ಪವಿತ್ರಾ ಲೋಕೇಶ್‌ ಜೊತೆಗಿನ ಲಿವ್‌ ಇನ್‌ ರಿಲೇಶನ್‌ಶಿಪ್‌ ಬಗ್ಗೆ ಕೊನೆಗೂ ಬಾಯ್ಬಿಟ್ಟ ನರೇಶ್‌ – ಅಂಬರೀಶ್ ಹೆಸರು ಪ್ರಸ್ತಾಪ ಮಾಡಿದ್ದೇಕೆ ಪವಿತ್ರಾ?

ಪವಿತ್ರಾ ಲೋಕೇಶ್‌ ಜೊತೆಗಿನ ಲಿವ್‌ ಇನ್‌ ರಿಲೇಶನ್‌ಶಿಪ್‌ ಬಗ್ಗೆ ಕೊನೆಗೂ ಬಾಯ್ಬಿಟ್ಟ ನರೇಶ್‌ – ಅಂಬರೀಶ್ ಹೆಸರು ಪ್ರಸ್ತಾಪ ಮಾಡಿದ್ದೇಕೆ ಪವಿತ್ರಾ?

ನ್ಯೂಸ್ ಆ್ಯರೋ‌ : ಟಾಲಿವುಡ್‌ ನಟ ನರೇಶ್‌ ಕೃಷ್ಣ ಹಾಗೂ ಪವಿತ್ರಾ ಲೋಕೇಶ್‌ ಅಭಿನಯದ ಮತ್ತೆ ಮದುವೆ ಸಿನಿಮಾ ಮೇ 26ರಂದು ತೆರೆ ಕಾಣಲಿದೆ. ಪವಿತ್ರಾ ಹಾಗೂ ನರೇಶ್‌ ಸದ್ಯಕ್ಕೆ ಈ ಚಿತ್ರದ ಪ್ರಮೋಷನ್‌ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಕುರಿತು, ವೈಯಕ್ತಿಕ ಜೀವನದ ಕುರಿತು ಅವರು ಮಾತನಾಡಿದ್ದಾರೆ.

ಇದು ನಿಮ್ಮಿಬ್ಬರ ನಿಜ ಜೀವನದ ಕಥೆಯಾ? ಟೀಸರ್‌ ನೋಡಿದರೆ ಇದುವರೆಗೂ ನಡೆದ ಘಟನೆಗಳನ್ನೇ ಅಲ್ಲಿ ತೋರಿಸಲಾಗಿದೆ ಎಂದು ಎಲ್ಲರೂ ಹೇಳುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಪವಿತ್ರಾ ಲೋಕೇಶ್, ”ಒಂದೆರಡು ನಿಮಿಷದ ದೃಶ್ಯ ನೋಡಿ ಯಾವ ನಿರ್ಧಾರಕ್ಕೂ ಬರಬೇಡಿ, ಸಿನಿಮಾ ನೋಡಿದರೆ ನಾವು ಏನು ಹೇಳಲು ಹೊರಟಿದ್ದೇವೆ ಎನ್ನುವುದು ಅರ್ಥವಾಗುತ್ತದೆ. ಸಮಾಜಕ್ಕೆ ಒಂದೊಳ್ಳೆ ಸಂದೇಶ ನೀಡಲು ಹೊರಟಿದ್ದೇವೆ. ಈಗಲೇ ಸಿನಿಮಾ ಕಥೆಯನ್ನು ಹೇಳಲು ಸಾಧ್ಯವಿಲ್ಲ. ನಮ್ಮ ಜೀವನಕ್ಕೂ ಸಿನಿಮಾಗೂ ಏನೂ ಸಂಬಂಧ ಇಲ್ಲ. ಸಿನಿಮಾ ಬೇರೆ, ವೈಯಕ್ತಿಕ ಜೀವನವೇ ಬೇರೆ” ಎಂದು ಸ್ಪಷ್ಟ ಪಡಿಸಿದ್ದಾರೆ.

”ನನ್ನ‌ ವೃತ್ತಿಗೂ ವೈಯಕ್ತಿಕ ವಿಚಾರಕ್ಕೂ ಲಿಂಕ್‌ ಮಾಡುವುದು ನನಗೆ ಇಷ್ಟವಿಲ್ಲ. ನನ್ನನ್ನು ಒಬ್ಬ ನಟಿಯಾಗಿ ಮಾತ್ರ ನೋಡಿ. 1994ನಲ್ಲಿ ಅಂಬರೀಶ್‌ ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದರು. ಅಲ್ಲಿಂದ ಇದುವರೆಗೂ ನಾನು ಯಾವುದೇ ವಿಚಾರವನ್ನು ಮಾಧ್ಯಮಗಳ ಮುಂದೆ ಬಂದು ಹೇಳಿಕೊಂಡಿರಲಿಲ್ಲ. ದುರುದ್ದೇಶಪೂರ್ವಕವಾಗಿ ನನ್ನ ಹೆಗಲ ಮೇಲೆ ಗನ್‌ ಇಟ್ಟು ನರೇಶ್‌ ಅವರನ್ನು ಶೂಟ್‌ ಮಾಡುವ ಪಿತೂರಿ ನಡೆದಿತ್ತು” ಎಂದು ಪವಿತ್ರಾ ಹೇಳಿದ್ದಾರೆ.

ನರೇಶ್‌ ಹೇಳಿದ್ದೇನು?

ನರೇಶ್‌ ಮಾತನಾಡಿ, ”ಹಿಂದೆ ದೇವಾನುದೇವತೆಗಳೇ ಬಹುಪತ್ನಿತ್ವದಲ್ಲಿದ್ದರು. ರಾಜರೂ ಒಂದಕ್ಕಿಂತ ಹೆಚ್ಚು ಮದುವೆ ಆಗುತ್ತಿದ್ದರು. ಅದೆಲ್ಲವನ್ನೂ ನಾವು ಸ್ವೀಕರಿಸಿ, ಒಪ್ಪಿಕೊಂಡಿದ್ದೇವೆ. ಈಗಲೂ ಸುಪ್ರೀಂಕೋರ್ಟ್‌ ಲಿವ್‌ ಇನ್‌ ರಿಲೇಶನ್‌ಶಿಪ್‌ ತಪ್ಪಲ್ಲ ಎಂದು ತೀರ್ಪು ನೀಡಿದೆ. ಅಂತದ್ದರಲ್ಲಿ ನಮ್ಮಿಬ್ಬರ ತಪ್ಪು ಏನಿದೆ? ಪವಿತ್ರಾ ಹಾಗೂ ನಾವಿಬ್ಬರೂ ಲಿವ್‌ ಇನ್‌ ರಿಲೇಶನ್‌ಶಿಪ್‌ನಲ್ಲಿದ್ದೇವೆ” ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *