Bantwal : ಅಪ್ರಾಪ್ತ ಬಾಲಕಿಯನ್ನು ಪಾರ್ಕ್ ಗೆ ಕರೆದು ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯ ಬಂಧನ
ನ್ಯೂಸ್ ಆ್ಯರೋ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಳಿಕ ಪ್ರಕರಣ ದಾಖಲಾದ ಬೆನ್ನಲ್ಲೇ ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಅಫೀಕ್ ಯಾನೆ ಮಹಮ್ಮದ್ ಅಫೀಕ್ ( 19) ಎಂದು ಗುರುತಿಸಲಾಗಿದೆ.
ಅಪ್ರಾಪ್ತ ಬಾಲಕಿಯೊಬ್ಬಳಿಗೆ ಆಮಿಷ ತೋರಿಸಿ ಪಾರ್ಕ್ ಒಂದಕ್ಕೆ ಬರುವಂತೆ ಕರೆಸಿದ್ದಲ್ಲದೇ ಅಲ್ಲಿ ಮೂವರು ಆರೋಪಿಗಳು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿತ್ತು.
ಈ ಮೂವರು ಆರೋಪಿಗಳ ಪೈಕಿ ಈಗಾಗಲೇ ಇಬ್ಬರು ಆರೋಪಿಗಳ ಬಂಧನವಾಗಿದ್ದು ಇನ್ನೊಬ್ಬ ಪ್ರಮುಖ ಆರೋಪಿ ನಾಪತ್ತೆಯಾಗಿದ್ದ. ಇದೀಗ ನಾಪತ್ತೆಯಾಗಿದ್ದ ಪ್ರಮುಖ ಆರೋಪಿಯಾಗಿದ್ದ ಅಫೀಕ್ ಯಾನೆ ಮಹಮ್ಮದ್ ಅಫೀಕ್ ಎಂಬಾತನ ಬಂಧನವಾಗಿದೆ.
ಈ ಪ್ರಕರಣದ ಇನ್ನೆರಡು ಆರೋಪಿಗಳಾದ ಮಹಮ್ಮದ್ ಫೈಝಲ್ ಹಾಗು ಲಿಖೇಶ್‌ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅವರು ಜಾಮೀನು ಮೇಲೆ ಬಿಡುಗಡೆಗೊಂಡಿದ್ದಾರೆ ಎನ್ನಲಾಗಿದೆ.
ಪ್ರಕರಣದ ಸೂತ್ರಧಾರಿ, ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮಹಮ್ಮದ್ ಅಫೀಕ್‌ನ ಬಂಧನಕ್ಕೆ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿತ್ತು. ಆರೋಪಿಯನ್ನು ನ್ಯಾಯಾಲಯ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Leave a Comment