SSLC ಫಲಿತಾಂಶ ಪ್ರಕಟ, ಶೇ.83.89 ವಿದ್ಯಾರ್ಥಿಗಳು ಪಾಸ್ – 18ನೇ ಸ್ಥಾನ ಗಳಿಸಿದ ಉಡುಪಿ, 19ನೇ ಸ್ಥಾನಕ್ಕೆ ಕುಸಿದ ದಕ್ಷಿಣ ಕನ್ನಡ

SSLC ಫಲಿತಾಂಶ ಪ್ರಕಟ, ಶೇ.83.89 ವಿದ್ಯಾರ್ಥಿಗಳು ಪಾಸ್ – 18ನೇ ಸ್ಥಾನ ಗಳಿಸಿದ ಉಡುಪಿ, 19ನೇ ಸ್ಥಾನಕ್ಕೆ ಕುಸಿದ ದಕ್ಷಿಣ ಕನ್ನಡ

ನ್ಯೂಸ್ ಆ್ಯರೋ : ಈ ಬಾರಿಯ SSLC ಫಲಿತಾಂಶ ಹೊರಬಿದ್ದಿದ್ದು, ಶೇ. 83.89 ರಷ್ಟು ಫಲಿತಾಂಶ ಹೊರಬಿದ್ದಿದೆ.



ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದ್ದು, ಒಟ್ಟು 7 ಲಕ್ಷದ 619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.



ಪಾಸಾದವರಲ್ಲಿ ಬಾಲಕರು ಶೇ. 80.08 ರಷ್ಟು ಉತ್ತೀರ್ಣರಾಗಿದ್ದಾರೆ. ಶೇಕಡಾ 87.87 ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.



ಚಿತ್ರದುರ್ಗ ಜಿಲ್ಲೆ ಶೇ.96 ದೊಂದಿಗೆ ಈ ಬಾರಿ ಎಸ್‌ ಎಸ್‌ ಎಲ್‌ ಫಲಿತಾಂಶದಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಮಂಡ್ಯ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದು, ಹಾಸನ 3ನೇ ಸ್ಥಾನವನ್ನು ಪಡೆದುಕೊಂಡಿದೆ. ಬೆಂಗಳೂರು ಗ್ರಾ. ಜಿಲ್ಲೆ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ. ಉಡುಪಿ ಜಿಲ್ಲೆ 18ನೇ ಸ್ಥಾನವನ್ನು ಪಡೆದುಕೊಂಡಿದ್ದು, ದಕ್ಷಿಣ ಕನ್ನಡ 19ನೇ ಸ್ಥಾನವನ್ನು ಪಡೆದಿದೆ.



ಎ+ ಗ್ರೇಡ್‌ ನಲ್ಲಿ ಒಟ್ಟು 61,003  ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ರಾಜ್ಯದ 23 ಶಾಲೆಗಳು ಎ ಗ್ರೇಡ್‌ ಪಡೆದುಕೊಂಡಿದೆ. ನಾಲ್ವರು ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಗಳಿಸಿದ್ದಾರೆ. ಸರ್ಕಾರಿ ಶಾಲೆಗಳು ನೂರಕ್ಕೆ ನೂರು ಫಲಿತಾಂಶ ಪಡೆದಿದ್ದು, ಖಾಸಗಿ ಮತ್ತು ಅನುದಾನಿತ ಶಾಲೆಗಳು ಸೇರಿ ಒಟ್ಟು 34 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ.



ಎಸ್‌ ಎಸ್‌ ಎಲ್‌ ಸಿಯಲ್ಲಿ ಟಾಪರ್ಸ್‌ ಆದ ವಿದ್ಯಾರ್ಥಿಗಳು



625 – ಅನುಪಮ ಶ್ರೀಶೈಲ್ ಹಿರಿಹೋಳಿ, ಶ್ರೀಕಂಠೇಶ್ವರ ಪ್ರೌಢಶಾಲೆ, ಸೌದತ್ತಿ, ಬೆಳಗಾವಿ ಜಿಲ್ಲೆ
625- ಭೀಮನಗೌಡ ಹನುಮಂತ ಗೌಡ ಬೀರಾದರ್ ಪಾಟೀಲ್, ಆಕ್ಸ್‌ಫರ್ಡ್‌ ಇಂಗ್ಲೀಷ್‌ ಹೈಸ್ಕೂಲ್, ಮುದ್ದೆಬೀಹಾಳ
625 – ಯಶಸ್ಸ್ ಗೌಡ, ಬಾಲಗಂಗಾಧರ ಸ್ವಾಮಿ ಹೈಸ್ಕೂಲ್ ಚಿಕ್ಕಬಳ್ಳಾಪುರ
625- ಭೂಮಿಕ ಪೈ, ನ್ಯೂ ಮೆಕಾಲೆ ಇಂಗ್ಲೀಷ್ ಸ್ಕೂಲ್, ಹೊಸೂರು ರೋಡ್ , ಬೆಂಗಳೂರು

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *