ಮುಂದುವರಿದ ಮಳೆಯ ಆರ್ಭಟ, ಮಕ್ಕಳಿಗೆ ಸಾಲು ಸಾಲು ರಜೆ – ನಾಳೆಯೂ ಕೂಡ ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಪಿಯುಸಿವರೆಗಿನ ಮಕ್ಕಳಿಗೆ ಶಾಲೆಗೆ ರಜೆ
ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತ, ದಿನಾಂಕ : 01-08-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 01-08-2024 ರಂದು ರಜೆಯನ್ನು ಘೋಷಿಸಿದೆ.
ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ, ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು.
ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಜಿಲ್ಲೆಯಲ್ಲಿ ವಿಪರೀತ್ರ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು.
ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.
ತುರ್ತು ಸೇವೆಗೆ 24*7 ಕಂಟ್ರೋಲ್ ರೂಂ
1077/2442590
ಬಂಟ್ವಾಳ ತಾಲೂಕು – 08255-232500
ಪುತ್ತೂರು ತಾಲೂಕು – 02851-230349
ಬೆಳ್ತಂಗಡಿ ತಾಲೂಕು – 08256-232047
ಸುಳ್ಯ ತಾಲೂಕು – 08257-231231
ಮೂಡಬಿದ್ರೆ ತಾಲೂಕು – 08258-238100
ಮುಲ್ಕಿ ತಾಲೂಕು – 0824-2294496
ಅದೇ ರೀತಿ ನಾಳೆ ಉಡುಪಿ ಜಿಲ್ಲೆಯ ಪಿಯುಸಿವರೆಗಿನ ಮಕ್ಕಳಿಗೆ ಶಾಲೆಗೆ ರಜೆ ಘೋಷಿಸಲಾಗಿದೆ.
Leave a Comment