ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಇಂದಿನಿಂದಲೇ ನೋಂದಾಯಿಸಿ – ಕೊನೆ ದಿನಾಂಕ ಯಾವಾಗ ಗೊತ್ತಾ?

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಇಂದಿನಿಂದಲೇ ನೋಂದಾಯಿಸಿ – ಕೊನೆ ದಿನಾಂಕ ಯಾವಾಗ ಗೊತ್ತಾ?

ನ್ಯೂಸ್ ಆ್ಯರೋ‌ : ರಾಜ್ಯದ ಈ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಶೇ. 83.8 ಮಂದಿ ಉತ್ತೀರ್ಣರಾಗಿದ್ದಾರೆ. ಪ್ರತಿ ಬಾರಿಯಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ನಾಲ್ಕು ವಿದ್ಯಾರ್ಥಿಗಳು ಪೂರ್ಣಾಂಕದ ಸಾಧನೆ ಮಾಡಿದ್ದಾರೆ.

ಫೇಲ್ ಆದ ವಿದ್ಯಾರ್ಥಿಗಳಿಗೆ ಇನ್ನೊಂದು ಅವಕಾಶವಿದ್ದು, ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಇಂದಿನಿಂದ ಮೇ 15ರ ವರೆಗೆ ಅವಕಾಶ ನೀಡಲಾಗಿದೆ. ಪೂರಕ ಪರೀಕ್ಷೆ ಯಾವಾಗ ನಡೆಯಲಿದೆ ಎನ್ನುವುದನ್ನು ಶಿಕ್ಷಣ ಇಲಾಖೆ ಮುಂದಿನ ವಾರ ತಿಳಿಸಲಿದೆ.

ಜೂನ್​ ನಲ್ಲಿ ಪೂರಕ ಪರೀಕ್ಷೆ ನಡೆಯಲಿದ್ದು, ಜುಲೈನಲ್ಲಿ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ. ಹೀಗಾಗಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಚಿಂತಿಸದೆ ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಿ ಎಂದು ಅಧಿಕಾರಿಗಳು ಹೇಳಿದ್ದಾರೆ.

ಫೇಲಾಗಿದ್ದಾರೆ ಎಂದು ಪೋಷಕರು ಯಾವುದೇ ಕಾರಣಕ್ಕೂ ಮಕ್ಕಳನ್ನು ದೂಷಿಸಬೇಡಿ. ಸಕಾರಾತ್ಮಕ ಮಾತುಗಳೊಂದಿಗೆ ಅವರ ಆತ್ಮ ವಿಶ್ವಾಸ ಹೆಚ್ಚಿಸಿ. ಪರೀಕ್ಷೆಗೆ ಬೇಕಾದ ನೆರವು ನೀಡಿ. ಅವರಿಗೆ ಉತ್ತಮ ವಾತಾವರಣ ನಿರ್ಮಿಸಿ. ಆತ್ಮವಿಶ್ವಾಸ ಹೆಚ್ಚಿಸಿದರೆ ಪೂರಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನೇ ಪಡೆಯಲಿದ್ದಾರೆ ಶಿಕ್ಷಣ ತಜ್ಞರು ಸಲಹೆ ನೀಡಿದ್ದಾರೆ.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆಯ ಫೋಟೋ ಕಾಪಿ ಪಡೆಯಲು ಮೇ 8ರಿಂದ ಮೇ14ರ ವರೆಗೆ ಅವಕಾಶವಿದೆ. ಮರು ಮೌಲ್ಯ ಮಾಪನ ಮಾಡಲು ಮೇ 15ರಿಂದ ಮೇ 21ರ ವರೆಗೆ ಸಮಯ ನಿಗದಿಯಾಗಿದೆ. ಈ ಬಾರಿ 8,35,102 ವಿದ್ಯಾರ್ಥಿಗಳ ಪೈಕಿ 7,00,619 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಚಿತ್ರದುರ್ಗಕ್ಕೆ ಪ್ರಥಮ ಸ್ಥಾನ, ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಕ್ರಮವಾಗಿ ಎರಡು, ಮೂರು, ನಾಲ್ಕನೇ ಸ್ಥಾನ ಪಡೆದಿವೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *