Bangalore : ವಾಕಿಂಗ್ ಹೊರಟಿದ್ದ ಮಹಿಳೆಗೆ ಕಿಸ್ ಕೊಟ್ಟ ಕಾಮುಕ – ಸಿಸಿ ಕ್ಯಾಮೆರಾದಲ್ಲಿ ಕೃತ್ಯ ಸೆರೆ, ವೈರಲ್ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ

20240805 083650
Spread the love

ನ್ಯೂಸ್ ಆ್ಯರೋ : ಬೆಂಗಳೂರು ನಗರದಲ್ಲಿ ಮಹಿಳೆಯರ ಮೇಲೆ ಆಗುವ ದಾಳಿಗಳು ಒಂದೆರಡಲ್ಲ‌. ಸರ ಕಸಿದು ಪರಾರಿಯಾಗೋದು ಇಲ್ಲವೇ ಮೊಬೈಲ್, ಪರ್ಸ್ ಕದ್ದು ಎಸ್ಕೇಪ್ ಆಗೋ ಪ್ರಕರಣಗಳ ನಡುವೆ ಮಹಿಳೆಯೊಬ್ಬರಿಗೆ ವಾಕಿಂಗ್ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಕಿಸ್ ಕೊಟ್ಟು ಲೈಂಗಿಕ ಕಿರುಕುಳ ನೀಡಿದ ಘಟನೆ ಕೋಣನಕುಂಟೆಯ ಕೃಷ್ಣಾ ನಗರದಲ್ಲಿ ನಡೆದಿದೆ.

ತಮ್ಮ ಮನೆಯ ಬಳಿಯೇ ವಾಕಿಂಗ್‌ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ದುಷ್ಕರ್ಮಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ. ಸಂತ್ರಸ್ತ ಮಹಿಳೆಯು ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದಾಗ ದುಷ್ಕರ್ಮಿಯೊಬ್ಬ ಬಳಿ ಬಂದಿದ್ದಾನೆ. ಅವರನ್ನು ಬಲವಂತವಾಗಿ ಹಿಡಿದು ತಬ್ಬಿಕೊಂಡು, ಕಿಸ್‌ ಕೊಟ್ಟಿದ್ದಾನೆ.

ದುಷ್ಕರ್ಮಿಯಿಂದ ಬಿಡಿಸಿಕೊಂಡು ಕೂಗುತ್ತ ಮಹಿಳೆ ಓಡಿದ್ದಾರೆ. ಆದರೆ ಅವರ ಹಿಂದೆಯೇ ಓಡಿ ಬಂದ ದುಷ್ಟ ಮತ್ತೆ ಕಿರುಕುಳ ನೀಡಿ ಓಡಿಹೋಗಿದ್ದಾನೆ.

ಕಳೆದ ಶುಕ್ರವಾರ (ಆಗಸ್ಟ್‌ 2) ಬೆಳಗಿನ ಜಾವ ಮಹಿಳೆಯು ಮನೆಯ ಬಳಿಯಲ್ಲೇ ವಾಕಿಂಗ್‌ ಮಾಡುವಾಗ ಘಟನೆ ನಡೆದಿದೆ ಎನ್ನಲಾಗಿದೆ. ಮಹಿಳೆಯು ಉತ್ತರ ಭಾರತದವರಾಗಿದ್ದು, ಬೆಳಗ್ಗೆ ಕೆಲ ಹೆಣ್ಣುಮಕ್ಕಳು ಸೇರಿ ವಾಕಿಂಗ್‌ ಹೋಗುತ್ತಿದ್ದರು. ಪಕ್ಕದ ಮನೆಯವರು ಬರುವ ಕಾರಣ ಅವರು ರಸ್ತೆ ಬದಿ ಕಾಯುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಕಾಮುಕನ ಅನುಚಿತ ವರ್ತನೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಲೇ ಆರೋಪಿಯನ್ನು ಬಂಧಿಸುವಂತೆ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ. ಜೊತೆಗೆ ಮಹಿಳೆಯರ ಮೇಲಿನ ಇಂತಹ ಅನಾಚಾರಗಳು ಸಿಲಿಕಾನ್ ಸಿಟಿಗೆ ಶೋಭೆಯಲ್ಲ ಎಂದು ಪ್ರಜ್ಞಾವಂತ ನಾಗರೀಕರು ದೂರಿದ್ದಾರೆ.

Leave a Comment

Leave a Reply

Your email address will not be published. Required fields are marked *