ಉಡುಪಿ : ಮೊಬೈಲ್ ಕೊಡದ ಸಿಟ್ಟಿಗೆ ಮನೆಯಿಂದ ಹೊರಹೋದ ವಿದ್ಯಾರ್ಥಿ ನಾಪತ್ತೆ – ಕೊನೆಗೆ ಸಿಕ್ಕಿದ್ದು ಮಾತ್ರ ಶವವಾಗಿ..!!
ನ್ಯೂಸ್ ಆ್ಯರೋ : ಮೊಬೈಲ್ ಕೊಡದಿದ್ದಕ್ಕೆ ಸಿಟ್ಟಿಗೆದ್ದು ಮನೆಬಿಟ್ಟು ಹೋದ ಬಳಿಕ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯಲ್ಲಿ ಇಂದು ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಹಿರಿಯಡಕ ಅಂಜಾರು ಪೊಲೀಸ್ ಠಾಣೆಯ ಕ್ವಾಟ್ರಸ್ ಬಳಿಯ ನಿವಾಸಿ ಪ್ರಥಮೇಶ್ (17) ಎಂದು ಗುರುತಿಸಲಾಗಿದೆ.
ಈತ ಹಿರಿಯಡಕ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ನಿನ್ನೆ ಮೊಬೈಲ್ ಕೊಡದಿದ್ದಕ್ಕೆ ಆತ ಮನೆಬಿಟ್ಟು ಹೋಗಿದ್ದ ಎನ್ನಲಾಗಿದೆ. ಬಳಿಕ ಮನೆಯವರು ಹಾಗೂ ಸ್ನೇಹಿತರು ಎಷ್ಟೇ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ.
ಇಂದು ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯ ಬಾವಿಯೊಂದರಲ್ಲಿ ಪ್ರಥಮೇಶ್ ಮೃತದೇಹ ಪತ್ತೆಯಾಗಿದೆ. ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment