ಸೈನ್ಸ್ ಸಿಟಿಯಲ್ಲಿ ಪ್ರಧಾನಿಗೆ ಚಹಾ ತಂದು ಕೊಟ್ಟ ರೋಬೊಟ್ – ವೈರಲ್ ಆಯ್ತು ಅಪರೂಪದ ವಿಡಿಯೋ..!

ಸೈನ್ಸ್ ಸಿಟಿಯಲ್ಲಿ ಪ್ರಧಾನಿಗೆ ಚಹಾ ತಂದು ಕೊಟ್ಟ ರೋಬೊಟ್ – ವೈರಲ್ ಆಯ್ತು ಅಪರೂಪದ ವಿಡಿಯೋ..!

ನ್ಯೂಸ್ ಆ್ಯರೋ : ಪ್ರಧಾನಿ ನರೇಂದ್ರ ಮೋದಿ ಬುಧವಾರ ಗುಜರಾತ್‌ ನ ಅಹಮದಾಬಾದ್‌ ನಲ್ಲಿರುವ ಸೈನ್ಸ್ ಸಿಟಿಯಲ್ಲಿ ರೋಬೋಟ್ ಪ್ರದರ್ಶನಕ್ಕೆ ಭೇಟಿ ನೀಡಿದ್ದು, ಈ ವೇಳೆ ರೋಬೊಟ್ ಪ್ರಧಾನ ಮಂತ್ರಿಗೆ ಚಹಾ ತಂದು ಕೊಡುತ್ತಿರುವ ವಿಡಿಯೋ ವೈರಲ್ ಆಗಿದೆ.

ಮೋದಿ ಅವರು ಟ್ವಿಟರ್ (ಎಕ್ಸ್‌) ನಲ್ಲಿ ಆಸಕ್ತಿದಾಯಕ ವಿಡಿಯೋ ಪೋಸ್ಟ್ ಮಾಡಿದ್ದು, ಇದರಲ್ಲಿ ಅವರು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಪ್ರದರ್ಶನದಲ್ಲಿ ವಿವಿಧ ರೋಬೋಟ್ ಸ್ಟಾಲ್‌ಗಳಲ್ಲಿ ಹಲವಾರು ರೋಬೋಟಿಕ್ ಕ್ರಿಯೆಗಳನ್ನು ವೀಕ್ಷಿಸುತ್ತಿದ್ದಾರೆ. ಈ ವೇಳೆ ಪ್ರಧಾನಿ ಮತ್ತು ಸಿಎಂಗೆ ರೋಬೋಟ್ ಚಹಾವನ್ನು ನೀಡಿದೆ‌.

ನೈಸರ್ಗಿಕ ವಿಕೋಪಗಳು ಅಥವಾ ಅಗ್ನಿ ಅವಘಡಗಳ ಸಂದರ್ಭದಲ್ಲಿ ಮಾನವರಿಗೆ ರೋಬೋಟ್ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ಪ್ರಧಾನಿ ಮೋದಿ ಅವರು ನೋಡಿದ್ದಾರೆಂದು ಈ ಕ್ಲಿಪ್ ತೋರಿಸಿದೆ.

ರೋಬೋಟ್ ಇಂಜಿನಿಯರ್‌ಗಳು ಪಿಎಂ ಮೋದಿಯವರಿಗೆ ರೋಬೋಟ್‌ಗಳು ಹೇಗೆ ಜೀವನದ ವಿವಿಧ ಹಂತಗಳಲ್ಲಿ ಶಕ್ತರಾಗಿ ದೊಡ್ಡ ಪಾತ್ರವನ್ನು ವಹಿಸುತ್ತವೆ ಎಂಬುದನ್ನು ವಿವರಿಸಿದ್ದಾರೆ.
ರೊಬೊಟಿಕ್ಸ್‌ ನೊಂದಿಗೆ ಭವಿಷ್ಯದ ಅಂತ್ಯವಿಲ್ಲದ ಸಾಧ್ಯತೆಗಳನ್ನು ಅನ್ವೇಷಿಸುವುದು! ಎಂದು ಟ್ವಿಟರ್ (ಎಕ್ಸ್) ಪೋಸ್ಟ್‌ ನಲ್ಲಿ ಪಿಎಂ ಮೋದಿ ಬರೆದುಕೊಂಡಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *