12 ವರ್ಷಗಳ ಬಳಿಕ ಪಾಕಿಸ್ತಾನದ ಸಚಿವರ ಭಾರತ ಪ್ರವಾಸ – 600 ಮಂದಿ ಸೆರೆಯಾಳುಗಳನ್ನು ಬಿಡುಗಡೆ ಮಾಡಲಿದ್ಯಾ ಪಾಕ್?

12 ವರ್ಷಗಳ ಬಳಿಕ ಪಾಕಿಸ್ತಾನದ ಸಚಿವರ ಭಾರತ ಪ್ರವಾಸ – 600 ಮಂದಿ ಸೆರೆಯಾಳುಗಳನ್ನು ಬಿಡುಗಡೆ ಮಾಡಲಿದ್ಯಾ ಪಾಕ್?

ನ್ಯೂಸ್ ಆ್ಯರೋ‌ : ಗೋವಾದಲ್ಲಿ ಶಾಂಘೈ ಸಹಕಾರ ಒಕ್ಕೂಟದ ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರ ಶೃಂಗಸಭೆ ಆಯೋಜಿಸಿದ್ದು, ಪಾಕಿಸ್ತಾನದ ಸಚಿವ ಬಿಲಾವಲ್ ಭುಟ್ಟೋ ಪಾಲ್ಗೊಂಡಿದ್ದಾರೆ. ಈ ಮೂಲಕ 12 ವರ್ಷಗಳ ಬಳಿಕ ಪಾಕಿಸ್ತಾನದ ಸಚಿವರೊಬ್ಬರು ಭಾರತಕ್ಕೆ ಭೇಟಿ ನೀಡಿದಂತಾಗಿದೆ. 2011ರಲ್ಲಿ ಪಾಕ್ ವಿದೇಶಾಂಗ ಸಚಿವೆ ಹೀನಾ ರಬ್ಬಾನಿ ಭಾರತಕ್ಕೆ ಭೇಟಿ ನೀಡಿದ್ದರು.

ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿ ಹೋಗಿರುವ ಪಾಕಿಸ್ತಾನ ಬಿಲಾವಲ್ ಭಾರತ ಭೇಟಿ ಬೆನ್ನಲ್ಲೇ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ತನ್ನ ವಶದಲ್ಲಿರುವ ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಹೌದು, ಭಾರತದ ಜೊತೆ ಸ್ನೇಹ ಸಂಬಂಧ ಹೊಂದಲು ಕಾತರಿಸುತ್ತಿರುವ ಪಾಕಿಸ್ತಾನ ಗಡಿ ಉಲ್ಲಂಘಿಸಿದ ಕಾರಣಕ್ಕೆ ತನ್ನ ಜೈಲುಗಳಲ್ಲಿರುವ ಒಟ್ಟು 600 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಲು ಯೋಜನೆ ರೂಪಿಸಿದೆ.

ಮೇ 12ರಂದು 200 ಹಾಗೂ ಮೇ 14ರಂದು 400 ಮಂದಿಯನ್ನು ಬಿಡುಗಡೆ ಮಾಡಲಾಗುತ್ತದೆ ಎನ್ನಲಾಗಿದೆ. ಈ ಮೂಲಕ ಭಾರತ ತನ್ನ ಮೇಲೆ ಹೊಂದಿರುವ ಅಸಮಾಧಾನವನ್ನು ಒಂದಷ್ಟು ಕಡಿಮೆಗೊಳಿಸಬಹುದು ಎಂದು ಪಾಕಿಸ್ತಾನ ಚಿಂತನೆ ನಡೆಸಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಈ ಮೊದಲಿನಿಂದಲೂ ಭಾರತೀಯ ಮೀನುಗಾರರ ಬಿಡುಗಡೆಗೆ ಒತ್ತಡ ಹೇರುತ್ತಿದೆ.

ಪಾಕಿಸ್ತಾನದ ಜೈಲುಗಳಲ್ಲಿರುವ ಒಟ್ಟು 705 ಮಂದಿ ಭಾರತೀಯರ ಪೈಕಿ 654 ಮಂದಿ ಮೀನುಗಾರರು ಎಂದು ವರದಿ ಹೇಳಿದೆ. ಇತ್ತ ಭಾರತದ ಜೈಲಿನಲ್ಲಿ 434 ಮಂದಿ ಪಾಕಿಸ್ತಾನಿಗಳಿದ್ದು, ಈ ಪೈಕಿ 95 ಮಂದಿ ಮೀನುಗಾರರು.

ಹಸ್ತಾಂತರ ಹೇಗೆ?

ಮೊದಲ ಹಂತದಲ್ಲಿ ಬಿಡುಗಡೆಯಾಗಲಿರುವ 200 ಮಂದಿಯನ್ನು ಈದಿ ಫೌಂಡೇಶನ್ ರಸ್ತೆ ಮಾರ್ಗದ ಮೂಲಕ ಲಾಹೋರ್ ಗೆ ಕರೆ ತರಲಿದ್ದು, ಬಳಿಕ ವಾಘಾ ಗಡಿಯಲ್ಲಿ ಭಾರತೀಯ ಯೋಧರಿಗೆ ಒಪ್ಪಿಸಲಾಗುತ್ತದೆ ಎನ್ನಲಾಗಿದೆ..

Related post

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ ಸೂಪರ್

ಸಂಜೆಯ ಸ್ನ್ಯಾಕ್ಸ್‌ಗೆ ಮಾಡಿ ರುಚಿರುಚಿಯಾದ ಗೋಧಿ ಉಸ್ಲಿ; ಆರೋಗ್ಯಕ್ಕೂ ಒಳ್ಳೆಯದು, ರುಚಿನೂ…

ನ್ಯೂಸ್ ಆರೋ: ಆರೋಗ್ಯಕ್ಕೆ ಹಿತ ಎನಿಸುವ ಹಾಗೂ ರುಚಿಕಟ್ಟಾದ ರೆಸಿಪಿಯೊಂದನ್ನು ನಾವಿಂದು ಹೇಳಿಕೊಡುತ್ತೇವೆ. ಈ ಗೋಧಿ ಉಸ್ಲಿ ರೆಸಿಪಿಯನ್ನು ನೀವು ಬೇಕೆಂದರೆ ಸ್ನ್ಯಾಕ್ಸ್ ಆಗಿಯೂ ಬೆಳಗ್ಗಿನ ಉಪಾಹಾರವಾಗಿಯೂ ಮಾಡಿ…
ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ ಆಯ್ಕೆ

ನವೋದಯ ವಿದ್ಯಾಲಯ ಸಮಿತಿ ಇಂದ ಶಿಕ್ಷಕರ ನೇಮಕ; ನೇರ ಸಂದರ್ಶನದ ಮೂಲಕ…

ನ್ಯೂಸ್ ಆರೋ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 2 ಪ್ರಾಜೆಕ್ಟ್​ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ…
ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ತೆಲಂಗಾಣ ಚುನಾವಣೆ; ಸರತಿ ಸಾಲಿನಲ್ಲಿ ನಿಂತು ವೋಟ್ ಮಾಡಿದ ಟಾಲಿವುಡ್ ತಾರೆಯರು…!

ನ್ಯೂಸ್ ಆ್ಯರೋ : ಇಂದು  4ನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯುತ್ತಿದ್ದು, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಹಲವೆಡೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಇದೀಗ ಸಾಮಾನ್ಯರಂತೆಯೇ ಸರತಿ…

Leave a Reply

Your email address will not be published. Required fields are marked *