ಪ್ರಧಾನಿ ಮೋದಿಯ ಆ ಒಂದು ಭರವಸೆಯಿಂದ 12 ವರ್ಷಗಳ ಬಳಿಕ ಚಪ್ಪಲಿ ಧರಿಸಿದ 71ರ ರೈತ – ಏನಿದು ಸುದ್ದಿ? ಮೋದಿ ಮಾಡಿದ್ದೇನು?

ಪ್ರಧಾನಿ ಮೋದಿಯ ಆ ಒಂದು ಭರವಸೆಯಿಂದ 12 ವರ್ಷಗಳ ಬಳಿಕ ಚಪ್ಪಲಿ ಧರಿಸಿದ 71ರ ರೈತ – ಏನಿದು ಸುದ್ದಿ? ಮೋದಿ ಮಾಡಿದ್ದೇನು?

ನ್ಯೂಸ್ ಆ್ಯರೋ : ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದರಿಂದ 12 ವರ್ಷದ ಬಳಿಕ 71 ವರ್ಷದ ರೈತನೊಬ್ಬ ಕಾಲಿಗೆ ಚಪ್ಪಲಿ ಧರಿಸಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಉತ್ತಮ ಬೆಲೆಯಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ಅರಿಶಿನ ರೈತರು ಬೆಂಬಲ ಬೆಲೆ ಪಡೆಯಲು ತೆಲಂಗಾಣದಲ್ಲಿ ಅರಿಶಿನ ಮಂಡಳಿ ಸ್ಥಾಪಿಸಲು ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದರು.

ಅನೇಕ ಅಧಿಕಾರಿಗಳು, ಜನಪ್ರತಿನಿಧಿಗಳ ಬಳಿ ತೆರಳಿ ಇದಕ್ಕಾಗಿ ಬೇಡಿಕೆ ಇಟ್ಟರು. ಆದರೆ ಪ್ರಯೋಜನವಾಗಲಿಲ್ಲ. ಹೀಗಾಗಿ 2011ರ ನವೆಂಬರ್ 4ರಿಂದ ಚಪ್ಪಲಿ ಧರಿಸದೇ ಇರಲು ಮನೋಹರ ರೆಡ್ಡಿ ಅವರು ನಿರ್ಧರಿಸಿದ್ದರು.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದಲ್ಲಿ ಅರಿಶಿನ ಮಂಡಳಿ ಸ್ಥಾಪನೆ ಮಾಡುವುದನ್ನು ಘೋಷಿಸಿದಾಗ ಮನೋಹರ್ ರೆಡ್ಡಿ ಅವರು ನಿಜಾಮಾಬಾದ್ ಕೃಷಿ ಮಾರುಕಟ್ಟೆ ಕಚೇರಿಯಲ್ಲಿ ಇದ್ದರು. ಕೂಡಲೇ ಅವರು ಸಂತೋಷಗೊಂಡ ಕಚೇರಿಯಲ್ಲಿ ಚಪ್ಪಲಿ ಧರಿಸಿದರು. ತಮ್ಮ ಕನಸು ನನಸಾಗಿದ್ದನ್ನು ಕಂಡು ಅವರ ಕಣ್ಣಾಲಿಗಳು ತುಂಬಿ ಬಂತು.

ಮೋದಿಯವರು ತೆಲಂಗಾಣಕ್ಕೆ ಭೇಟಿ ನೀಡಿ 13,545 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ್ದು, ಈ ವೇಳೆ ಅನೇಕ ಭರವಸೆಗಳನ್ನು ನೀಡಿದರು. ಇದರಲ್ಲಿ ತೆಲಂಗಾಣದಲ್ಲಿ ರಾಷ್ಟ್ರೀಯ ಅರಶಿನ ಮಂಡಳಿ ಸ್ಥಾಪನೆ, ಮುಲುಗು ಜಿಲ್ಲೆಯಲ್ಲಿ ಸಮ್ಮಕ್ಕ – ಸಾರಕ್ಯ ಹೆಸರಲ್ಲಿ ಕೇಂದ್ರೀಯ ಗಿರಿಜನರ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವುದಾಗಿ ಪ್ರಕಟಿಸಿದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *