ವೇಶ್ಯೆಯರ ಜೊತೆ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿಗಿತ್ತು ಸಂಬಂಧ – ಮಾಜಿ ಪತಿ ವಿರುದ್ಧ ಕಾನೂನು ಸಮರ ತೀವ್ರಗೊಳಿಸಿದ ಹಸೀನ್ ಮಾಡಿದ ಆರೋಪಗಳೇನು?

ವೇಶ್ಯೆಯರ ಜೊತೆ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿಗಿತ್ತು ಸಂಬಂಧ – ಮಾಜಿ ಪತಿ ವಿರುದ್ಧ ಕಾನೂನು ಸಮರ ತೀವ್ರಗೊಳಿಸಿದ ಹಸೀನ್ ಮಾಡಿದ ಆರೋಪಗಳೇನು?

ನ್ಯೂಸ್ ಆ್ಯರೋ‌ : ಕ್ರಿಕೆಟಿಗ ಮೊಹಮ್ಮದ್ ಶಮಿ ವಿರುದ್ಧ ಪತ್ನಿ ಹಸೀನ್ ಜಹಾನ್ ಕಾನೂನು ಸಮರಕ್ಕೆ ಇಳಿದಿದ್ದಾರೆ. ಪತಿಯ ವಿರುದ್ಧ ಗಂಭೀರ ಆರೋಪ ಹೊರಿಸಿರುವ ಹಸೀನ್ ಸುಪ್ರೀಂ ಕೋರ್ಟ್‍ಗೆ ಮೊರೆ ಹೋಗಿದ್ದಾರೆ. ಶಮಿಯ ಬಂಧನದ ವಾರೆಂಟ್‍ಗೆ ಸ್ಥಳೀಯ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ಹಿಂತೆಗೆದುಕೊಳ್ಳುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕೋಲ್ಕತ್ತಾ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.

ಕೋಲ್ಕತ್ತಾ ಹೈಕೋರ್ಟ್ ಮಾ. 28, 2023ರಂದು ನೀಡಿದ್ದ ಆದೇಶವನ್ನು ಹಸೀನ್ ಪ್ರಶ್ನಿಸಿದ್ದಾರೆ. ಪಶ್ಚಿಮ ಬಂಗಾಳದ ಸೆಷನ್ಸ್ ಕೋರ್ಟ್ ಶಮಿ ವಿರುದ್ಧ ಹೊರಡಿಸಿದ್ದ ಬಂಧನ ವಾರೆಂಟ್ ಗೆ ತಡೆ ನೀಡಿತ್ತು. ಸೆಷನ್ಸ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸುವಂತೆ ಮಾಡಿದ್ದ ಮನವಿಯನ್ನು ಹೈಕೋರ್ಟ್‍ನಲ್ಲಿ ವಜಾಗೊಳಿಸಲಾಗಿದೆ.

2019ರ ಆ. 9ರಂದು ಅಲಿಪುರದ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಶಮಿ ವಿರುದ್ಧ ಬಂಧನದ ವಾರೆಂಟ್ ಹೊರಡಿಸಿದ್ದರು. ಸೆ. 9ರಂದು ಬಂಧನದ ವಾರೆಂಟ್ ಮತ್ತು ಕ್ರಿಮಿನಲ್ ವಿಚಾರಣೆಯ ಪ್ರಕ್ರಿಯೆಗೆ ಸೆಷನ್ಸ್ ನ್ಯಾಯಾಲಯ ತಡೆ ನೀಡಿತ್ತು. ಹೀಗಾಗಿ ಹಸೀನ್ ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ.

ಶಮಿ ವರದಕ್ಷಿಣೆಗಾಗಿ ಬೇಡಿಕೆ ಇಡುತ್ತಿದ್ದ, ವೇಶ್ಯೆಯರೊಂದಿಗೆ ಸಂಪರ್ಕ ಹೊಂದಿದ್ದ ಎಂದು ಹಸೀನ್ ಆರೋಪಿಸಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *