ಮಾರುಕಟ್ಟೆಯಲ್ಲಿ ಹೊಸ ಹವಾ ಸೃಷ್ಟಿಸಿದ ಹ್ಯುಂಡೈ ಎಕ್ಸ್‌ಟರ್ – ಬುಕ್ಕಿಂಗ್‌ನಲ್ಲಿ ದಾಖಲೆ ಬರೆದ ಕಾರ್ ನ ಸ್ಪೆಷಾಲಿಟಿ ಏನೇನು?

ಮಾರುಕಟ್ಟೆಯಲ್ಲಿ ಹೊಸ ಹವಾ ಸೃಷ್ಟಿಸಿದ ಹ್ಯುಂಡೈ ಎಕ್ಸ್‌ಟರ್ – ಬುಕ್ಕಿಂಗ್‌ನಲ್ಲಿ ದಾಖಲೆ ಬರೆದ ಕಾರ್ ನ ಸ್ಪೆಷಾಲಿಟಿ ಏನೇನು?

ನ್ಯೂಸ್‌ ಆ್ಯರೋ : ಎಕ್ಸ್‌ಟರ್‌ ಎಸ್‌ಯುವಿ ಕಾರು ಬಿಡುಗಡೆಗೊಂಡ ದಿನದಿಂದ ದಿನಕ್ಕೆ ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿದ್ದು, ಮುಂಗಡ ಬುಕ್ಕಿಂಗ್‌ನಲ್ಲಿ ದಾಖಲೆ ನಿರ್ಮಿಸಿದೆ.

ದೇಶದ ಮೈಕ್ರೋ ಎಸ್‌ಯುವಿ ವಿಭಾಗದಲ್ಲಿ ರಾಜನಾಗಿ ಮೆರೆಯುತ್ತಿದ್ದ ಟಾಟಾ ಪಂಚ್‌ಗೆ ಗೆ ಸ್ಪರ್ಧೆ ನೀಡಲು ಜುಲೈ ತಿಂಗಳಿನಲ್ಲಿ ಎಕ್ಸ್‌ಟರ್‌ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿತ್ತು. ಇದೀಗ ಭರ್ಜರಿ ರೆಸ್ಪಾನ್ಸ್‌ನೊಂದಿಗೆ ಹೊಸ ದಾಖಲೆಯನ್ನು ನಿರ್ಮಿಸುತ್ತಿದೆ.

ಹ್ಯುಂಡೈ ಕಂಪನಿಯ ಪ್ರಮುಖ ಸಬ್-ಫೋರ್-ಮೀಟರ್ ಎಸ್‌ಯುವಿಯಾಗಿರುವ ಎಕ್ಸ್‌ಟರ್‌ ದೊಡ್ಡಮಟ್ಟದಲ್ಲಿ ಜನಪ್ರಿಯತೆಯನ್ನು ಪಡೆದುಕೊಳ್ಳುತ್ತಿದೆ.

ಮೇ. 8ರಂದು ಪ್ರೀ ಬುಕ್ಕಿಂಗ್ ಆರಂಭಗೊಂಡಿದ್ದು ಇದುವರೆಗೆ 65 ಸಾವಿರ ಆರ್ಡರ್‌ ಆಗಿದೆ. ಇನ್ನೂ ಬುಕ್ಕಿಂಗ್ ಆರಂಭಗೊಂಡ ತಿಂಗಳಿನಲ್ಲಿ 10ಸಾವಿರದಿಂದ 50 ಸಾವಿರ ಬುಕ್ಕಿಂಗ್ ಆಗಿದೆ.

ಜುಲೈನಲ್ಲಿ ಕಂಪನಿ, 7,000 ಯುನಿಟ್ ಎಕ್ಸ್‌ಟರ್‌ ಎಸ್‌ಯುವಿಗಳನ್ನು ಮಾರಾಟ ಮಾಡಿತ್ತು. ಸದ್ಯ, ಆಗಸ್ಟ್ ತಿಂಗಳ ಸೇಲ್ಸ್ ವಿವರಗಳು ಲಭ್ಯವಾಗಿಲ್ಲ. ಬೇಡಿಕೆ ಹೆಚ್ಚಾದಂತೆ ಬಹುತೇಕ ಪೆಟ್ರೋಲ್ ರೂಪಾಂತರಗಳು ವಿತರಣೆಯಾಗಲು 48 ರಿಂದ 50 ವಾರ (11 ತಿಂಗಳು), ಸಿಎನ್‌ಜಿ ರೂಪಾಂತರಗಳು 18 ರಿಂದ 24 ವಾರಗಳು ಸಮಯಾವಕಾಶ ಬೇಕಾಗಿದೆ. ಆದರೆ, ರಾಜ್ಯದಿಂದ ರಾಜ್ಯಕ್ಕೆ ಈ ಅವಧಿ ಬೇರೆಯಾಗಿದೆ.

ಹ್ಯುಂಡೈ ಎಕ್ಸ್‌ಟರ್‌ ಎಸ್‌ಯುವಿ, ಇಎಕ್ಸ್, ಇಎಕ್ಸ್ (ಒ), ಎಸ್, ಎಸ್ (ಒ), ಎಸ್ಎಕ್ಸ್, ಎಸ್ಎಕ್ಸ್ (ಒ) ರೂಪಾಂತರಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ಸಿಗುತ್ತದೆ. ಅದಕ್ಕೆ ಅನುಗುಣವಾಗಿ, ₹6 ರಿಂದ ₹10.10 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಜೊತೆಗೆ, ಗ್ರಾಹಕರನ್ನು ಆಕರ್ಷಿಸುವ ವಿವಿಧ ಬಣ್ಣಗಳ ಆಯ್ಕೆಯಲ್ಲೂ ಲಭ್ಯವಿದೆ.

ಈ ಹ್ಯುಂಡೈ ಎಕ್ಸ್‌ಟರ್‌ ಎರಡು ಪವರ್ ಟ್ರೈನ್ ಆಯ್ಕೆಗಳನ್ನು ದೊರೆಯುತ್ತದೆ. ಪೆಟ್ರೋಲ್ ಎಂಜಿನ್ ಬಗ್ಗೆ ತಿಳಿಯೋದಾದರೆ ಇದರ 1.2-ಲೀಟರ್, 4 ಸಿಲಿಂಡರ್ ಪೆಟ್ರೋಲ್ ಎಂಜಿನ್, 81.8 ಬಿಎಚ್‌ಪಿ ಗರಿಷ್ಠ ಪವರ್ ಮತ್ತು 113.8 ಎನ್‌ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5 ಸ್ಪೀಡ್ ಮ್ಯಾನುವಲ್ ಅಥವಾ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಿದೆ. ರೂಪಾಂತರಗಳಿಗೆ ಅನುಗುಣವಾಗಿ 19.2ಕೆಎಂಪಿಎಲ್‌ ರಿಂದ 19.4 ಕೆಎಂಪಿಎಲ್ ಮೈಲೇಜ್ ನೀಡುತ್ತವೆ.

ಸಿಎನ್‌ಜಿ ಕಿಟ್ ಪಡೆದಿರುವ ಕಾರು, ಇದೇ ಎಂಜಿನ್ ಆಯ್ಕೆಯನ್ನು ಹೊಂದಿದೆ. ಆದರೆ, ಕಡಿಮೆ ಕಾರ್ಯಕ್ಷಮತೆ, ಹೆಚ್ಚಿನ ಇಂಧನ ದಕ್ಷತೆ ಪಡೆದಿದೆ. 67.7 ಬಿಎಚ್‌ಪಿ ಪವರ್ ಹಾಗೂ 95.2 ಎನ್‌ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಒಳಗೊಂಡಿದೆ. ಕೇವಲ 5 ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ ಆಯ್ಕೆಯಲ್ಲಿ ಸಿಗುತ್ತದೆ. 27.1 ಕಿ.ಮೀ ಮೈಲೇಜ್ ನೀಡುತ್ತದೆ.

ವೈಶಿಷ್ಟ್ಯದ ವಿಚಾರವಾಗಿ ಹೇಳುವುದಾದರೆ, 8 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಎಲೆಕ್ಟ್ರಿಕ್ ಸನ್‌ರೂಫ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಅನ್ನು ಹೊಂದಿದೆ. ಸುರಕ್ಷತೆ ದೃಷ್ಟಿಯಿಂದ 6 ಏರ್‌ಬ್ಯಾಗ್ಸ್ ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಸಿ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಬಿಸಿ(ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಪಡೆದಿದೆ.

ಇನ್ನು, ಹ್ಯುಂಡೈ ಎಕ್ಸ್‌ಟರ್‌ ಎಸ್‌ಯುವಿಗೆ ಟಾಟಾ ಪಂಚ್ ಮಾತ್ರವಲ್ಲದೆ, ಮಾರುತಿ ಸುಜುಕಿ ಇಗ್ನಿಸ್, ನಿಸ್ಸಾನ್ ಮ್ಯಾಗ್ನೈಟ್, ರೆನಾಲ್ಟ್ ಕಿಗರ್, ಸಿಟ್ರಸ್ ಸಿ3 ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಈ ರೀತಿ ಮಟ್ಟದಲ್ಲಿ ರೆಸ್ಪಾನ್ಸ್‌ ಸಿಗುತ್ತದೆ ಎಂದು ಕಂಪೆನಿಯೂ ನಿರೀಕ್ಷಿಸಿರಲಿಲ್ಲ ಅನಿಸುತ್ತದೆ. ಇನ್ನೂ ಹಬ್ಬಗಳು ಆರಂಭಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬೇಡಿಕೆ ಹೆಚ್ಚಾಗುವ ಸಾಧ್ಯತೆಯಿದೆ.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *