ ಭಾರತ ಪೋಸ್ಟ್ ನೇಮಕಾತಿ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಪ್ರಾರಂಭಿಸಬೇಕು.
  • ಅಗತ್ಯವಿರುವ ವಿವರಗಳನ್ನು ಪೂರ್ಣಗೊಳಿಸಿ ಮತ್ತು ನಂತರ ನಿಮ್ಮ ಸಹಿ, ಫೋಟೋ, ಮಾರ್ಕ್‌ಶೀಟ್‌ಗಳು ಇತ್ಯಾದಿಗಳನ್ನು ಅಪ್‌ಲೋಡ್ ಮಾಡಬೇಕು.
  • ಅರ್ಜಿ ನಮೂನೆಯನ್ನು ಸಲ್ಲಿಸಿ, ಅರ್ಜಿ ಶುಲ್ಕವನ್ನು ಪಾವತಿಸಿ ಮತ್ತು ನಿಮ್ಮ ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು.
  • ಫಾರ್ಮ್‌ನಲ್ಲಿ ನೀವು ನಮೂದಿಸಿದ ಎಲ್ಲಾ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಮತ್ತು ನೀವು ಯಾವುದೇ ದೋಷವನ್ನು ಕಂಡುಕೊಂಡರೆ ತಕ್ಷಣವೇ ತಿದ್ದುಪಡಿ ಮಾಡಬೇಕು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *