Weather Report : ನಾಳೆಯಿಂದ ರಾಜ್ಯಾದ್ಯಂತ ಭಾರೀ ಮಳೆ – 10 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ

Weather Report : ನಾಳೆಯಿಂದ ರಾಜ್ಯಾದ್ಯಂತ ಭಾರೀ ಮಳೆ – 10 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ

ನ್ಯೂಸ್ ಆ್ಯರೋ‌ : ಈ ತಿಂಗಳ ಅಂತ್ಯಕ್ಕೆ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ದಕ್ಷಿಣ ಒಳನಾಡಿನ 10 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಮಂಗಳವಾರದಿಂದ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಮೇ 31 ಮತ್ತು ಜೂನ್ 1ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ರವಿವಾರ ಬಿಸಿಲು ಮತ್ತು ಉರಿಸೆಕೆಯಿಂದ ಕೂಡಿತ್ತು. ಮಂಗಳೂರು ನಗರದಲ್ಲಿ ಬೆಳಗ್ಗೆ ಮೋಡದಿಂದ ಕೂಡಿದ ವಾತಾವರಣ ಇತ್ತು. ಮಂಗಳೂರಿನಲ್ಲಿ 34.6 ಡಿ.ಸೆ. ಗರಿಷ್ಠ ಮತ್ತು 26 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ತುಮಕೂರು, ರಾಮನಗರ ಜಿಲ್ಲೆಗಳಿಗೆ ಮೇ 31 ಮತ್ತು ಜೂನ್ 1ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿಯೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *