ಕರೆಂಟ್ ಬಿಲ್ ಕಟ್ಟದಿದ್ರೆ ಕನೆಕ್ಷನ್ ಕಟ್ ಮಾಡಿ – ಇಂಧನ ಇಲಾಖೆಯಿಂದ ಎಸ್ಕಾಂ ಗಳಿಗೆ ಖಡಕ್ ಸೂಚನೆ..!!

ಕರೆಂಟ್ ಬಿಲ್ ಕಟ್ಟದಿದ್ರೆ ಕನೆಕ್ಷನ್ ಕಟ್ ಮಾಡಿ – ಇಂಧನ ಇಲಾಖೆಯಿಂದ ಎಸ್ಕಾಂ ಗಳಿಗೆ ಖಡಕ್ ಸೂಚನೆ..!!

ನ್ಯೂಸ್ ಆ್ಯರೋ : 200 ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆಯೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇದೀಗ ಯಾವುದೇ ಯೋಜನೆಗಳನ್ನು ಘೋಷಿಸದೆ ಇಕ್ಕಟ್ಟಿನಲ್ಲಿ ಸಿಲುಕಿದೆ‌. ಇದರ ನಡುವೆ ಕರೆಂಟ್ ಬಿಲ್ ಕಟ್ಟದ ಜನತೆಗೆ ಇಂಧನ ಇಲಾಖೆ ಶಾಕ್ ನೀಡಿದ್ದು, ಕರೆಂಟ್ ಬಿಲ್ ಕಟ್ಟದಿದ್ದರೆ ಕನೆಕ್ಷನ್ ಕಟ್ ಮಾಡುವಂತೆ ಎಲ್ಲಾ ಎಸ್ಕಾಂಗಳಿಗೆ ಖಡಕ್ ಸೂಚನೆ ನೀಡಿದೆ..

ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಗೃಹಜ್ಯೋತಿ ಯೋಜನೆ ಇನ್ನೂ ಜಾರಿಯಾಗಿಲ್ಲ. ಆದರೆ ಜನರು ಕರೆಂಟ್ ಬಿಲ್ ಕಟ್ಟಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂಧನ ಇಲಾಖೆ ಕರೆಂಟ್ ಬಿಲ್ ಕಟ್ಟದಿದ್ದರೆ ಕನೆಕ್ಷನ್ ಕಟ್ ಮಾಡುವಂತೆ ರಾಜ್ಯದ ಎಲ್ಲಾ ಎಸ್ಕಾಂಗಳಿಗೆ ಸೂಚನೆ ನೀಡಿದೆ.

ಜನರು ಬಾಕಿ ಇರುವ, ಪ್ರಸ್ತುತ ವಿದ್ಯುತ್ ಬಿಲ್ ಪಾವತಿಸಬೇಕು. ಬಳಸಿರುವ ವಿದ್ಯುತ್ ಬಿಲ್ ಪಾವತಿಸಬೇಕು ಎಂದು ಸೂಚನೆ ನೀಡಿದೆ. ಕರೆಂಟ್ ಬಿಲ್ ಪಾವತಿ ವಿಳಂಬ ಮಾಡಿದ್ರೂ ದಂಡ ಹಾಕಲಾಗುವುದು. 3 ತಿಂಗಳ ಬಿಲ್ ಬಾಕಿ ಕಟ್ಟದಿದ್ದರೆ ಲೈಸೆನ್ಸ್ ರದ್ದು ಮಾಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದೆ.

ಕಾಂಗ್ರೆಸ್ ಚುನಾವಣೆಗೂ ಮುನ್ನ 200 ಯುನಿಟ್ ವಿದ್ಯುತ್ ಉಚಿತ ಎಂದು ಘೋಷಿಸಿತ್ತು. ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಈವರೆಗೂ ಗೃಹಜ್ಯೋತಿ ಯೋಜನೆಯ ಆದೇಶ ಹೊರಡಿಸಿಲ್ಲ. ಆದೇಶ ಬರೋವರೆಗೂ ಕರೆಂಟ್ ಬಿಲ್ ಪಾವತಿಸದಿದ್ದರೆ ದಂಡ ಹಾಕಲಾಗುವುದು ಎಂದು ಇಂಧನ ಇಲಾಖೆ ಎಚ್ಚರಿಕೆ ನೀಡಿದೆ. ಇದರೊಂದಿಗೆ ರಾಜ್ಯದ ಜನರು 200 ಯುನಿಟ್ ಗೃಹಬಳಕೆಯ ಉಚಿತ ಕರೆಂಟ್ ಗಾಗಿ ಮತ್ತಷ್ಟು ಸಮಯ ಕಾಯಬೇಕಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *