ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳಿದ್ದಾರಾ? – ಹಾಗಿದ್ದರೆ ನಿಮ್ಮ ಮಕ್ಕಳು ಸರ್ಕಾರದ ಈ ಎಲ್ಲಾ ಯೋಜನೆಗಳಿಗೆ ಅರ್ಹರು!

ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳಿದ್ದಾರಾ? – ಹಾಗಿದ್ದರೆ ನಿಮ್ಮ ಮಕ್ಕಳು ಸರ್ಕಾರದ ಈ ಎಲ್ಲಾ ಯೋಜನೆಗಳಿಗೆ ಅರ್ಹರು!

ನ್ಯೂಸ್ ಆ್ಯರೋ : ಹೆಣ್ಣು ಮಕ್ಕಳು ಹುಟ್ಟಿದರೆ ಶಾಪ ಎನ್ನುವ ಕೆಟ್ಟ ಕಲ್ಪನೆ ಸಾಕಷ್ಟು ಜನರಲ್ಲಿ‌ ಕೆಲ ವರ್ಷಗಳ ಹಿಂದೆ ಇತ್ತು. ಆದರೆ ಜನರ ಮೂಢ ಕಲ್ಪನೆಗಳನ್ನು ದೂರವಾಗಿಸಿ ಹೆಣ್ಣು ಮಕ್ಕಳನ್ನು ಸಶಕ್ತರನ್ನಾಗಿಸಲು ಕೇಂದ್ರ ಸರ್ಕಾರ ಹಲವು ಉಪಯುಕ್ತ ಯೋಜನೆಗಳನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಶಿಕ್ಷಣ, ಹಕ್ಕು, ಆರೋಗ್ಯ, ತೆರಿಗೆ ವಿನಾಯಿತಿ, ಉತ್ತಮ ಬಡ್ಡಿ ಸೇರಿದಂತೆ ಸರ್ಕಾರ ಜಾರಿಗೊಳಿಸಿರುವ 5 ಮಹತ್ವದ ಯೋಜನೆಗಳ ಮಾಹಿತಿ ಇಲ್ಲಿದೆ.

  1. ಸುಕನ್ಯ ಸಮೃದ್ಧಿ ಯೋಜನೆ

ಈ ಯೋಜನೆಯನ್ನು ಸರ್ಕಾರವು 2015 ರಂದು ಪ್ರಾರಂಭಿಸಿತು. ಈ ಯೋಜನೆಯಲ್ಲಿ ಒಂದು ಆರ್ಥಿಕ ವರ್ಷದಲ್ಲಿ ಕನಿಷ್ಠ 250 ರೂಪಾಯಿಯಿಂದ ಗರಿಷ್ಟ 1.5 ಲಕ್ಷ ದವರೆಗೆ ಹೂಡಿಕೆ ಮಾಡಬಹುದು.
ಬ್ಯಾಂಕ್‌ಗಳಲ್ಲಿ ಹೆಣ್ಣು ಮಗುವಿನ ಹೆಸರಿನಲ್ಲಿ ಸುಕನ್ಯಾ ಸಮೃದ್ಧಿ ಖಾತೆಯನ್ನು ತೆರೆದರೆ ಹೆಣ್ಣು ಮಗುವಿಗೆ 10 ವರ್ಷ ತುಂಬುವವರೆಗೆ ಖಾತೆಯನ್ನು ತೆರೆಯಬಹುದು.

ಈ ಖಾತೆಯ ಮೆಚ್ಯೂರಿಟಿ ಅವಧಿ 21 ವರ್ಷಗಳು, ಅಥವಾ 18 ವರ್ಷ ವಯಸ್ಸಿನ ನಂತರ ಹುಡುಗಿಯ ಮದುವೆಯಾಗುವವರೆಗೆ. ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡುವ ಮೊತ್ತಕ್ಕೆ ವಾರ್ಷಿಕವಾಗಿ 7.6 ಶೇಕಡಾ ಬಡ್ಡಿದರ ದೊರೆಯುತ್ತದೆ.

  1. CBSE ಉಡಾನ್ ಯೋಜನೆ

ಈ ಯೋಜನೆಯನ್ನು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಅಡಿಯಲ್ಲಿ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 2014 ರಲ್ಲಿ ಪ್ರಾರಂಭಿಸಿದೆ. ಫಲಾನುಭವಿ ವಿದ್ಯಾರ್ಥಿನಿ ಐಐಟಿ ಅಥವಾ ಎನ್‌ಐಟಿ ಅಥವಾ ಯಾವುದೇ ಕೇಂದ್ರೀಯ ಅನುದಾನಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಸೀಟು ಪಡೆದರೆ ಮತ್ತು ಉಡಾನ್ ತರಗತಿಗಳಲ್ಲಿ ಕನಿಷ್ಠ 75% ಗಳಿಸಿದರೆ, ಅವರ ಬೋಧನಾ ಶುಲ್ಕಗಳು, ಪ್ರವೇಶ ಶುಲ್ಕಗಳು ಮತ್ತು ಹಾಸ್ಟೆಲ್‌ ಫೀಸ್ ವಿಷಯದಲ್ಲಿ ಹಣಕಾಸಿನ ನೆರವು ದೊರೆಯುತ್ತದೆ.

3.ಬಾಲಿಕಾ ಸಮೃದ್ಧಿ ಯೋಜನೆ

ಈ ಬಾಲಿಕಾ ಸಮೃದ್ಧಿ ಯೋಜನೆಯನ್ನು ಭಾರತ ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಿಸಿದ ಎರಡು ಹೆಣ್ಣು ಮಕ್ಕಳಿಗಾಗಿ ಜಾರಿಗೊಳಿಸಿದೆ. BPL ಕುಟುಂಬಗಳ ಹೆಣ್ಣು ಮಗುವಿಗೆ ಜನ್ಮ ನೀಡುವ ತಾಯಿಗೆ 500/- ರೂಪಾಯಿಗಳನ್ನು ಈ ಯೋಜನೆಯಡಿಯಲ್ಲಿ ನೀಡಲಾಗುತ್ತದೆ.

4.ಧನಲಕ್ಷ್ಮಿ ಯೋಜನೆ

2008ರಲ್ಲಿ ಭಾರತದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯು ಈ ಯೋಜನೆಯನ್ನು ಪ್ರಾರಂಭಿಸಿತು. ನವೆಂಬರ್ 8, 2008 ರ ನಂತರ ಜನಿಸಿದ ಎಲ್ಲಾ ಹೆಣ್ಣು ಮಕ್ಕಳಿಹೆ 5,000 ರೂಪಾಯಿ ದೊರೆಯುತ್ತದೆ. ಹೆಣ್ಣು ಮಗುವಿನ ಜನನ ನೋಂದಣಿಯ ವೇಳೆ 5,000 ರೂ. ನೀಡಲಾಗುವುದು. ನಂತರ ಶಿಶು ಅವಸ್ಥೆಯ ವಿವಿಧ ಹಂತಗಳಲ್ಲಿ 1,250 ರೂ. ಪಾವತಿಸಲಾಗುವುದು. ಜೊತೆಗೆ ಶೈಕ್ಷಣಿಕ ಬೆಳವಣಿಗೆಗೆ ಹಂತ ಹಂತವಾಗಿ ಸಹಾಯಧನ‌ನೀಡಲಾಗುತ್ತದೆ.

5.ಪ್ರೌಢ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪ್ರೋತ್ಸಾಹಕ ಯೋಜನೆ

ಶಿಕ್ಷಣ ಸಚಿವಾಲಯವು 14 ರಿಂದ 18 ವರ್ಷ ವಯಸ್ಸಿನ ಹೆಣ್ಣು ಮಕ್ಕಳ ಶಿಕ್ಷಣವನ್ನು ಉತ್ತೇಜಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೊಳಿಸಿದೆ. ಒಂಬತ್ತನೇ ತರಗತಿಗೆ ದಾಖಲಾದ ಮೇಲೆ 3000 ರೂ ಮೊತ್ತವನ್ನು ಅರ್ಹ ಅವಿವಾಹಿತ ಹುಡುಗಿಯರ ಹೆಸರಿನಲ್ಲಿ ಸ್ಥಿರ ಠೇವಣಿಯಾಗಿ ಠೇವಣಿ ಮಾಡಲಾಗುತ್ತದೆ. ಆ ಹೆಣ್ಣು ಮಗುವಿಗೆ 18 ವರ್ಷ ತುಂಬಿದ ನಂತರ ಹಾಗೂ 10 ನೇ ತರಗತಿಯಲ್ಲಿ ಉತ್ತೀರ್ಣರಾದ ನಂತರ ಅದನ್ನು ಬಡ್ಡಿಯೊಂದಿಗೆ ಅವರಿಗೆ ನೀಡಲಾಗುತ್ತದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *