ಮತ್ತೆ ಮೋಡಿ ಮಾಡಲು ಕರಿಜ್ಮಾ ಸಜ್ಜು – ಹೊಸ ಅವತಾರದಲ್ಲಿ ಬರಲಿದೆ ಯುವಕರ ಹಾಟ್ ಫೇವರಿಟ್ ಬೈಕ್

ಮತ್ತೆ ಮೋಡಿ ಮಾಡಲು ಕರಿಜ್ಮಾ ಸಜ್ಜು – ಹೊಸ ಅವತಾರದಲ್ಲಿ ಬರಲಿದೆ ಯುವಕರ ಹಾಟ್ ಫೇವರಿಟ್ ಬೈಕ್

ನ್ಯೂಸ್ ಆ್ಯರೋ‌ : ಒಂದು ಕಾಲದ ಯುವಕರ ಹಾಟ್ ಫೇವರಟ್ ಆಗಿದ್ದ ಹೀರೋ ಕರಿಜ್ಮಾ ಹೊಸ ರೂಪದಲ್ಲಿ ಮಾರುಕಟ್ಟೆಗೆ ಬರಲು ಸಜ್ಜಾಗಿದೆ. ಈ ವರ್ಷದ ಆಗಸ್ಟ್ 29ರಂದು ಬಿಡುಗಡೆ ಮಾಡಲಾಗುವುದು ಎಂದು ಹೀರೋ ಮೋಟೋಕಾರ್ಪ್ ತಿಳಿಸಿದೆ.

ವೈಶಿಷ್ಟ್ಯಗಳು

New Hero Karizma XMR 210

ಇದು ಭಾರತೀಯ ಮಾರುಕಟ್ಟೆಯಲ್ಲಿ Gixxer SF 250 ಮತ್ತು Yamaha YZF-R15 ಬೈಕ್ ಗಳಿಗೆ ಪೈಪೋಟಿ ನೀಡಲಿದೆ. ಮುಂಭಾಗದ ತುದಿ ತೀಕ್ಷ್ಣವಾದ ಸೈಡ್ ಫೇರಿಂಗ್, ಫ್ಯೂಯಲ್ ಟ್ಯಾಂಕ್ ಮತ್ತು ಸ್ಪ್ಲಿಟ್ ಸೀಟ್ ಹೊಂದಿದೆ.

ಹೊಸ ಕರಿಜ್ಮಾ ಸ್ಪೋರ್ಟ್ಸ್ ಬೈಕ್ 210 ಸಿಸಿ ಎಂಜಿನ್ ನೊಂದಿಗೆ ಮಾರುಕಟ್ಟೆಗೆ ಬರಲಿದೆ ಎಂದು ಅಂದಾಜಿಸಲಾಗಿದೆ. ಎಂಜಿನ್ ಅನ್ನು 6 ಸ್ಪಿಡ್ ಗೇರ್ ಬಾಕ್ಸ್ ಗೆ ಜೋಡಿಸಲಾಗಿದೆ.

ಇದು ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗದಲ್ಲಿ ಮೊನೊಶಾಕ್ ಸಸ್ಪೆಕ್ಷನ್ ಒಳಗೊಂಡಿರುವ ಸಾಧ್ಯತೆ ಇದೆ. ಮುಂಭಾಗ ಮತ್ತು ಹಿಂಭಾಗದಲ್ಲಿ ಡಿಸ್ಕ್ ಬ್ರೇಕ್ ಗಳನ್ನು ಹೊಂದಿರಲಿದೆ.

ಬೆಲೆ ಎಷ್ಟಿರಲಿದೆ?

ಈ ಬೈಕ್ ಡ್ಯುಯಲ್-ಚಾನಲ್ ಎಬಿಎಸ್ ಅನ್ನು ಒಳಗೊಂಡಿದೆ. ಇದರ ಬೆಲೆ 1.50 ಲಕ್ಷದಿಂದ 1.80 ಲಕ್ಷ ರೂ.ವರೆಗೆ ಇರಲಿದೆ ಎನ್ನುವ ನಿರೀಕ್ಷೆ ಇದೆ. ಕೆಲವು ವರ್ಷಗಳ ಹಿಂದೆ ಭಾರತದ ಮಾರುಕಟ್ಟೆಯಲ್ಲಿ ಪಾರಮ್ಯ ಮೆರೆದ ಕರಿಜ್ಮಾ ಮತ್ತೆ ಮೋಡಿ ಮಾಡಲಿದೆಯೇ ಎನ್ನುವುದನ್ನು ಕಾದು ನೋಡಬೇಕಿದೆ. ವಿಡಾ ಸರಣಿಯ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಿ ಸದ್ಯ ಹೀರೋ ಮೋಟೋಕಾರ್ಪ್ ಯಶಸ್ವಿಯಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *