‘ವೀಕೆಂಡ್ ವಿತ್ ರಮೇಶ್’ನಲ್ಲಿ ಡಿ.ಕೆ.ಶಿವಕುಮಾರ್ – ಕನಕಪುರದ ಬಂಡೆ, ಟ್ರಬಲ್ ಶೂಟರ್ ಜೀವನ ಪರಿಚಯವಾಗುವ ನಿರೀಕ್ಷೆ

‘ವೀಕೆಂಡ್ ವಿತ್ ರಮೇಶ್’ನಲ್ಲಿ ಡಿ.ಕೆ.ಶಿವಕುಮಾರ್ – ಕನಕಪುರದ ಬಂಡೆ, ಟ್ರಬಲ್ ಶೂಟರ್ ಜೀವನ ಪರಿಚಯವಾಗುವ ನಿರೀಕ್ಷೆ

ನ್ಯೂಸ್ ಆ್ಯರೋ‌ : ರಾಜ್ಯದಲ್ಲಿ ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಈ ಯಶಸ್ಸಿನ ಸೂತ್ರಧಾರರಲ್ಲಿ ಒಬ್ಬರಾದ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇದೀಗ ಅವರು ಜೀ ಕನ್ನಡ ವಾಹಿನಿಯಲ್ಲಿ ವಾರಾಂತ್ಯದಲ್ಲಿ ಪ್ರಸಾರವಾಗುವ ‘ವೀಕೆಂಡ್ ವಿತ್ ರಮೇಶ್’ ಟಾಕ್ ಶೋದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

ರಾಷ್ಟ್ರ ರಾಜಕೀಯದಲ್ಲೂ ಛಾಪು ಮೂಡಿಸಿರುವ ಡಿಕೆಶಿ ಅವರದ್ದು ವರ್ಣ ರಂಜಿತ ಜೀವನ ಅನುಭವ ಪ್ರೇಕ್ಷಕರ ಎದುರು ಅನಾವರಣಗೊಳ್ಳಲಿದೆ. ರಾಜಕೀಯ ಜೀವನದ ಆರಂಭದ ಪುಟ್ಟ ಹೆಜ್ಜೆಯಿಂದ ಹಿಡಿದು ಉಪಮುಖ್ಯಮಂತ್ರಿ ಪಟ್ಟದವರೆಗೆ ಅವರ ಜೀವನ ಕಥನವನ್ನು ತಮ್ಮ ಆಪ್ತರೊಂದಿಗೆ ತೆರೆದಿಡಲಿದ್ದಾರೆ.

ಈ ವಾರದ ಎಪಿಸೋಡ್ ಗೆ ಡಿಕೆಶಿ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ. ಅವರ ಭಾಗದ ಚಿತ್ರೀಕರಣ ಈಗಾಗಲೇ ಮುಗಿದಿದೆ ಎಂದು ವಾಹಿನಿಯ ಮೂಲಗಳು ತಿಳಿಸಿವೆ.

ಇದೇ ವಾರಾಂತ್ಯದ ಎರಡು ದಿನ ಡಿಕೆಶಿ ಎಪಿಸೊಡ್ ಪ್ರಸಾರವಾಗಲಿದ್ದು, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಹಲವು ರಾಜಕೀಯ ಮುಖಂಡರು ನೇರವಾಗಿ ಮತ್ತು ವೀಡಿಯೋ ಮೂಲಕ ಭಾಗವಹಿಸಲಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *