SC/ST ದೌರ್ಜನ್ಯ ಪ್ರಕರಣಗಳಲ್ಲಿ 60 ದಿನದೊಳಗೆ ಚಾರ್ಜ್ ಶೀಟ್ ಸಲ್ಲಿಸಿ – ತಪ್ಪಿದರೆ ಎಸ್ಪಿ, ಡಿಸಿಪಿಗಳೇ ಹೊಣೆ : ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್

SC/ST ದೌರ್ಜನ್ಯ ಪ್ರಕರಣಗಳಲ್ಲಿ 60 ದಿನದೊಳಗೆ ಚಾರ್ಜ್ ಶೀಟ್ ಸಲ್ಲಿಸಿ – ತಪ್ಪಿದರೆ ಎಸ್ಪಿ, ಡಿಸಿಪಿಗಳೇ ಹೊಣೆ : ಸಿಎಂ ಸಿದ್ದರಾಮಯ್ಯ ಖಡಕ್ ವಾರ್ನಿಂಗ್

ನ್ಯೂಸ್ ಆ್ಯರೋ : ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಮತ್ತು ಜಾತಿ ದೌರ್ಜನ್ಯದ ಕೊಲೆ ಪ್ರಕರಣಗಳಲ್ಲಿ 120 ದಿನ ಕಳೆದರೂ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಏಕೆ ದಾಖಲಾಗಿಲ್ಲ ಎಂದು ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೀಗೇ ಆದರೆ ಎಸ್.ಪಿ, ಡಿಸಿಪಿ ಗಳನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಂಕಿ ಅಂಶಗಳನ್ನು ಮುಂದಿಟ್ಟು ಅಧಿಕಾರಿಗಳನ್ನು ತೀವ್ರವಾಗಿ ಪ್ರಶ್ನಿಸಿದರು.

ಕಳೆದ ಐದು ವರ್ಷಗಳಲ್ಲಿ ದಾಖಲಾದ 10893 ಪ್ರಕರಣಗಳಲ್ಲಿ 1100 ಪ್ರಕರಣಗಳಲ್ಲಿ 120 ದಿನಗಳಲ್ಲಿಯೂ ಚಾರ್ಜ್‌ ಶೀಟ್‌ ಹಾಕಿಲ್ಲ. ಇದು ಪರಿಶಿಷ್ಟ ಜಾತಿ, ಪಂಗಡದವರ ಬಗ್ಗೆ ಅಧಿಕಾರಿಗಳ ಅಸಡ್ಡೆಯನ್ನು ತೋರಿಸುತ್ತದೆ. ಇದರಿಂದ ಸಂತ್ರಸ್ತರಿಗೆ ನ್ಯಾಯ ಕೊಡಿಸಿದಂತಾಗುವುದಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.

ಅಪರಾಧ ಪ್ರಕ್ರಿಯಾ ಸಂಹಿತೆ (CRPC) ಅಡಿಯಲ್ಲಿ 90 ದಿನಗಳೊಳಗೆ ಚಾರ್ಜ್‌ ಶೀಟ್‌ ಹಾಕದಿದ್ದರೆ, ಎಸ್ ಸಿ /ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ 60 ದಿನಗಳೊಳಗೆ ಆರೋಪ ಪಟ್ಟಿ ದಾಖಲಾಗದಿದ್ದರೆ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಗುತ್ತದೆ. ಹೀಗೆ ಜಾಮೀನು ಪಡೆದವರಿಗೆ ಕಾನೂನಿನ ಭಯ ಇರುತ್ತದಾ ಎಂದು ಖಾರವಾಗಿ ಪ್ರಶ್ನಿಸಿದರು.

ಕರ್ನಾಟಕ ಪೊಲೀಸ್ ದೇಶದಲ್ಲೇ ನಂಬರ್ ಒನ್ ಎನ್ನುವ ಅಭಿಪ್ರಾಯ ಇದೆ. ಆದರೆ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಶಿಕ್ಷೆ ಪ್ರಮಾಣ ಕೇವಲ 3.44 ಇದೆ. ಅಂದರೆ ಪೊಲೀಸ್ ಇಲಾಖೆ ಕಳೆದ ಐದು ವರ್ಷಗಳಲ್ಲಿ ಎಸ್ ಸಿ/ಎಸ್ ಟಿ ದೌರ್ಜನ್ಯ ಪ್ರಕರಣಗಳ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿತ್ತಾ ಎಂದು ಪ್ರಶ್ನಿಸಿ ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇದಕ್ಕೆ ಎಸ್.ಪಿ. ಹಾಗೂ ಡಿಸಿಪಿಗಳನ್ನು ನೇರವಾಗಿ ಹೊಣೆ ಮಾಡಿ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ವರಿಸಿ ಪ್ರಕರಣಗಳ ತನಿಖಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿ&ಐಜಿಗೆ ಸೂಚನೆ ನೀಡಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *