ದೆಹಲಿ ಮೆಟ್ರೋದಲ್ಲಿ ಹಸ್ತಮೈಥುನ ಮಾಡಿದ ವ್ಯಕ್ತಿ – ಪತ್ತೆಗೆ ಸಹಾಯ ಮಾಡಿ ಎಂದ ಪೊಲೀಸರು

ದೆಹಲಿ ಮೆಟ್ರೋದಲ್ಲಿ ಹಸ್ತಮೈಥುನ ಮಾಡಿದ ವ್ಯಕ್ತಿ – ಪತ್ತೆಗೆ ಸಹಾಯ ಮಾಡಿ ಎಂದ ಪೊಲೀಸರು

ನ್ಯೂಸ್ ಆ್ಯರೋ‌ : ದಿಲ್ಲಿ ಮೆಟ್ರೋದಲ್ಲಿ ಇತ್ತೀಚೆಗೆ ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡಿಕೊಂಡಿರುವ ವಿಡಿಯೋ ವೈರಲ್ ಆಗಿತ್ತು. ಆತನ ವರ್ತನೆ ಸುತ್ತಮುತ್ತಲಿನಲ್ಲಿ ಕುಳಿತಿದ್ದ ಇತರ ಪ್ರಯಾಣಿಕರಿಗೆ ಮುಜುಗರ ಉಂಟು ಮಾಡಿತ್ತು, ಈ ಕಾರಣಕ್ಕೆ ಪಕ್ಕದಲ್ಲೇ ಕುಳಿತ ಪ್ರಯಾಣಿಕರು ದೂರ ಸರಿದಿದ್ದರು. ಇದೀಗ ಈ ಬಗ್ಗೆ ದಿಲ್ಲಿ ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಆ ವ್ಯಕ್ತಿಯನ್ನು ಗುರುತಿಸಲು ಸಹಾಯ ಮಾಡುವಂತೆ ಕೋರಿದ್ದಾರೆ.

ಆತನನ್ನು ಬಂಧಿಸಲು ಈಗಾಗಲೇ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಆತನ ಬಗ್ಗೆ ಮಾಹಿತಿ ಸಿಕ್ಕರೆ 8750871326 ಅಥವಾ 1511 (ನಿಯಂತ್ರಣ ಕೊಠಡಿ) ಅಥವಾ 112 (ಪೊಲೀಸ್ ಸಹಾಯವಾಣಿ)ಗೆ ತಿಳಿಸಿ. ಮಾಹಿತಿ ನೀಡಿವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಮೆಟ್ರೋ ಡಿಸಿಪಿ ಟ್ವೀಟ್ ಮಾಡಿದೆ. ಪೊಲೀಸರು ಸ್ವಯಂ ಪ್ರೇರಿತ ಕ್ರಮ ಕೈಗೊಂಡಿದ್ದು, ಈ ಸಂಬಂಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು ಮತ್ತು ಹಾಡುಗಳು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಘಟನೆ ವಿವರ ;

ಇತ್ತೀಚೆಗೆ ವ್ಯಕ್ತಿಯೊಬ್ಬ ಮೊಬೈಲ್ ಫೋನ್‌ ನೋಡುತ್ತಾ ದಿಲ್ಲಿ ಮೆಟ್ರೋದಲ್ಲಿ ಹಸ್ತಮೈಥುನ ಮಾಡುತ್ತಿರುವ ವೀಡಿಯೋ ಹರಿದಾಡಿತ್ತು. ಈ ಘಟನೆಯನ್ನು ಪ್ರಯಾಣಿಕರೊಬ್ಬರು ವೀಡಿಯೋ ಮಾಡಿಕೊಂಡಿದ್ದರು. ಆ ವ್ಯಕ್ತಿಯ ಕೃತ್ಯವನ್ನು ಅನೇಕರು ಖಂಡಿಸಿದ್ದರು. ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.

ದಿಲ್ಲಿ ಮೆಟ್ರೋದಲ್ಲಿ ಇಂತಹ ಘಟನೆ ಇದೆ ಮೊದಲೇನಲ್ಲ. ಇತ್ತೀಚೆಗೆ ಮಹಿಳೆಯೊಬ್ಬರು ಬ್ರಾ ಮತ್ತು ಮಿನಿಸ್ಕರ್ಟ್‌ ಹಾಕಿಕೊಂಡು ರೈಲಿನಲ್ಲಿ ಪ್ರಯಾಣಿಸುತ್ತಿರುವ ವೀಡಿಯೋ ವೈರಲ್ ಆಗಿತ್ತು. ಸಾಮಾಜಿಕ ಶಿಷ್ಟಾಚಾರ ಮತ್ತು ಪ್ರೋಟೋಕಾಲ್‌ಗಳನ್ನು ಅನುಸರಿಸಲು ಮೆಟ್ರೋ ಮನವಿ ಮಾಡಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *