ಸಾನ್ಯಾ ಐಯ್ಯರ್ ಗೆ ಸಂಸ್ಕೃತಿ ಪಾಠ ಮಾಡಿದ ನೆಟ್ಟಿಗರು – ನೆಟ್ಟಿಗರು ‌ಗರಂ ಆಗಲು ಕಾರಣವೇನು?

ಸಾನ್ಯಾ ಐಯ್ಯರ್ ಗೆ ಸಂಸ್ಕೃತಿ ಪಾಠ ಮಾಡಿದ ನೆಟ್ಟಿಗರು – ನೆಟ್ಟಿಗರು ‌ಗರಂ ಆಗಲು ಕಾರಣವೇನು?

ನ್ಯೂಸ್ ಆ್ಯರೋ‌ : ಸೆಲೆಬ್ರಿಟಿ ಫೋಟೋಗ್ರಾಫರ್ ಡಬ್ಬು ರತ್ನಾನಿ ಗ್ಲಾಮರಸ್ ಫೋಟೋ ಶೂಟ್ ಗೆ ಜನಪ್ರಿಯ. ಅನೇಕ ಬಾಲಿವುಡ್ ಕಲಾವಿದರು ಇವರ ಕ್ಯಾಮರಾಕ್ಕೆ ಫೋಸ್ ನೀಡಿದ್ದಾರೆ. ಇದೀಗ ಕನ್ನಡ ಕಿರುತೆರೆ ನಟಿ, ಬಿಗ್ ಬಾಸ್ ಸ್ಪರ್ಧಿ ಸಾನ್ಯಾ ಐಯ್ಯರ್ ಅವರಿಂದ ಫೋಟೋ ಶೂಟ್ ಮಾಡಿಸಿದ್ದು, ಈ ಬೋಲ್ಡ್ ಫೋಟೋಗಳಿಗೆ ಮೆಚ್ಚುಗೆ ಜೊತೆ ಟೀಕೆಯೂ ವ್ಯಕ್ತವಾಗುತ್ತಿದೆ.

ಸಾನ್ಯಾ ಕಪ್ಪು ಬಣ್ಣದ ಡ್ರೆಸ್ ನಲ್ಲಿ ಬೋಲ್ಡ್ ಆಗಿ ಪೋಸ್ ಕೊಟ್ಟಿದ್ದು ಅನೇಕರು ಫೋಟೋಗೆ ಲೈಕ್ಸ್ ಒತ್ತಿದ್ದಾರೆ. ಕೆಲವರು ಅವರನ್ನು ನಟಿ ತಮನ್ನಾ ಅವರೊಂದಿಗೆ ಹೋಲಿಸಿ ಪ್ರಶಂಸಿಸಿದ್ದಾರೆ.

ಇನ್ನು ಕೆಲವರು ನೆಗೆಟಿವ್ ಕಮೆಂಟ್​ ಮಾಡಿದ್ದು, ಡ್ರೆಸ್ ಸರಿ ಇಲ್ಲ ಎಂದು ಕಮೆಂಟ್ ಎಂದಿದ್ದಾರೆ. ‘ಇದು ಕರ್ನಾಟಕ. ಇಲ್ಲಿನ ಸಂಸ್ಕೃತಿ ನೆನಪಿರಲಿ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಹಲವರು ‘ಆಫರ್ ಸಿಗಲಿ ಎಂದು ಈ ರೀತಿ ಮಾಡಬೇಡಿ’ ಎಂದು ಕೋರಿದ್ದಾರೆ. ಸಾನ್ಯಾ ಐಯ್ಯರ್​ಕಿರುತೆರೆಯಲ್ಲಿ ಸಾಕಷ್ಟು ಬೇಡಿಕೆ ಹೊಂದಿದ್ದಾರೆ.

2012ರಲ್ಲಿ ಜನಪ್ರಿಯ ಧಾರಾವಾಹಿ ‘ಪುಟ್ಟ ಗೌರಿ ಮದುವೆ’ ಮೂಲಕ ಸಾನ್ಯಾ ಕಿರುತೆರೆಗೆ ಕಾಲಿಟ್ಟರು. ಅಲ್ಲಿ ಪುಟ್ಟ ಗೌರಿ ಪಾತ್ರದ ಮೂಲಕ ಪ್ರೇಕ್ಷಕರ ಗಮನ ಸೆಳೆದ ಅವರು, 2015, 2022ರಲ್ಲಿ ಡ್ಯಾನ್ಸಿಂಗ್ ರಿಯಾಲಿಟಿ ಶೋದಲ್ಲಿ ಭಾಗವಹಿಸಿದರು. ಬಳಿಕ ಒಟಿಟಿ ಬಿಗ್ ಬಾಸ್ ಶೋದಲ್ಲಿ ಸ್ಪರ್ಧಿಸಿದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *