ರಾಜ್ಯದ ಎಲ್ಲಾ ಬ್ಯಾಂಕ್ ಗಳಲ್ಲಿ ಕನ್ನಡ ಕಡ್ಡಾಯಗೊಳಿಸಲು ಸರ್ಕಾರದ ಚಿಂತನೆ – ಗ್ರಾಹಕರ ಭಾಷೆಯ ಸಮಸ್ಯೆಗೆ ಕಡಿವಾಣ

ರಾಜ್ಯದ ಎಲ್ಲಾ ಬ್ಯಾಂಕ್ ಗಳಲ್ಲಿ ಕನ್ನಡ ಕಡ್ಡಾಯಗೊಳಿಸಲು ಸರ್ಕಾರದ ಚಿಂತನೆ – ಗ್ರಾಹಕರ ಭಾಷೆಯ ಸಮಸ್ಯೆಗೆ ಕಡಿವಾಣ

ನ್ಯೂಸ್ ಆ್ಯರೋ : ಕೆಲ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಉತ್ತರ ಭಾರತದ ಸಿಬ್ಬಂದಿಗಳೇ ಹೆಚ್ಚಾಗಿದ್ದು ಕನ್ನಡಿಗರಿಗೆ ಭಾಷೆಯ ಸಮಸ್ಯೆ ಆಗೋದು ಸಾಮಾನ್ಯ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಬ್ಯಾಂಕ್ ಗಳಲ್ಲೂ ಇನ್ಮುಂದೆ ಕನ್ನಡ ಕಡ್ಡಾಯಗೊಳಿಸಲು ಹೊಸ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ.

ಇಂತದ್ದೊಂದು ಮಹತ್ವದ ಕ್ರಮ ಜಾರಿಗೊಳ್ಳಲು ಸರ್ಕಾರ ಸಿದ್ದತೆ ನಡೆಸಿದ್ದು, ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತ ಇಲಾಖೆಯಲ್ಲಿ ಈಗಾಗಲೇ ಒಂದೆರಡು ಸುತ್ತಿನ ಗಂಭೀರ ಚರ್ಚೆಗಳು ನಡೆದಿದೆ.

ಹೊಸ ನಿಯಮಕ್ಕೆ ಕುರಿತಾಗಿ ಸೂಕ್ತ ನಿಯಮಾವಳಿ ರೂಪಿಸಲು ಚಿಂತನೆ ನಡೆಸಲಾಗಿದ್ದು, ನಿಯಮಗಳು ರೂಪುಗೊಂಡ ಬಳಿಕ ಸರ್ಕಾರದಿಂದ ಅಧಿಕೃತ ಅಧಿಸೂಚನೆ ಹೊರಬೀಳಲಿದೆ ಎನ್ನಲಾಗಿದೆ.

ಹಾಗೊಂದು ವೇಳೆ ಹೊಸ ನಿಯಮ ಜಾರಿಯಾದರೆ ರಾಜ್ಯದ ಎಲ್ಲಾ ಸರ್ಕಾರಿ, ಸರ್ಕಾರೇತರ ಸಂಘ, ಬ್ಯಾಂಕುಗಳಲ್ಲಿ ಕನ್ನಡ ಬಳಕೆ ಕಡ್ಡಾಯವಾಗಲಿದೆ. ಕನ್ನಡ ಗೊತ್ತಿಲ್ಲದ ಜನರಿಗೆ ಬ್ಯಾಂಕ್ ಕನ್ನಡ ಕಲಿಕಾ ಘಟಕ ರಚಿಸಬೇಕು. ಸರ್ಕಾರ ಬೇಕಿದ್ದರೆ ಅಗತ್ಯ ಬೋಧಕ ಅಧ್ಯಯನ ಸಾಮಗ್ರಿ ನೀಡಲಿದೆ. ಇದಕ್ಕೆ ತಗುಲುವ ವೆಚ್ಚವನ್ನು ಆಯಾ ಬ್ಯಾಂಕ್ ವಹಿಸಬೇಕು ಎಂಬ ನಿಯಮಾವಳಿ ತರಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *