ತಾನೂರ್ ದೋಣಿ ಅಪಘಾತ – ಸಾವಿನ ಸಂಖ್ಯೆ 22ಕ್ಕೆ ಏರಿಕೆ, ಘಟನೆಗೆ ಕಾರಣ ಏನು?

ನ್ಯೂಸ್ ಆ್ಯರೋ‌ : ಕೇರಳದ ಮಲಪ್ಪುರಂ ಜಿಲ್ಲೆಯ ತೂವಲ್‌ ತೀರಮ್‌ ಕಡಲತೀರದಲ್ಲಿ ಭಾನುವಾರ ಸಾಯಂಕಾಲ ಸಂಭವಿಸಿದ ಬೋಟ್‌ ದುರಂತದಲ್ಲಿ ಸುಮಾರು 22 ಮಂದಿ ಮೃತಪಟ್ಟಿದ್ದಾರೆ. ಘಟನೆ ನಡೆದಾಗ ಹೌಸ್‌ಬೋಟ್‌ನಲ್ಲಿ ಸುಮಾರು 35 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ರಜೆ ಅವಧಿಯಾಗಿದ್ದರಿಂದ ಇವರು ಪ್ರವಾಸಕ್ಕಾಗಿ ಆಗಮಿಸಿದ್ದರು.

ಸಂಜೆ 5 ಗಂಟೆ ಬಳಿಕ ಇಂಥ ಪ್ರವಾಸಿ ಬೋಟ್‌ಗಳ ಸಂಚಾರಕ್ಕೆ ನಿಷೇಧವಿದ್ದರೂ 2 ಅಂತಸ್ತು ಹೊಂದಿರುವ, ಕೇವಲ 2 ಬಾಗಿಲು ಹೊಂದಿರುವ ಹೌಸ್‌ಬೋಟ್‌ ಕಾರ್ಯಾಚರಣೆ ನಡೆಸುತ್ತಿತ್ತು. ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ತುಂಬಿದ್ದ ಕಾರಣ ಸಂಜೆ ಸುಮಾರು 7.40ರ ವೇಳೆಗೆ ಏಕಾಏಕಿ ಬೋಟ್‌ ಮಗುಚಿಕೊಂಡು ದುರ್ಘಟನೆ ಸಂಭವಿಸಿದೆ. ಈ ದುರಂತದಲ್ಲಿ ಮಡಿದವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ವಿಪತ್ತು ನಿರ್ವಹಣಾ ಫಂಡ್‌ನಿಂದ 2 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದಾರೆ. ಇತ್ತ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಡಿದ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರದ ಭರವಸೆ ನೀಡಿದ್ದಾರೆ.

ಮೀನುಗಾರಿಕೆಗೆ ಬಳಸುತ್ತಿದ್ದ ಬೋಟನ್ನು ಪ್ರವಾಸಿ ಬೋಟನ್ನಾಗಿ ಪರಿವರ್ತಿಸಲಾಗಿದ್ದು, ಈ ವೇಳೆ ಯಾವ ನಿಯಮವನ್ನು ಪಾಲಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಾನೂರ್ ನಿವಾಸಿ ನಾಸರ್ ಹೆಸರಿನಲ್ಲಿ ಬೋಟ್ ಇದ್ದು, ಆತನ ವಿರುದ್ಧ ದೂರು ದಾಖಲಿಸಲಾಗಿದೆ. ಸದ್ಯ ಆತ ತಲೆ ಮರೆಸಿಕೊಂಡಿದ್ದಾನೆ.

“ಮಲಪ್ಪುರಂನ ತಾನೂರ್ ದೋಣಿ ಅಪಘಾತದಲ್ಲಿ ಸಂಭವಿಸಿದ ದುರಂತದ ಜೀವಹಾನಿಯಿಂದ ತೀವ್ರ ದುಃಖವಾಗಿದೆ. ರಕ್ಷಣಾ ಕಾರ್ಯಾಚರಣೆಗಳನ್ನು ಪರಿಣಾಮಕಾರಿಯಾಗಿ ಸಂಘಟಿಸಲು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ. ಇದನ್ನು ಸಂಪುಟ ಸಚಿವರು ನೋಡಿಕೊಳ್ಳುತ್ತಿದ್ದಾರೆ. ದುಃಖದಲ್ಲಿರುವ ಕುಟುಂಬಗಳು ಮತ್ತು ಸ್ನೇಹಿತರಿಗೆ ಸಂತಾಪ” ಎಂದು ಪಿಣರಾಯಿ ವಿಜಯನ್ ಟ್ವೀಟ್‌ನಲ್ಲಿ ಹೇಳಿದ್ದಾರೆ.

Related post

ಅಕ್ರಮ ಭ್ರೂಣ ಹತ್ಯೆ ಹಗರಣ; ವೈದ್ಯರ ವಿರುದ್ಧದ ಪ್ರಕರಣ ರದ್ದು ಸಾಧ್ಯವಿಲ್ಲ…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ವ್ಯಾಪಿಸಿರುವ ಅಕ್ರಮ ಭ್ರೂಣ ಹತ್ಯೆ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದೆ. “ಪ್ರಕರಣ…
ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 12-05-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ.…
ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಭಾರಿ ಮಳೆ; ಹವಾಮಾನ ಇಲಾಖೆ…

ನ್ಯೂಸ್ ಆ್ಯರೋ : ಬರದಿಂದ ಕಂಗೆಟ್ಟಿರುವ ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ. ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…

Leave a Reply

Your email address will not be published. Required fields are marked *