NH 75 : ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ – ಭೂಕುಸಿತ ಜಾಗದಲ್ಲಿ ಮಣ್ಣು ಸಂಪೂರ್ಣ ತೆರವು

IMG 20240807 WA0089
Spread the love

ನ್ಯೂಸ್ ಆ್ಯರೋ : ಶಿರಾಡಿ ಘಾಟ್ ನಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ನೀಡಿದೆ.

ಗುಡ್ಡ ಕುಸಿತದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ತಾತ್ಕಾಲಿಕವಾಗಿ ರಸ್ತೆ ಸಂಚಾರ ಬಂದ್ ಮಾಡಿಸಿತ್ತು. ಇದೀಗ ಗುಡ್ಡ ತೆರವು ಕಾರ್ಯಾಚರಣೆ ಮುಕ್ತಾಯವಾಗಿದ್ದು, ಇಂದಿನಿಂದಲೇ ಎಲ್ಲಾ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ನೀಡಿದೆ.

ಶಿರಾಡಿ ಘಾಟಿಯ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು, ಮಾರನಹಳ್ಳಿ ಬಳಿ ಭಾರೀ ಪ್ರಮಾಣದಲ್ಲಿ ಭೂ ಕುಸಿತವಾಗಿತ್ತು. ಚಲಿಸುತ್ತಿದ್ದ ವಾಹನಗಳ ಮೇಲೆಯೇ ಮಣ್ಣು ಕುಸಿದು ಬಿದ್ದಿದ್ದು, ಮಣ್ಣಿನಡಿ ವಾಹನಗಳು ಸಿಲುಕಿಕೊಂಡಿದ್ದವು. ಈ ಹಿನ್ನೆಲೆ ಜಿಲ್ಲಾಡಳಿತ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿತ್ತು.

ಇದೀಗ ಭೂಕುಸಿತವಾದ ಜಾಗದಲ್ಲಿ ಸಂಪೂರ್ಣ ಮಣ್ಣು ತೆರವು ಮಾಡಲಾಗಿದ್ದು, ಮಳೆಯೂ ಕಡಿಮೆಯಾದ ಹಿನ್ನೆಲೆಯಲ್ಲಿ ಮತ್ತೆ NH 75 ರಸ್ತೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

Leave a Comment

Leave a Reply

Your email address will not be published. Required fields are marked *

error: Content is protected !!