ಮೇ 28ರಂದು ನೂತನ ಸಂಸತ್ ಭವನ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ – ಹೊಸ ಸಂಸತ್ ಭವನದ ವಿಶೇಷತೆಗಳೇನು?

ಮೇ 28ರಂದು ನೂತನ ಸಂಸತ್ ಭವನ ಪ್ರಧಾನಿ ಮೋದಿಯಿಂದ ಲೋಕಾರ್ಪಣೆ – ಹೊಸ ಸಂಸತ್ ಭವನದ ವಿಶೇಷತೆಗಳೇನು?

ನ್ಯೂಸ್ ಆ್ಯರೋ : ಸೆಂಟ್ರಲ್ ವಿಸ್ಟಾ ಮರು ಅಭಿವೃದ್ಧಿ ಯೋಜನೆಯಡಿ ನಿರ್ವಣವಾಗಿರುವ ಸಂಸತ್ತಿನ ಹೊಸ ಕಟ್ಟಡವನ್ನು ಮೇ 28ರಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸುತ್ತಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನೂತನ ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ.

ಹೊಸ ಸಂಸತ್ ಕಟ್ಟಡದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಹೊಸ ಕಟ್ಟಡವು ಸ್ವಾವಲಂಬಿ ಭಾರತದ ಚೈತನ್ಯವನ್ನು ಸಂಕೇತಿಸುತ್ತದೆ ಎಂದು ಲೋಕಸಭಾ ಕಾರ್ಯಾಲಯ ತಿಳಿಸಿದೆ. ಸುಮಾರು 970 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನೂತನ ಸಂಸತ್ ಭವನ ನಿರ್ಮಿಸಲಾಗಿದೆ.

ನೂತನ ಸಂಸತ್ ಭವನ ಹೇಗಿದೆ?
64,500 ಚದರ ಮೀಟರ್ ವಿಸ್ತೀರ್ಣದಲ್ಲಿ ನಿರ್ಮಿಸಲಾದ ಹೊಸ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ 1,224 ಸಂಸದರು ಕುಳಿತುಕೊಳ್ಳಬಹುದಾಗಿ. ಹೊಸ ಸಂಸತ್ತಿನ ಕಟ್ಟಡವು ಮೂರು ಮುಖ್ಯ ದ್ವಾರಗಳನ್ನು ಹೊಂದಿದೆ, ಇವುಗಳಿಗೆ ಜ್ಞಾನ ದ್ವಾರ, ಶಕ್ತಿ ದ್ವಾರ ಮತ್ತು ಕರ್ಮ ದ್ವಾರ ಎಂದು ಹೆಸರಿಸಲಾಗಿದೆ.

ಈ ಕಟ್ಟಡವು ಸಂಸದರು, ವಿಐಪಿಗಳು ಮತ್ತು ಸಂದರ್ಶಕರಿಗೆ ಪ್ರತ್ಯೇಕ ಪ್ರವೇಶದ್ವಾರಗಳನ್ನು ಹೊಂದಿರುತ್ತದೆ. ಈ ಕಟ್ಟಡದ ಮತ್ತೊಂದು ವಿಶೇಷವೆಂದರೆ ಸಂವಿಧಾನ ಭವನ, ದೇಶದ ಪ್ರಜಾಪ್ರಭುತ್ವ ಪರಂಪರೆಯನ್ನು ಪ್ರದರ್ಶಿಸಲು ನಿರ್ಮಿಸಲಾಗಿದೆ. ಭಾರತದ ಮೂಲ ಸಂವಿಧಾನದ ಪ್ರತಿಯನ್ನು ಸಭಾಂಗಣದಲ್ಲಿ ಇಡಲಾಗಿದೆ.

ಇದು ಗ್ರಂಥಾಲಯ, ಬಹು ಸಮಿತಿ ಕೊಠಡಿಗಳು ಮತ್ತು ಊಟದ ಕೋಣೆಗಳನ್ನು ಸಹ ಹೊಂದಿದೆ. ಹೊಸ ಸಂಸತ್ ಕಟ್ಟಡವು ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಸುಭಾಸ್ ಚಂದ್ರ ಬೋಸ್ ಮತ್ತು ದೇಶದ ಇತರ ಪ್ರಧಾನ ಮಂತ್ರಿಗಳ ಭಾವಚಿತ್ರಗಳನ್ನು ಹೊಂದಿರುತ್ತದೆ. ಕೋನಾರ್ಕ್‌ನ ಸೂರ್ಯ ದೇವಾಲಯದ ಚಕ್ರದ ಮಾದರಿಯೊಂದಿಗೆ ಬಹುಮುಖಿ ಕೌಟಿಲ್ಯನ ಭಾವಚಿತ್ರವನ್ನು ಕಟ್ಟಡದಲ್ಲಿ ಸ್ಥಾಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹೊಸ ಭವನದಲ್ಲೇ ಮುಂಗಾರು ಅಧಿವೇಶನ?
ಜುಲೈನಲ್ಲಿ ಆರಂಭವಾಗುವ ಸಂಸತ್ತಿನ ಮುಂಗಾರು ಅಧಿವೇಶನವನ್ನು ಹೊಸ ಭವನದಲ್ಲಿ ಆಯೋಜಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ಈ ವರ್ಷದ ಕೊನೆಯಲ್ಲಿ ನಡೆಯಬೇಕಿರುವ ಜಿ-20 ದೇಶಗಳ ಸ್ಪೀಕರ್ಗಳ ಸಭೆಯನ್ನು ಹೊಸ ಕಟ್ಟಡದಲ್ಲಿ ಆಯೋಜಿಸುವ ಸಂಭವವಿದೆ.

ಪ್ರಧಾನಿ ನರೇಂದ್ರ ಮೋದಿ ಅವರು 2020ರ ಡಿಸೆಂಬರ್ ನಲ್ಲಿ ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. 2021ರ ಜನವರಿಯಲ್ಲಿ ತ್ರಿಕೋನಾಕೃತಿಯ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಿತ್ತು. 75ನೇ ಸ್ವಾತಂತ್ರ್ಯೋತ್ಸವದ ಹೊತ್ತಿಗೆ ಅಂದರೆ 2022ರ ಆಗಸ್ಟ್​ನಲ್ಲಿ ಮುಗಿಸುವ ಯೋಜನೆಯಿತ್ತು. ಆದರೆ, 9 ತಿಂಗಳು ವಿಳಂಬವಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *