Ganga Kalyan Scheme : ರಾಜ್ಯದ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಬೋರ್ವೆಲ್ ಕೊರೆಸಲು 4 ಲಕ್ಷ ಸಬ್ಸಿಡಿ – ಅರ್ಜಿ ಸಲ್ಲಿಸೋದು ಹೇಗೆ? ಬೇಕಾದ ದಾಖಲೆಗಳೇನು?
ನ್ಯೂಸ್ ಆ್ಯರೋ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲಾಗುತ್ತಿದ್ದು, ಅರ್ಹ ರೈತ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.
ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ
- ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.
- ಹಾಲಿ ಜಮೀನುಗಳು ಕೃಷಿ ಚಟುವಟಿಕೆಯಲ್ಲಿರಬೇಕು.
- ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು.
- ಫಲಾನುಭವಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
- ವಯಸ್ಸು 18 ರಿಂದ 60 ವರ್ಷದೊಳಗಿರಬೇಕು.
- ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98 ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1.20 ಲಕ್ಷಗಳು ಒಳಗಿರಬೇಕು.
- ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 02 ಎಕರೆ ಜಮೀನು ಹೊಂದಿರಬೇಕು.
ಇಷ್ಟು ಅರ್ಹತೆ ಇದ್ದರೆ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ 4 ಲಕ್ಷ ಸಬ್ಸಿಡಿಯನ್ನು ನೀಡುವ ಮೂಲಕ ರಾಜ್ಯದ ರೈತರಿಗೆ ಬೋರ್ವೆಲ್ ಕರೆಸಿಕೊಳ್ಳಲು ಅವಕಾಶ ಇದೆ.
ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
- ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಸ್ವಂತ ಜಮೀನಿನ ಪಹಣಿ
- ಅರ್ಜಿದಾರರ ಭಾವಚಿತ್ರ
- ಬಿಪಿಎಲ್ ರೇಷನ್ ಕಾರ್ಡ್
- ಮೊಬೈಲ್ ಸಂಖ್ಯೆ
ಅರ್ಜಿ ಹಾಕಲು ಇಚ್ಛಿಸುವವರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಯನ್ನು ಆಗಸ್ಟ್ 31 ರೊಳಗಾಗಿ ಸಲ್ಲಿಸಬಹುದು.
Leave a Comment